ಧಾರವಾಡ | ಎಸ್‌ಯುಸಿಐ ಅಭ್ಯರ್ಥಿ ಪರ ನರೇಗಾ ಕೂಲಿ ಕಾರ್ಮಿಕರ ಪ್ರಚಾರ

Date:

  • ಎಸ್‌ಯುಸಿಐ ಪಕ್ಷದ ಅಭ್ಯರ್ಥಿ ಮಧುಲತಾ ಗೌಡರ್ ಪರ ಪ್ರಚಾರ
  • ಜನಪರ ನಿಲುವುಗಳಿಗಾಗಿ ಹೋರಾಡುತ್ತಿರುವವರ ಗೆಲ್ಲಿಸಲು ಮನವಿ

ಧಾರವಾಡ ಗ್ರಾಮೀಣ ಕ್ಷೇತ್ರದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಮಧುಲತಾ ಗೌಡರ್ ಪರ ನರೇಗಾ ಕೂಲಿ ಕಾರ್ಮಿಕರು ಮುಗುಳಿ, ಶಿಂಗನಹಳ್ಳಿ, ತೇಗೂರಿ ಹಳ್ಳಿಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಸಂಘಟನೆ ಸದಸ್ಯ ಹನುಮೇಶ ಹುಡೇದ ಮಾತನಾಡಿ, “ಹೋರಾಟಗಳಿಂದಲೇ ಹೊರಹೊಮ್ಮಿದ ಅಭ್ಯರ್ಥಿ ಮಧುಲತಾ ಈ ಮೊದಲು ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದವರು. ಹೋರಾಟದಿಂದ ಜನರ ಬದುಕು ಬದಲಾಯಿಸುವ ಪಣತೊಟ್ಟ ಅವರು ಉಪನ್ಯಾಸಕಿ ವೃತ್ತಿಗೆ ರಾಜೀನಾಮೆ ನೀಡಿ, ಜನಪರ ನಿಲುವುಗಳಿಗಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಅವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸಿ” ಎಂದು ಕರೆ ನೀಡಿದರು.

ಜಿಲ್ಲಾ ಸಮಿತಿ ಸದಸ್ಯೆ ದೀಪಾ ಧಾರವಾಡ ಮಾತನಾಡಿ, “ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಸಂಘಟನೆಗಾಗಿ ವೈಯಕ್ತಿಕ ಬದುಕನ್ನು ಬಿಟ್ಟು, ಸಂಘಟನೆಯ ಬೆಳವಣಿಗೆ ಹಾಗೂ ಬಂಡವಾಳಶಾಹಿಗಳ ಜನವಿರೋಧಿ ನೀತಿಗಳಿಂದ ಜನರನ್ನು ಮುಕ್ತರನ್ನಾಗಿಸಲು ಹೋರಾಡುತ್ತಿದ್ದಾರೆ. ಇಂತಹ ಜನಪರ ನೀತಿಯ ಪರವಾದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಮಂಡ್ಯ | ಪ್ರಮುಖರ ಸಭೆ ಕರೆದು ಬೆಂಬಲ ಕೋರಿದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಮಧುಚಂದನ್

ಸುಡುಬಿಸಿಲಿನ ನಡುವೆಯೂ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕೂಲಿ ಕಾರ್ಮಿಕರು ಸಂಘಟನೆಯ ವಿಷಯ, ಪ್ರಸ್ತುತ ರಾಜಕೀಯ ವಿಷಯದ ಕುರಿತು ಚರ್ಚೆಯನ್ನು ಕುತೂಹಲದಿಂದ ಆಲಿಸಿದರು. ಮಧುಲತಾ ಅವರನ್ನು ಬೆಂಬಲಿಸುವುದಾಗಿ ವಾಗ್ದಾನ ಮಾಡಿದರು.

ಸಭೆಯಲ್ಲಿ ಪಕ್ಷದ ಸದಸ್ಯೆ ಶಶಿಕಲಾ ಮೇಟಿ ಮತ್ತು ನರೇಗಾ ಕೂಲಿ ಕಾರ್ಮಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...