ಉಡುಪಿ | ವರ್ಷಗಳೇ ಕಳೆದರೂ ಕಾಮಗಾರಿ ಮುಗಿಯದ ರಾಷ್ಟ್ರೀಯ ಹೆದ್ದಾರಿ, ರಸ್ತೆಗಿಳಿದ ಸ್ಥಳಿಯರು

Date:

ರಾಷ್ಟ್ರೀಯ ಹೆದ್ದಾರಿ 169ಎ ಮಣಿಪಾಲದಿಂದ ಪರ್ಕಳ ಸಂಪರ್ಕಿಸುವ ನಡುವೆ ಈಶ್ವರನಗರ ಕೆಳಪರ್ಕಳ ಭಾಗದಲ್ಲಿ ಕಾಮಗಾರಿ ಮೊಟಕುಗೊಂಡು ಹಲವು ವರ್ಷಗಳೇ ಕಳೆದಿವೆ. ತಾಂತ್ರಿಕ ಮತ್ತು ಕಾನೂನು ಕಾರಣಗಳಿಂದ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಮರು ಆರಂಭಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯದ ವಿರುದ್ಧ ಜನರು ಆಕ್ರೋಶಿತರಾಗಿದ್ದಾರೆ.

ಈ ನಡುವೆ, ಪರ್ಯಾಯ ರಸ್ತೆಯು ವಾಹನ ಸಂಚರಿಸಲಾಗದಷ್ಟು ಹದಗೆಟ್ಟು ಹೋಗಿದೆ. ಇದರಿಂದ ರೋಸಿ ಹೋಗಿರುವ ಸ್ಥಳೀಯರು, ನಿತ್ಯ ವಾಹನ ಸವಾರರು ಇದೀಗ ಪ್ರತಿಭಟನೆಗೆ ಮುಂದಾಗಿದ್ದಾರೆ. ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವ ವಿಚಾರವನ್ನು ಸಂಬಂಧ ಜಿಲ್ಲಾಡಳಿತ, ಅಧಿಕಾರಿಗಳು, ಜನಪ್ರತಿನಿಧಿಗಳು ಗಂಭೀರ ವಾಗಿ ಪರಿಗಣಿಸಿಲ್ಲ ಮತ್ತು ಪರ್ಯಾಯ ರಸ್ತೆಯಲ್ಲಿ ನಿತ್ಯ ಸಂಚಾರ ಸಮಸ್ಯೆಯಾಗುತ್ತಿದ್ದರೂ ನಗರಸಭೆ, ರಾ.ಹೆ. ಪ್ರಾಧಿಕಾರ ಕಣ್ಮುಚ್ಚಿ ಕುಳಿತಿದೆ ಎಂಬ ಆರೋಪ ಸ್ಥಳೀಯವಾಗಿ ಕೇಳಿ ಬರುತ್ತಿದೆ.

1006119316

ಹೆದ್ದಾರಿ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳ್ಳಬೇಕು ಮತ್ತು ಅಲ್ಲಿಯ ವರೆಗೂ ಪರ್ಯಾಯ ರಸ್ತೆಯನ್ನು ಡಾಮರೀಕರಣ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿ ಮಂಜುನಾಥ ನಗರದ ನಿವಾಸಿಗಳು ಹಾಗೂ ಸ್ಥಳೀಯರು ಸೇರಿ ಪರ್ಕಳದ ನಾರಾಯಣ ಗುರು ಮಂದಿರ ತಿರುವಿನ ಬಳಿ ಮೊದಲ ಹಂತದ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಳ ಪರ್ಕಳದಿಂದ ಪರ್ಕಳದ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಭೂಸ್ವಾಧೀನ ಪ್ರಕ್ರಿಯೆ ವಿಳಂಬ ಸಹಿತ ಕೆಲವು ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿದೆ. ರಸ್ತೆ ನಿರ್ಮಾಣಕ್ಕಾಗಿ ಸುಮಾರು 2000ಕ್ಕೂ ಅಧಿಕ ಲೋಡ್‌ ಮಣ್ಣನ್ನು ತಗ್ಗು ಪ್ರದೇಶಕ್ಕೆ ತುಂಬಿಸಿ ಸಮತಟ್ಟು ಮಾಡಲಾಗಿದೆ. ಈ ಭಾಗದಲ್ಲಿ ಇದೀಗ ದೊಡ್ಡದೊಡ್ಡ ಗಿಡಮರ ಹಾಗೂ ಪೊದೆ ಬೆಳೆದಿದೆ.
ಮಣಿಪಾಲ, ಉಡುಪಿ ಸಂಪರ್ಕಿಸುವ ಅತಿಮುಖ್ಯ ರಸ್ತೆ ಇದಾಗಿದ್ದರೂ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

