ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎನ್‌ಸಿಇಆರ್‌ಟಿ: ಶಿಕ್ಷಣತಜ್ಞ ನಿರಂಜನಾರಾಧ್ಯ ಆರೋಪ

Date:

ದೇಶದ ಅತ್ಯುನ್ನತ ಶೈಕ್ಷಣಿಕ ಪ್ರಾಧಿಕಾರವಾದ ರಾಷ್ಟ್ರೀಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ಆಡಳಿತರೂಢ ಸರ್ಕಾರದ ಅಂಚೆ ಕಚೇರಿಯಂತೆ ಕಾರ್ಯ ನಿರ್ವಹಿಸುವ ಮಟ್ಟಕ್ಕೆ ಇಳಿದಿರುವುದು ಇಡೀ ಶೈಕ್ಷಣಿಕ ವಲಯ ತಲೆ ತಗ್ಗಿಸುವಂತೆ ಮಾಡಿದೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಎನ್‌ಸಿಇಆರ್‌ಟಿಯಂತಹ ಅತ್ಯುನ್ನತ ಸಂಸ್ಥೆಯು ಸಂವಿಧಾನದ ಕನಿಷ್ಠ ಜ್ಞಾನವೂ ಇಲ್ಲದಂತೆ, ತನ್ನ ಎಲ್ಲ ಸಮಾಜ ವಿಜ್ಞಾನದ ಪಠ್ಯಪುಸ್ತಕಗಳಲ್ಲಿ ಇಂಡಿಯಾ ಎಂಬುದನ್ನು ಭಾರತವನ್ನಾಗಿ ಬದಲಿಸುವ ಸಲಹೆಯನ್ನು ನೀಡಿರುವುದು ಸಂವಿಧಾನಬಾಹಿರ ನಡೆಯಾಗಿದ್ದು, ದೇಶದ್ರೋಹವೆನಿಸಿಕೊಳ್ಳುತ್ತದೆ. ಪರೋಕ್ಷವಾಗಿ ಇದು ಸಂವಿಧಾನವನ್ನೇ ಬದಲಾಯಿಸುವ ಮುನ್ಸೂಚನೆಯಾಗಿದೆ” ಎಂದು ತಿಳಿಸಿದ್ದಾರೆ.

“ಎನ್‌ಸಿಇಆರ್‌ಟಿಯ ಸಮಾಜ ವಿಜ್ಞಾನ ಸಮಿತಿಯು 12ನೇ ತರಗತಿಯವರೆಗಿನ ಎಲ್ಲ ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ವನ್ನು ‘ಭಾರತ’ ಎಂದು ಕರೆಯಬೇಕೆಂದು ಸಲಹೆ ನೀಡಿರುವುದು ಅತ್ಯಂತ ಆಘಾತಕಾರಿ ಸಲಹೆಯಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಿತಿಯ ಅಧ್ಯಕ್ಷರಾದ ಪ್ರೊ. ಸಿ.ಐ ಇಸಾಕ್ ರವರ ಈ ನಡೆ ಸಂವಿಧಾನ ವಿರೋಧಿಯಾಗಿದೆ. ಸಂವಿಧಾನದ ಪರಿಚ್ಛೇಧ 1ರಲ್ಲಿ ಒಕ್ಕೂಟದ ಹೆಸರು ಇಂಡಿಯಾ, ಅಂದರೆ ಭಾರತ, ರಾಜ್ಯಗಳ ಒಕ್ಕೂಟವಾಗಿದೆ ಎಂದು ವ್ಯಾಖ್ಯಾನಿಸಿದೆ” ಎಂದು ವಿವರಿಸಿದ್ದಾರೆ.

