ನೆಲಮಂಗಲ, ತುಮಕೂರು ರಾ.ಹೆ.-48 ಕಾಮಗಾರಿ : ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಲು ಸೂಚನೆ

Date:

 ತುಮಕೂರು ನಗರವು ರಾಜ್ಯದ ಪ್ರಮುಖ ಕೈಗಾರಿಕಾ ಹಾಗೂ ಶಿಕ್ಷಣ ಕೇಂದ್ರವಾಗಿದ್ದು, ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ನೆಲಮಂಗಲದಿಂದ ತುಮಕೂರು ಬೈಪಾಸ್ ರಸ್ತೆವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ-48 ಕಾಮಗಾರಿಯನ್ನು 2026ರ ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಅನೂಪ್ ಶರ್ಮಾ ಅವರಿಗೆ ಸೂಚನೆ ನೀಡಿದರು.

ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ನೆಲಮಂಗಲ–ತುಮಕೂರು ಮಾರ್ಗದ ರಾ.ಹೆ.-48ರಲ್ಲಿ 45 ಕಿಲೋ ಮೀಟರ್ ಉದ್ದದ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಕಾಮಗಾರಿಯನ್ನು ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದರು. 

ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಮಾರು 19 ಕಿಲೋ ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿಯು 16 ಹಳ್ಳಿಗಳ ಮೂಲಕ ಹಾದು ಹೋಗಲಿದೆ. ಸ್ಥಳೀಯರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕಾಮಗಾರಿಯನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಬೆಳಗುಂಬ, ಶ್ರೀದೇವಿ ಕಾಲೇಜು, ಯಲ್ಲಾಪುರ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿರುವ ರಸ್ತೆ ಕೆಳ ಸೇತುವೆಗಳಲ್ಲಿ ಬೆಳಕಿನ ವ್ಯವಸ್ಥೆ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಅಪಘಾತಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 40 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿದ್ದು, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿAಗ್ ಹಾಗೂ ಸುರಕ್ಷತಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು. ಅಪಘಾತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. 

ನೆಲಮಂಗಲ–ತುಮಕೂರು ರಾಷ್ಟ್ರೀಯ ಹೆದ್ದಾರಿ-48 ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟ ಕಾಪಾಡದೆ ನಿರ್ಲಕ್ಷ್ಯತೆ ಕಂಡಲ್ಲಿ ನಾನು ಸಹಿಸುವುದಿಲ್ಲ. ಕಾಮಗಾರಿಗೆ ಸಂಬAಧಿಸಿದ ಪ್ರಗತಿ ವರದಿಯನ್ನು ಕಾಲ ಕಾಲಕ್ಕೆ ಸಲ್ಲಿಸಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ತುಮುಲ್ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಮಹಾನಗರ ಪಾಲಿಕೆ ಆಯುಕ್ತ ಆಶ್ವಿಜ, ರಾಷ್ಟ್ರೀಯ ಹೆದ್ದಾರಿ-48 ವಿಶೇಷ ಭೂಸ್ವಾಧೀನಾಧಿಕಾರಿ ಅಪೇಕ್ಷ ಸತೀಶ್ ಪವಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...