ಬೀದರ್‌ | ರಾಷ್ಟ್ರೀಯ ಯುವ ದಿನ ಆಚರಣೆ

Date:

ಯುವ ಜನರು ಸ್ವಂತ ಬಲದ ಮೇಲೆ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.

ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಸೇರಿದಂತೆ ಯಾರ ನೆರವಿಗಾಗಿ ಕಾಯದೇ ಗಟ್ಟಿ ನಿರ್ಧಾರ ಕೈಗೊಂಡು ಪರಿಶ್ರಮದಿಂದ ಬದುಕು ರೂಪಿಸಿಕೊಳ್ಳಬೇಕು. ಅನೇಕ ಯುವಕರು ಮೊಬೈಲ್‌ಗೆ ದಾಸರಾಗಿದ್ದಾರೆ. ಮೊಬೈಲ್ ದುರ್ಬಳಕೆ ಮಾಡಿಕೊಂಡು ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮೊಬೈಲ್ ಅತಿಯಾದ ಬಳಕೆ ನಿಲ್ಲಿಸಬೇಕು. ಹಿತ ಮಿತವಾಗಿ ಬಳಸಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿಶಾ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ʼಯುವಕರು ದೇಶದ ಬೆನ್ನೆಲುಬು, ದೇಶವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುವ ಶಕ್ತಿ ಯುವಕರಲ್ಲಿದೆ. ಸರ್ಕಾರ ರಾಜಕೀಯ ಹಿನ್ನೆಲೆ ಹೊಂದಿರದ ₹1 ಲಕ್ಷ ಯುವಕರನ್ನು ಗ್ರಾಮ ಪಂಚಾಯಿತಿಯಿಂದ ಸಂಸತ್ ಸದಸ್ಯ ಸ್ಥಾನದವರೆಗೆ ಅಣಿಗೊಳಿಸಲು ಯೋಜನೆ ಹಾಕಿಕೊಂಡಿದೆ. ದೇಶದಲ್ಲಿ ಯುವಕರಿಗೆ ಒಳ್ಳೆಯ ಭವಿಷ್ಯ ಇದೆ. ಸ್ವಾಮಿ ವಿವೇಕಾನಂದರು ಹೇಳಿದಂತೆ ಎಲ್ಲ ಶಕ್ತಿಯೂ ಯುವಕರೊಳಗೆ ಇದ್ದು, ಏನು ಬೇಕಾದರೂ ಸಾಧಿಸಬಹುದುʼ ಎಂದು ಹೇಳಿದರು.

ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಓಂಪ್ರಕಾಶ ರೊಟ್ಟೆ, ಪ್ರಭುಲಿಂಗ ಬಿರಾದಾರ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಶಿವಕುಮಾರ ಸ್ವಾಮಿ, ಮಹೇಶ ಗೋರನಾಳಕರ್, ಯುವ ಮುಖಂಡ ಆದೀಶ್ ರಜನೀಶ್ ವಾಲಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಜಕಾರಣಿಗಳು ಹೇಳಿದಂತೆ ಮಠಾಧೀಶರು ಕೇಳುವ ಸ್ಥಿತಿಯಿದೆ : ಸಾಣೇಹಳ್ಳಿ ಶ್ರೀ

ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ಉಪಸ್ಥಿತರಿದ್ದರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಪವನ್ ಸ್ವಾಗತಿಸಿದರು. ಜಯಪ್ರಕಾಶ ನಿರೂಪಿಸಿದರು. ಲಕ್ಷ್ಮಣ ಎಂ. ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...