ಬೀದರ್‌ | ನೀಟ್ ಪರೀಕ್ಷೆ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್‌ಎಸ್‌ಯುಐ ಆಗ್ರಹ

Date:

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರೀ ಅಕ್ರಮ ನಡೆದಿರುವ ಸಾಧ್ಯತೆಯಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರ ನೀಟ್ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಆಗ್ರಹಿಸಿದೆ.

ಶುಕ್ರವಾರ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಎನ್‌ಎಸ್‌ಯುಐ ಜಿಲ್ಲಾ ಘಟಕ ಅಧ್ಯಕ್ಷ ಸಚಿನ್‌ ಮಲ್ಕಾಪುರೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ನೀಟ್ ಫಲಿತಾಂಶ ವಿವಾದವಾದಕ್ಕೆ ಅನೇಕ ಅಂಶಗಳು ಕಾರಣವಾಗಿದ್ದು, ಒಟ್ಟು 67 ವಿದ್ಯಾರ್ಥಿಗಳು ಮೊದಲ ರ‍್ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್ ಪಡೆದಿರುವುದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಂತಿದೆ” ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀಟ್‌ನಲ್ಲಿ ರ‍್ಯಾಂಕ್ ಗಳಿಸಿದ ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದ ವಿದ್ಯಾರ್ಥಿಗಳಾಗಿದ್ದು ಇನ್ನಷ್ಟು ಅನುಮಾನಗಳನ್ನು ಹುಟ್ಟಿಹಾಕಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಒಂದೇ ತರಬೇತಿ ಕೇಂದ್ರ ಇವೆಲ್ಲವೂ ನೀಟ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಾರಣವಾಗಿರುವ ಸಾಧ್ಯತೆಯಿದೆ ಎಂಬುದು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಆರೋಪವಾಗಿದೆ” ಎಂದರು.

“ಕೇಂದ್ರ ಬಿಜೆಪಿ ಸರ್ಕಾರ ವೈದ್ಯಕೀಯ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದು, ಈ ಅಕ್ರಮಕ್ಕೆ ಕೇಂದ್ರ ಸರ್ಕಾರವೇ ಕಾರಣವಾಗಿದೆ. ಕೂಡಲೇ ಅಕ್ರಮ ವೆಸಗಿದವರ ಮೇಲೆ ಕ್ರಮ ಜರುಗಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಸಮಿತಿಯಿಂದ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಔರಾದ ತಾಲೂಕಿನ ಅರ್ಧದಷ್ಟು ಸರ್ಕಾರಿ ಪ್ರೌಢ ಶಾಲೆಗಳಿಗೆ ಕನ್ನಡ ಭಾಷಾ ಶಿಕ್ಷಕರಿಲ್ಲ

ಪ್ರತಿಭಟನೆಯಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಸಮಿತಿಯ ಪ್ರಮುಖರಾದ ಭೀಮರಾವ ಮಾಲಗತ್ತಿ, ಸುಭಾಷ ಕಲ್ಲೂರ, ಪವನ, ಕೃಷ್ಣಾ ಮೇತ್ರೆ, ಚಂದು ಡಿ.ಕೆ, ಸಿದ್ದಾರ್ಥ, ಲೋಕೇಶ ಡುಮ್ಮೆ, ದೀಪಕ ಭಂಗೆ, ನಿತೀಶ ಶಿಂಧೆ, ಸೈಯದ್ ದಸ್ತಾಗಿರ್, ಇಮ್ರಾನ್ ಖಾನ್, ಅಮರ ಹರಪಳ್ಳೆ, ಅಕ್ಷಯ, ಸುನೀಲ ಬಸಕಲ್ಯಾಣ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...