ನೀಟ್ ಅಕ್ರಮ | ಕೇಂದ್ರ ಮಾನವ ಸಂಪನ್ಮೂಲ ಸಚಿವರ ರಾಜೀನಾಮೆಗೆ ಎಸ್‌ಐಓ ಆಗ್ರಹ

Date:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳ ಕುರಿತು ತನಿಖೆಗೆ ಕೇಂದ್ರ ಸರ್ಕಾರ ಸಮಿತಿ ರಚಿಸಬೇಕು. ಅನ್ಯಾಯಕ್ಕೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಅಕ್ರಮದ ಹೊಣೆ ಹೊತ್ತು ಕೇಂದ್ರ ಮಾನವ ಸಂಪನ್ಮೂಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಎಸ್‌ಐಓಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಡಿದ ಎಸ್‌ಐಓ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮದ್ ಕೈಫ್, “ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೀವನದ ಜೊತೆ ಚಲ್ಲಾಟವಾಡುತ್ತಿದೆ. ಕಳೆದ ನಾಲ್ಕು ನೀಟ್ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಯಾಗಿರುವ ಅನುಮಾನಗಳಿದ್ದರೂ, ಕೇಂದ್ರ ಸರ್ಕಾರ ಅದನ್ನು ನಿರಾಕರಿಸಿತ್ತು. ಆದರೆ, ಈ ಬಾರಿಯ ನೀಟ್ ಪ್ರಶ್ನೆಪತ್ರಿಕೆ ಸೋರಿಯಾಗಿರುವುದನ್ನು ಸ್ವತಹಃ ಹೆಚ್.ಆರ್.ಡಿ ಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಪ್ರಕರಣದ ಸಂಬಂಧ ಬಿಜೆಪಿಯ ಹಲವಾರು ಮುಖಂಡರನ್ನು ಬಂಧಿಸಲಾಗಿದೆ. ಇದನ್ನು ನೋಡಿದರೆ ನೀಟ್ ಪರೀಕ್ಷೆಯ ಮೂಲಕ ಬಡವರ ಮಕ್ಕಳು ವೈದ್ಯರಾಗದಂತೆ ತಡೆಯುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿರುವುದು ಸ್ಪಷ್ಟವಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ವೈದ್ಯನಾಗಬೇಕೆಂಬ ಕನಸಿನೊಂದಿಗೆ ಕಷ್ಟಪಟ್ಟು ಓದಿ,ಪರೀಕ್ಷೆ ಬರೆದ ಸುಮಾರು 24 ಲಕ್ಷ ವಿದ್ಯಾರ್ಥಿಗಳು ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅವರ ಭವಿಷ್ಯದೊಂದಿಗೆ ಕೇಂದ್ರ ಸರ್ಕಾರ ಚಲ್ಲಾಟವಾಡುತ್ತಿದೆ. ಹಾಗಾಗಿ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆಗೆ ಒಪ್ಪಿಸಬೇಕು. ಪ್ರಕರಣದ ಹೊಣೆ ಹೊತ್ತು ಕೇಂದ್ರದ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಧಾನಮಂತ್ರಿಗಳು ವಿದ್ಯಾರ್ಥಿಗಳ ಸಮಸ್ಯೆ ಕುರಿತು ಮಾತನಾಡಬೇಕು. ಎಲ್ಲ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀಟ್ ಮರು ಪರೀಕ್ಷೆ ನಡೆಸಬೇಕು” ಎಂದು ಮಹಮದ್ ಕೈಫ್ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಹೋರಾಟಗಾರ ತಾಜುದ್ದೀನ್ ಷರೀಫ್ ಮಾತನಾಡಿ, “ಕೇಂದ್ರ ಸರ್ಕಾರ ನೇಮಿಸಿದ ಎನ್‌ಟಿಎ ಸಂಸ್ಥೆಯಿಂದ ನೀಟ್ ಬರೆದ ಆರ್ಹ ಅಭ್ಯರ್ಥಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಕೆಲವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಬಿಜೆಪಿ ಶಾಸಕರು, ಸಂಸದರ ಅಧೀನದ ಶಿಕ್ಷಣ ಸಂಸ್ಥೆಗಳು ಮತ್ತು ನೀಟ್ ಕೋಚಿಂಗ್ ಸೆಂಟರ್‌ಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಲಕ್ಷಾಂತರ ಮಕ್ಕಳ ವೈದ್ಯಕೀಯ ಕನಸಿಗೆ ಕೊಳ್ಳಿ ಇಡಲಾಗಿದೆ. ಇದು ನಿಜಕ್ಕೂ ಖಂಡನೀಯ. ಕೂಡಲೇ ಕೇಂದ್ರ ಹೆಚ್.ಆರ್.ಡಿ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಕಾನೂನು ವಿದ್ಯಾರ್ಥಿನಿ ದೀಪಿಕಾ ಮರಳೂರು ಮಾತನಾಡಿ, “ಕಷ್ಟಪಟ್ಟು ಪರೀಕ್ಷೆ ಬರೆದು ವೈದ್ಯರಾಗಿ ರೋಗಿಗಳ ಸೇವೆ ಮಾಡುವ ಬದಲು, ವಾಮಮಾರ್ಗದಿಂದ ಲಕ್ಷಾಂತರ ರೂ. ಖರ್ಚು ಮಾಡಿ ಪ್ರಶ್ನೆಪತ್ರಿಕೆ ಖರೀದಿಸಿ ವೈದ್ಯನಾಗುವ ವ್ಯಕ್ತಿಯಿಂದ ಯಾವ ರೀತಿಯ ಸೇವೆಯನ್ನು ನಿರೀಕ್ಷಿಸಲು ಸಾಧ್ಯ. ಈ ವಿಚಾರದಲ್ಲಿ ಸರ್ಕಾರಕ್ಕೆ ಮಾತನಾಡಲು ನೈತಿಕತೆಯೇ ಇಲ್ಲ. ಕೂಡಲೇ ಶಿಕ್ಷಣ ಮಂತ್ರಿಗಳು ರಾಜೀನಾಮೆ ನೀಡಬೇಕು. ಮರು ಪರೀಕ್ಷೆ ನಡೆಸುವ ಮೂಲಕ ನೊಂದು ಆತ್ಮಹತ್ಯೆಯ ಹಾದಿ ಹಿಡಿಯುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು” ಎಂದು ಅಗ್ರಹಿಸಿದರು.

ಪ್ರತಿಭಟನೆಯಲ್ಲಿ ಮದೀಹ, ಮಹಮದ್ ಖಲೀಲ್ ಖಾನ್, ಮಹಮದ್ ಜಲೀಲ್, ಅಸಾದುಲ್ಲಾಖಾನ್, ಹಮೀನ, ತಮನ್ನಾ, ಮಸಿಹಾ, ಇಲ್ಲಾಮ್ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...