1006119314

ಈ ಬಗ್ಗೆ ಸಾಮಾಜಿಕ ಹೋರಾಟಗಾರರಾದ ಡಾ| ಪಿ.ವಿ. ಭಂಡಾರಿ ಪ್ರತಿಕ್ರಿಯಿಸಿದ್ದು ಈಗಾಗಲೇ ಸ್ಥಳಿಯರನ್ನು ಒಳಗಂಡ ಮೊದಲ ಹಂತದ ಪ್ರತಿಭಟನೆ ನಡೆಸಿದ್ದೇವೆ, ಇದಕ್ಕೆ ಸ್ಪಂದನೆ ಸಿಗದೇ ಇದ್ದರೆ ಮುಂದಿನ ಹಂತವಾಗಿ ಕಾಲ್ನಡಿಗೆ, ರಸ್ತೆ ತಡೆ ಇತ್ಯಾದಿಗಳನ್ನು ನಡೆಸಲಿದ್ದೇವೆ. ಹೊಸ ಹೆದ್ದಾರಿ ರಸ್ತೆ ನಿರ್ಮಾಣ ಆಗದೇ ಇರುವುದರಿಂದ ಈ ಹಿಂದೆ ವಾಹನ ಸಂಚಾರ ಮಾಡುತ್ತಿದ್ದ ಹಳೇ ರಸ್ತೆಯಲ್ಲೇ ಈಗಲೂ ವಾಹನಗಳು ಸಂಚರಿಸುತ್ತಿವೆ. ಕೆಳಪರ್ಕಳ ಹಾಗೂ ಪರ್ಕಳದ ಸಮೀಪದಲ್ಲಿ ರಸ್ತೆಯಲ್ಲಿ ದೊಡ್ಡದೊಡ್ಡ ಹೊಂಡ ಎದ್ದಿದೆ. ಡಾಮರು ಹಾಕಿ ಸುಸಜ್ಜಿತ ರಸ್ತೆ ಮಾಡಿಕೊಡುವಂತೆ ಸ್ಥಳೀಯರು ಈ ಹಿಂದೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಸಂಬಂಧಪಟ್ಟ ಯಾರೂ ಕೂಡ ಇದನ್ನು ಈವರೆಗೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಮಳೆಗಾಲ ಆರಂಭವಾಗುತ್ತಿದ್ದಂತೆ ವೆಟ್‌ಮಿಕ್ಸ್‌ ಹಾಕುವ ಪ್ರಸಹನ ಅಷ್ಟೆ ಮಾಡುತ್ತಿದ್ದಾರೆ. ಕರಾವಳಿ ಮಳೆಗೆ ಇಳಿಜಾರು ರಸ್ತೆಯಲ್ಲಿ ವೆಟ್‌ಮಿಕ್ಸ್‌ ಹಾಕಿ ಗುಂಡಿ ಮುಚ್ಚಲು ಸಾಧ್ಯವೇ ಇಲ್ಲ ಎಂಬ ಸತ್ಯ ಅಧಿಕಾರಿಗಳಿಗೆ ಗೊತ್ತಿದ್ದರೂ ಅದನ್ನೇ ಮಾಡುತ್ತಿದ್ದಾರೆ ಎಂದು ಹೇಳಿದರು.

ಪರ್ಕಳ ರಸ್ತೆ ಎಂದರೆ ದಿನನಿತ್ಯದ ಅಪಘದ ವಲಯವಾಗಿ ಮಾರ್ಪಟ್ಟಿದೆ ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ರಸ್ತೆ ವ್ಯವಸ್ಥೆಯನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಕೊಡಬೇಕಾಗಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...