ಉಡುಪಿ | ಎನ್‌ಡಿಎ ಆಡಳಿತದಲ್ಲಿ ವ್ಯಾಪಕ ಗುಂಪು ಹತ್ಯೆ; ಎಸ್‌ಡಿಪಿಐ ಖಂಡನೆ

Date:

ಎನ್‌ಡಿಎ ನೇತ್ರತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರತಿಭಟನೆ ನಡೆಸಿತು.

ಕಾಪು ಕ್ಷೇತ್ರ ಸಮಿತಿಯಿಂದ ತಾಲೂಕಿನ ಹೃದಯ ಭಾಗವಾದ ಉಚ್ಚಿಲ ಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತ್ರತ್ವದ ವಹಿಸಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಶಾಹಿದ್ ಅಲಿ ಮಾತನಾಡಿ, ʼಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗುಂಪು ಹತ್ಯೆಗಳ ಘೋರವಾದ ಕೃತ್ಯಕ್ಕೆ ಚಾಲನೆ ನೀಡಿದಂತಾಗಿದೆ. ದೇಶದಲ್ಲಿ ಇಂತಹ ಕೃತ್ಯಗಳು ಮರುಕಳಿಸಿದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆʼ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲಾ ಸಮಿತಿ ಸದಸ್ಯ ಮಜೀದ್ ಹಸನ್ ಬೀರಲಿ ಮಾತನಾಡಿ, ʼಜೂನ್ ಒಂದೇ ತಿಂಗಳಲ್ಲಿ 7 ಗುಂಪು ಹತ್ಯೆಗಳು ನಡೆದಿರುವುದು ಖಂಡನೀಯ. ಇಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೈಕ್‌-ಕಾರು ಢಿಕ್ಕಿ; ಓರ್ವ ಯುವಕ ಸಾವು

ಪ್ರತಿಭಟನೆಯಲ್ಲಿ ಕಾಪು ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಬ್ದುಲ್ ಖಾದರ್, ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಇಬ್ರಾಹಿಂ ಕಂಚಿನಡ್ಕ, ಹರ್ಶ್ ಇಬ್ರಾಹಿಂ, ಉಚ್ಚಿಲ ಗ್ರಾಮ ಸಮಿತಿ ಅಧ್ಯಕ್ಷ ಆಸಿಫ್ ವೈ.ಸಿ, ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನಾಝಿಯ ನಸ್ರುಲ್ಲ, ವಿಮ್ ಕಾಪು ಘಟಕ ಅಧ್ಯಕ್ಷೆ ಫರ್ಜಾನ ಹಮೀದ್ ಸೇರಿದಂತೆ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...