ನರಸಿಂಹರಾಜಪುರ | ಸಾಗುವಾನಿ ಮರ ಕಳ್ಳತನ; ಆರು ಮಂದಿ ಆರೋಪಿಗಳ ಬಂಧನ

Date:

ಸಾಗುವಾನಿ ಮರ ಕಡಿದು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಗುಂಪನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿ ಅಳೇಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತರ ಪೈಕಿ ಮಿಥುನ್ ಎಂ ಎಸ್ (27) ಹಾಗೂ ಕೃಷ್ಣ(36) ಎಂಬ ಇಬ್ಬರನ್ನೂ ಶುಕ್ರವಾರ ತಡರಾತ್ರಿಯೇ ಸಾಗುವಾನಿ ನೆಡುತೋಪಿನಲ್ಲಿಯೇ ಬಂಧಿಸಲಾಗಿತ್ತು. ಬಳಿಕ ನಾಲ್ವರನ್ನು ಶನಿವಾರ ಬೆಳಗ್ಗೆ ಬಂಧಿಸಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಶನಿವಾರ ಬಂಧನಕ್ಕೊಳಗಾದ ಆರೋಪಿಗಳನ್ನು ಕೌಶಿಕ್, ಅಶ್ವಥ್, ರಿಷಿಕಾಂತ್, ಅಕ್ಷಯ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಬಾಳೆಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಇನ್ನಿಬ್ಬರು ಆರೋಪಿಗಳಾದ ನವೀನ್ ಆಚಾರಿ, ಆಶಿಕ್ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಪರಾರಿಯಾದವರು ಗಡಿಕಲ್ ನಿವಾಸಿಗಳೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಳೆಹೊನ್ನೂರು ಸಮೀಪ ಅಳೇಹಳ್ಳಿ ಗ್ರಾಮ, 8ನೇ ಮೈಲಿಕಲ್ಲು ವ್ಯಾಪ್ತಿಯ ಕೂಸ್ಕಲ್ ಮೀಸಲು ಅರಣ್ಯ ಪ್ರದೇಶ ಸಾಗುವಾನಿ ನೆಡುತೋಪಿನಲ್ಲಿ ಮಧ್ಯರಾತ್ರಿ ಎಂಟು ಜನ ಅಕ್ರಮವಾಗಿ ಐದು ತುಂಡು ಸಾಗುವಾನಿ ಮರ ಕಡಿದು ಸಾಗಿಸುತ್ತಿದ್ದರು.

ಅಕ್ರಮವಾಗಿ ಸಾಗುವಾನಿ ಮರ ಕಡಿದು, ಸಾಗಿಸುತ್ತಿರುವ ಸಮಯದಲ್ಲಿ ಇಬ್ಬರು ಆರೋಪಿಗಳನ್ನು ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು, ಚಿಕ್ಕಅಗ್ರಹಾರ ವಲಯ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.

ಮಧ್ಯರಾತ್ರಿಯಲ್ಲಿ ಅಕ್ರಮವಾಗಿ ಕಳ್ಳತನ ಮಾಡಿ ಬೆಲೆ ಬಾಳುವ ಸಾಗುವಾನಿ ಮರವನ್ನು ಎಂಟು ಜನ ಸೇರಿಕೊಂಡು ಮಹೇಂದ್ರ ಜೀತೊ ವಾಹನದಲ್ಲಿ ಸಾಗುವಾನಿ ಮರವನ್ನು ಸಾಗಿಸುತ್ತಿದ್ದರು. ಮಾಹಿತಿ ತಿಳಿದ ತಕ್ಷಣ ಕೂಡಲೇ ಆರೋಪಿಗಳನ್ನು ಬಂಧಿಸಿ ಸಾಗುವಾನಿ ಮರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿದ್ದೀರಾ:ಚಿಕ್ಕಮಗಳೂರು | ಅ. 30ರಿಂದ ದೇವೀರಮ್ಮ ದೀಪೋತ್ಸವ: ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು

“ಎಂಟು ಜನರಲ್ಲಿ ಆರು ಮಂದಿಯನ್ನು ಬಂಧಿಸಿದ್ದೇವೆ. ಇಬ್ಬರು ತಪ್ಪಿಸಿಕೊಂಡಿದ್ದಾರೆ. ಐದು ತುಂಡು ಸಾಗುವಾನಿ ಮರವನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಲಾಗಿದೆ” ಎಂದು ವಲಯ ಅರಣ್ಯಾಧಿಕಾರಿ ಆದರ್ಶ್‌ ಅವರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ವಲಯ ಅರಣ್ಯಾಧಿಕಾರಿ ಆದರ್ಶ್‌ ಎಂ. ಪಿ ಅವರ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿ ನಂದೀಶ ಹೆಚ್. ಬಿ, ರಂಗನಾಥ ಆರ್ ಅತಾಲಟ್ಟಿ ಹಾಗೂ ಗಸ್ತು ಅರಣ್ಯ ಪಾಲಕ ಪ್ರತಾಪ್ ಆರ್, ರಂಗನಾಥ ಕೆ. ಹೆಚ್, ನಾಗರಾಜ ಎಂ. ಡಿ, ಲೋಹಿತ್, ಚಾಲಕ ನಾಗರಾಜ್ ಮತ್ತು ಪವನ್ ದಾಳಿಯ ವೇಳೆ ತಂಡಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...