ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ನರೇಂದ್ರ ಮೋದಿ: ಸಚಿವ ಆರ್​ ಬಿ ತಿಮ್ಮಾಪುರ ಟೀಕೆ

Date:

  • ‘ಮೋದಿ, ಶಾ ಅವರು ರಾಜ್ಯ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಕರೆಯುತ್ತಿಲ್ಲ’
  • ರಾಜ್ಯ ಬಿಜೆಪಿ ನಾಯಕರನ್ನು ಹೈಕಮಾಂಡ್​ ತಿರಸ್ಕರಿಸಿದೆ: ಆರ್​ ಬಿ ತಿಮ್ಮಾಪುರ

ರಾಜ್ಯ ಬಿಜೆಪಿ ನಾಯಕರು ತಮ್ಮನ್ನು ಕರೆದು ವಿರೋಧ ಪಕ್ಷದ ನಾಯಕನನ್ನಾಗಿ ಮಾಡುತ್ತಾರೆ ಎಂದು ಭಾವಿಸಿ ಮೋದಿ, ಅಮಿತ್ ಶಾ ಹಾಗೂ ಆರ್‌ಎಸ್‌ಎಸ್‌ ಮೆಚ್ಚಿಸಲು ಹಾದಿ ಬೀದಿಗಳಲ್ಲಿ ಕಿರುಚಾಡುತ್ತಿದ್ದಾರೆ ಎಂದು ಅಬಕಾರಿ ಸಚಿವ ಆರ್​ ಬಿ ತಿಮ್ಮಾಪುರ ವ್ಯಂಗ್ಯವಾಡಿದರು.

ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಆದರೆ ಮೋದಿ ಮತ್ತು ಶಾ ಅವರು ರಾಜ್ಯ ಬಿಜೆಪಿ ನಾಯಕರನ್ನು ಒಳಗೂ ಕರೆಯುತ್ತಿಲ್ಲ. ಗೃಹ ಸಚಿವ ಅಮಿತ್ ಶಾ ಒಳಗೆ ಕರಿಯುತ್ತಿಲ್ಲ. ಇದರ ಅರ್ಥ ರಾಜ್ಯ ಬಿಜೆಪಿ ನಾಯಕರನ್ನೇ ಹೈಕಮಾಂಡ್​ ತಿರಸ್ಕರಿಸಿದೆ” ಎಂದರು.

“ಬಿಜೆಪಿ ಹೈಕಮಾಂಡ್ ಈವರೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ರಾಜ್ಯ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಹೈಕಮಾಂಡ್​ ಬಿಟ್ಟುಕೊಂಡಿಲ್ಲ. ಇದರಿಂದ ರಾಜ್ಯ ಬಿಜೆಪಿ ನಾಯಕರು ಗಾಬರಿಗೊಂಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮಣಿಪುರ ಗಲಭೆ; ಸರ್ಕಾರಗಳು ಮತ್ತು ಕೋರ್ಟುಗಳು ವಿವೇಚನೆ ಕಳೆದುಕೊಂಡವೇ?

ಮೋದಿ ಅತ್ಯಂತ ಕೆಟ್ಟ ಪ್ರಧಾನಿ

“ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣ ಮಣಿಪುರದಲ್ಲಿ ನಡೆಯಿತು. ಇದು ಅತ್ಯಂತ ನೋವಿನ ಘಟನೆ. ಇಂತಹ ಪೈಶಾಚಿಕ ಕೃತ್ಯವನ್ನು ಖಂಡಿಸುತ್ತೇನೆ. ಇಂತಹ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏನು ಕ್ರಮಕೈಗೊಂಡಿದ್ದಾರೆ? ಇಂತಹ ಪ್ರಧಾನಿ ಇದ್ದರೆ ಬಡವರು, ಹಿಂದುಳಿದವರು ಬದುಕುವುದು ಹೇಗೆ? ಅವಮಾನಕ್ಕೀಡಾದ ಸಂತ್ರಸ್ತೆಗೆ ಸಾಂತ್ವನದ ಮಾತುಗಳು ಸಹ ಹೇಳಿಲ್ಲ. ಇದು ನಾಚಿಕೆಗೇಡಿನ ಸಂಗತಿ. ಮೋದಿ ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ” ಎಂದರು.

ಮೊಸರಿನ ಮೇಲೆ ಜಿಎಸ್‌ಟಿ

ಹಾಲಿನ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಅಭಿವೃದ್ದಿಗಾಗಿ ತೆರಿಗೆ ಹಾಕುವುದು, ಜನಸಾಮಾನ್ಯರ ತೆರಿಗೆಯಿಂದ ಅಭಿವೃದ್ಧಿ ಕೆಲಸ ಮಾಡುವುದು ನಡೆಯುತ್ತಿರುತ್ತದೆ. ಈ ಹಿಂದೆ ಕೇಂದ್ರ ಸರ್ಕಾರ ಮೊಸರಿನ ಮೇಲೆ ಜಿಎಸ್​ಟಿ ಹಾಕಿತ್ತಲ್ಲ. ಇದಕ್ಕೆ ಬಿಜೆಪಿ ನಾಯಕರು ಉತ್ತರಿಸಲಿ, ಆಮೇಲೆ ನಾವು ಹಾಲಿನ ದರ ಏರಿಕೆಗೆ ಉತ್ತರಿಸುತ್ತೇವೆ. ಪೆಟ್ರೋಲ್​, ಡೀಸೆಲ್​, ಅಡುಗೆ ಎಣ್ಣೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಮೋದಿ ಸರ್ಕಾರ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...