ಹುಮನಾಬಾದ್‌ | ನರೇಗಾ ಕೂಲಿ ನೀಡದ ಅಧಿಕಾರಿಗಳ ವಿರುದ್ಧ ತಾ.ಪಂ. ಎದುರು ಧರಣಿ

Date:

ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಕೆಲಸ ನೀಡದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ) ಕಾರ್ಯಕರ್ತರು ಸೋಮವಾರ ಹುಮನಾಬಾದ್‌ ತಾಲ್ಲೂಕು ಪಂಚಾಯಿತಿ ಎದುರು ಧರಣಿ ನಡೆಸುತ್ತಿದ್ದಾರೆ.

ತಾಲ್ಲೂಕಿನ ಸೀತಾಳಗೇರಾ, ನಿಂಬೂರು, ಸಿಂಧನಕೇರಾ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಮಿಕರು ಕೆಲಸದ ಬೇಡಿಕೆ ಅರ್ಜಿ ಸಲ್ಲಿಸಲಾಗಿದೆ. ಆದರೆ ಅಧಿಕಾರಿಗಳು ನರೇಗಾ ಅಡಿ ಕೆಲಸ ನೀಡಲು ಸ್ಪಂದಿಸುತ್ತಿಲ್ಲ. ಕೆಲಸ ನೀಡದ ಕಾರ್ಮಿಕರಿಗೆ ನಿರುದ್ಯೋಗ ಭತ್ತೆ ನೀಡುವಂತೆ ತಾ.ಪಂ.ಗೆ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ ಎಂದು ಕಾರ್ಮಿಕರು ದೂರಿದರು.

ಸಿಂಧನಕೇರಾ ಗ್ರಾಮ ಪಂಚಾಯಿತಿಯ ಹಣಕುಣಿ ಗ್ರಾಮದ 30 ಕಾರ್ಮಿಕರು ಕೆಲಸ ನೀಡುವಂತೆ ಅರ್ಜಿ ಸಲ್ಲಿಸಲು ಪಂಚಾಯಿತಿಗೆ ತೆರಳಿದ್ದಾಗ ಪಿಡಿಒ ಅರ್ಜಿ ಸ್ವೀಕರಿಸದೇ ಬೇಜವ್ದಾರಿಯಾಗಿ ವರ್ತಿಸಿದ್ದಾರೆ. ಬಳಿಕ ಅರ್ಜಿ ಸ್ವೀಕರಿಸಿದರೂ ಇಲ್ಲಿಯವರೆಗೆ ಕೆಲಸ ನೀಡಿಲ್ಲ ಎಂದು ಪ್ರತಿಭಟನಾ ನಿರತ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಆರ್ಥಿಕ ಬಲವರ್ಧನೆಗೆ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುತ್ತಿದೆ. ಆದರೆ ಅಧಿಕಾರಿಗಳು ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ಕೆಲಸ ನೀಡದೇ ಕಾರ್ಮಿಕರ ಹಕ್ಕು ಕಸಿದುಕೊಳ್ಳುತ್ತಿದ್ದಾರೆ. ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಕೆಲಸ ನೀಡಬೇಕು. ನಿರುದ್ಯೋಗ ಭತ್ತೆ ಕೊಡಬೇಕು. ಕಾರ್ಮಿಕರನ್ನು ನಿರ್ಲಕ್ಷಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದರು.

ಧರಣಿ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ ದೀಪಿಕಾ ನಾಯ್ಕರ್‌ ಭೇಟಿ ನೀಡಿದ್ದಾರೆ. ಆದರೆ ಪ್ರತಿಭಟನಾಕಾರರ ಬೇಡಿಕೆಗಳಿಗೆ ಇಒ ಸ್ಪಂದಿಸದ ಕಾರಣ ಧರಣಿ ಮುಂದುವರಿದಿದ್ದು,‌ ನಮ್ಮ ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 141 ಕೊಲೆ : ಗೃಹ ಸಚಿವ ಜಿ.ಪರಮೇಶ್ವರ

ಪ್ರತಿಭಟನೆಯಲ್ಲಿ ಜಿಲ್ಲಾ ಗ್ರಾಕೂಸ್‌ ಸಂಘಟನೆಯ ಜಿಲ್ಲಾ ಕಾರ್ಯಕರ್ತೆ ಸಪ್ನಾದೀಪ, ತಾಲ್ಲೂಕು ಪ್ರಮುಖರಾದ ಗೀತಾ ಡಿಗಾರೆ, ರೇಷ್ಮಾ, ರಾಜಕುಮಾರ್‌, ಸುರೇಖಾ, ಸುಶೀಲಾ ಸೇರಿದಂತೆ ಸಂಘಟನೆಯ ಕಾರ್ಮಿಕರು ಪಾಲ್ಗೊಂಡಿದ್ದಾರೆ.

ವರದಿ : ಲೋಕೇಶ್ ಕಾಂಬಳೆ, ಸಿಟಿಜನ್ ಜರ್ನಲಿಸ್ಟ್ ಭಾಲ್ಕಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...