ನೆಲಮಂಗಲ | ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ, 6 ಮಂದಿ ದಾರುಣ ಸಾವು

Date:

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಶನಿವಾರ ಸಂಭವಿಸಿದೆ. ಕಾರ್‌ನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸಂಪೂರ್ಣವಾಗಿ ಅಪ್ಪಚ್ಚಿಯಾಗಿ ದಾರುಣ ಸಾವು ಕಂಡಿದ್ದಾರೆ. 

ಘಟನೆಯಲ್ಲಿ ಕಾರಿನಲ್ಲಿದ್ದ ಮಕ್ಕಳು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಬಿದ್ದು ಸಾವಿಗೀಡಾದವರು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಮೊರಬಗಿ ಗ್ರಾಮದವರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಉದ್ಯಮಿ ಚಂದ್ರ ಯಾವಪ್ಪವೋಳ, 16 ವರ್ಷದ ಜಾನ್, 12 ವರ್ಷದ ದೀಕ್ಷಾ, 36 ವರ್ಷದ ವಿಜಯ ಲಕ್ಷ್ಮಿ, 42 ವರ್ಷದ ಗೌರಬಾಯಿ ಎಂದು ಗುರುತಿಸಲಾಗಿದೆ.

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ನಡೆದಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ಅಪಘಾತದಿಂದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ  ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿ ಅಪ್ಪಚ್ಚಿಯಾಗಿರುವ ಮೃತದೇಹಗಳನ್ನು ಹೊರತೆಗೆಯುವ ಕೆಲಸ ನಡೆಯುತ್ತಿದೆ. ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರಲ್ಲಿದ್ದರ ದೇಹಗಳು ಕೂಡ ಛಿದ್ರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಂದ್ರಶೇಖರ ಏಗಪ್ಪಗೋಳ ಕುಟುಂಬ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಿದ್ದರು. ಐಎಎಸ್‌ಟಿ ಸಾಫ್ಟ್‌ವೇರ್ ಕಂಪನಿ ಮಾಲೀಕರಾಗಿದ್ದರು. ತಂದೆಗೆ ಹುಷಾರಿಲ್ಲ ಎಂಬ ಕಾರಣಕ್ಕೆ ನೋಡಲು ಕುಟುಂಬ ಸಮೇತ ವಿಜಯಪುರ ಜಿಲ್ಲೆ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರ ರಾಜ್ಯದ ಮೊರಬಗಿ ಗ್ರಾಮಕ್ಕೆ ಹೊರಟ್ಟಿದ್ದರು.

ಐಎಎಸ್‌ಟಿ ಸಾಫ್ಟ್‌ವೇ‌ರ್ ಸಲ್ಯೂಷನ್ಸ್ ಸಿಇಒ ಆಗಿದ್ದ ಚಂದ್ರಶೇಖರ ಅವರು 2018ರಲ್ಲಿ ಸ್ವಂತ ಕಂಪನಿ ಆರಂಭಿಸಿದ್ದರು. ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಶೀಘ್ರದಲ್ಲೇ ಹೊಸ ಕಚೇರಿ ಆರಂಭಿಸಲು ಸಿದ್ಧತೆ ನಡೆಸಿದ್ದರು. ಎರಡು ತಿಂಗಳ ಹಿಂದೆ ₹1.5 ಕೋಟಿ ಮೊತ್ತದ ವೋಲ್ವೆ ಕಾರು ಖರೀದಿಸಿದ್ದರು.

ಅಪಘಾತ 36
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...