“ಎನ್‌ಸಿಇಆರ್‌ಟಿಯ ಶಾಲಾ ಶಿಕ್ಷಣದಲ್ಲಿ ಗುಣಾತ್ಮಕತೆಯ ಸುಧಾರಣೆಗಾಗಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಕುರಿತು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಸಹಾಯ ಮತ್ತು ಸಲಹೆ ನೀಡಲು 1961ರಲ್ಲಿ ಸ್ಥಾಪಿಸಿದ ಸ್ವಾಯತ್ತ ಸಂಸ್ಥೆಯಾಗಿದೆ. ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಹತ್ತು ಹಲವು ಶೈಕ್ಷಣಿಕ ಉದ್ದೇಶಗಳನ್ನು ಹೊಂದಿರುವ ಈ ಅತ್ಯುನ್ನತ ಸಂಸ್ಥೆಯು, ಪಠ್ಯ ವಿಷಯಗಳಲ್ಲಿ ಕಲ್ಪನೆಗಳು ಮತ್ತು ಮಾಹಿತಿಗಾಗಿ ವಿಷಯಗಳನ್ನು ಸ್ಪಷ್ಟಪಡಿಸುವ ಮನೆಯಂತೆಯೂ ಕಾರ್ಯನಿರ್ವಹಿಸಿಸುವ ಮೂಲಕ ಪ್ರಾಥಮಿಕ ಶಿಕ್ಷಣದ ಸಾರ್ವತ್ರಿಕರಣದ ಗುರಿಗಳನ್ನು ಸಾಧಿಸಲು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೂಡಿಕೆ ನೆಪದಲ್ಲಿ ಮಹಿಳಾ ಉದ್ಯಮಿಗೆ ₹74 ಲಕ್ಷ ವಂಚಿಸಿದ ಅಶ್ವಥ್ ಹೆಗ್ಡೆ

“ದೇಶದ ಅತ್ಯುನ್ನತ ಶೈಕ್ಷಣಿಕ ಪ್ರಾಧಿಕಾರವೊಂದು ಆಡಳಿತ ಪಕ್ಷದ ಅಂಗ ಸಂಸ್ಥೆಯಂತೆ ಕಾರ್ಯನಿರ್ವಹಿಸುತ್ತಿರುವುದು ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿದೆ. ಕಳೆದ ಒಂದು ದಶಕದ ಈ ಬೆಳವಣಿಗೆಯು, ಶಾಲಾ ಶಿಕ್ಷಣದಲ್ಲಿ ಧರ್ಮ, ಪುರಾಣ ಇತ್ಯಾದಿಗಳನ್ನು ಬೆರೆಸುವ ಮೂಲಕ ಶಿಕ್ಷಣವನ್ನು ಕೋಮುವಾದೀಕರಣಗೊಳಿಸುವ ಹುನ್ನಾರವಾಗಿದೆ. ಭಾರತದ ಸಂವಿಧಾನ ಸ್ವಾತಂತ್ರ್ಯ ಚಳುವಳಿಯ ಉತ್ಪನ್ನವಾಗಿದ್ದು, ಜನರ ಆಶಯದಂತೆ, ಸಂವಿಧಾನ ರಚನಾ ಸಭೆಯಲ್ಲಿ ವ್ಯಾಪಕ ಚರ್ಚೆ ಮತ್ತು ವಿಶ್ಲೇಷಣೆಯ ನಂತರ ಒಕ್ಕೂಟವನ್ನು ಇಂಡಿಯಾ, ಅಂದರೆ ಭಾರತ ವ್ಯಾಖ್ಯಾನಿಸಿದೆ. ಇದನ್ನು ಏಕಪಕ್ಷೀಯವಾಗಿ ಬದಲಾಯಿಸುವ ಅಧಿಕಾರ ಯಾವ ಸಂಸ್ಥೆಗಳಿಗೂ ಇಲ್ಲ. ಸಂವಿಧಾನ ತಿದ್ದುಪಡಿಯಾಗದೆ, ಈ ಬಗೆಯ ಸಲಹೆ –ಶಿಫಾರಸ್ಸುಗಳು ಸಂವಿಧಾನ ವಿರೋಧಿ ನಡೆಯಾಗುತ್ತವೆ” ಎಂದು ತಿಳಿಸಿದ್ದಾರೆ.

“ಇದಕ್ಕೆ ಕಾರಣರಾದ ಸಮಿತಿಯ ಅಧ್ಯಕ್ಷ ಸಿ.ಐ.ಇಸಾಕ್ ಮತ್ತು ಸದಸ್ಯರನ್ನು ವಜಾಗೊಳಿಸಿ ಸಮಿತಿಯನ್ನು ವಿಸರ್ಜಿಸಬೇಕು ಹಾಗೂ ಈ ಸಮಿತಿಯ ಎಲ್ಲ ಪ್ರಸ್ತಾವನೆಗಳನ್ನು ಕೈಬಿಡಬೇಕೆಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ ಒಕ್ಕೂಟ ಸರ್ಕಾರ ಮತ್ತು ಎನ್ ಸಿ ಇ ಆರ್ ಟಿಯ ಕಾರ್ಯಕಾರಿ ಸಮಿತಿಯನ್ನು” ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...