ನರಸಾಪುರ ಸೊಸೈಟಿ ಚುನಾವಣೆ: ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ ಮೈತ್ರಿಗೆ ನಿರಾಸೆ

Date:

ಕೋಲಾರ: ತಾಲ್ಲೂಕಿನ ನರಸಾಪುರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಹಾಲಿ‌ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ನೇತೃತ್ವದಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಗಳಿಗೆ ನಿರಾಸೆ ಆಗಿದೆ.

ಸಂಘದ ಕಚೇರಿಯಲ್ಲಿ ಬುಧವಾರ ರಾತ್ರಿ ನಡೆದ ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹಾಗೂ ಸೊಸೈಟಿ ಹಾಲಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ನೇತೃತ್ವದ ತಂಡವು ಮತ್ತೊಂದು ಬಾರಿಗೆ ಗೆದ್ದಿದೆ. ಒಟ್ಟು 12 ಸ್ಥಾನಗಳ ಪೈಕಿ 11 ಸ್ಥಾನ ಕಾಂಗ್ರೆಸ್‌ ಬೆಂಬಲಿತರ ಪಾಲಾಗಿವೆ. ಏಕೈಕ ಸ್ಥಾನವನ್ನು ಮೈತ್ರಿಕೂಟ ಗೆದ್ದಿದೆ. ಐದು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಬೆಂಬಲಿತರು ಹಾಗೂ ಮುಖಂಡರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖಾಜಿಕಲ್ಲಹಳ್ಳಿ ಮುನಿರಾಜು, ನಮ್ಮ 11 ಅಭ್ಯರ್ಥಿಗಳು ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೇವೆ. ಸಂಘಕ್ಕೆ ದೊಡ್ಡ ಕಟ್ಟಡ ಕಟ್ಟಿದ್ದು ಇದಕ್ಕೆ ಕಾರಣ. ನನ್ನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 1,005 ವೋಟುಗಳು ಚಲಾವಣೆ ಆಗಿವೆ. ಅದರಲ್ಲಿ 125 ವೋಟು ತಿರಸ್ಕೃತವಾಗಿವೆ. 880 ವೋಟುಗಳ ಪೈಕಿ 670 ವೋಟು ನನಗೆ ಬಂದಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎದುರಾಳಿಗಳು ನಿತ್ಯ ಖ್ಯಾತೆ ತೆಗೆಯುತ್ತಿದ್ದರು. ಈ ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನ ಕಿತ್ತುಕೊಳ್ಳಲು ಸಂಚು ರೂಪಿಸಿದ್ದರು. ಸಂಘದ ಹಣ ಲೂಟ ಮಾಡಲಾಗಿದೆ ಎಂದು ನನ್ನ ಮೇಲೆ ಆರೋಪಿಸಿದರು. ಪ್ರತಿಭಟನೆ ಮಾಡಿದರು. ಆದರೆ, ಈಗ ಜನರು ನಮ್ಮನ್ನು ಗೆಲ್ಲಿಸುವ ಮೂಲಕ ವಿರೋಧಿಗಳನ್ನು ತಿರಸ್ಕರಿಸಿದ್ದಾರೆ. ನನ್ನನ್ನು ಆರೋಪ ಮುಕ್ತರನ್ನಾಗಿ ಮಾಡಿದ್ದಾರೆ ಎಂದರು.

ನನ್ನ ಮೇಲೆ ಸುಳ್ಳು ವಿಡಿಯೊ ಹಾಕಿದ್ದು, ದೂರು ನೀಡಿದ್ದೇನೆ. ನನ್ನನ್ನು ತೇಜೋವದೆ ಮಾಡಿ ಅವಮಾನ ಮಾಡಿದ್ದಾರೆ. 10 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಖಾಜಿಕಲ್ಲಹಳ್ಳಿ ಮುನಿರಾಜು ತಿಳಿಸಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಜರಿದ್ದು ವಿಜಯೋತ್ಸವ ಆಚರಿಸಿದರು.

ಇದನ್ನು ಓದಿದ್ದೀರಾ..? ಜೈಲಿನಲ್ಲಿ ಮೊದಲನೇ ದಿನ ಕಳೆದ ರಾಜೀವ್ ಗೌಡ

ನರಸಾಪುರ ಸಂಘಕ್ಕೆ ಚುನಾಯಿತರು
ಕಾಂಗ್ರೆಸ್‌ ಬೆಂಬಲಿತರು: ಖಾಜಿಕಲ್ಲಹಳ್ಳಿ ಮುನಿರಾಜು‌, ಪೆಮ್ಮಶೆಟ್ಟಹಳ್ಳಿ ಸುರೇಶ್‌, ಚಂದ್ರೇಗೌಡ (ಅಣ್ಣಯ್ಯ), ಎಂ.ನಾರಾಯಣಸ್ವಾಮಿ, ಕೆ.ಕೆ.ಮಂಜು (ಸಾಮಾನ್ಯ ಕ್ಷೇತ್ರ), ಆಂಜಿನಮ್ಮ, ಜಮುನಾ (ಮಹಿಳಾ ಕ್ಷೇತ್ರ), ಗಣೇಶ್‌, ಮೋಟಪ್ಪ (ಬಿಸಿಎಂ ಎ ಕ್ಷೇತ್ರ), ಆದಿಮೂರ್ತಿ (ಎಸ್‌ಸಿ ಕ್ಷೇತ್ರ), ವೆಂಕಟಪ್ಪ (ಎಸ್‌ಟಿ ಕ್ಷೇತ್ರ).
ಮೈತ್ರಿಕೂಟ: ಚಂದ್ರಶೇಖರ್ (ಷೇರುದಾರರ ಕ್ಷೇತ್ರ–ಸಾಲಗಾರರಲ್ಲದ ಕ್ಷೇತ್ರ)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...