ನ್ಯಾಯಾಲಯಗಳಲ್ಲೂ ವಿಕಲಚೇತನರಿಗೆ ಪೂರಕವಾದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತಿಸಬೇಕಿದೆ : ಸುಪ್ರೀಂ ನ್ಯಾಯಮೂರ್ತಿ ಎಸ್.ಎ ಬೋಪಣ್ಣ

Date:

‘ನ್ಯಾಯಾಲಯಗಳಲ್ಲಿ ವಿಕಲಚೇತನರಿಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ನ್ಯಾಯದ ಸುಲಭಲಭ್ಯತೆಯನ್ನು ಖಾತರಿ ಪಡಿಸಬೇಕಿದೆ’ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಎ. ಬೋಪಣ್ಣ ಕರೆ ನೀಡಿದರು.

ಅವರು ಬೆಂಗಳೂರಿನ ರಾಮಯ್ಯ ಕಾನೂನು ಕಾಲೇಜಿನಲ್ಲಿ ಶನಿವಾರ ನಡೆದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ‘ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ)’ ಸಂಸ್ಥೆ, ರಾಮಯ್ಯ ಕಾನೂನು ಕಾಲೇಜಿನ ಸಹಕಾರದೊಂದಿಗೆ ಸ್ಥಾಪಿಸಿದ ‘ನೂತನ ಡಿಸೆಬಿಲಿಟಿ ಲಾ ಸೆಂಟರ್‌’ ಅನ್ನು ಉದ್ಘಾಟಿಸಿ ಮಾತನಾಡಿದರು.

ತಮ್ಮ ವಿಕಲಚೇತನ ಸ್ಥಿತಿಯಿಂದಾಗಿ ಅವಕಾಶ ವಂಚಿತರು ಮತ್ತು ಬಡವರು ಹಲವು ವರ್ಷಗಳಿಂದ ನ್ಯಾಯದಿಂದ ವಂಚಿತರಾಗಿದ್ದಾರೆ. ನ್ಯಾಯದ ಸುಲಭ ಲಭ್ಯತೆಯನ್ನು ಅವರಿಗೆ ಪಡೆಯಲು ಸಾಧ್ಯವಾಗಿಲ್ಲ. ಸಂವಿಧಾನವು ತನ್ನ ಎಲ್ಲ ಪ್ರಜೆಗಳಿಗೆ ಸಮಾನ ನ್ಯಾಯವನ್ನು ನೀಡುತ್ತಿದ್ದರೂ ಕೂಡ ವಿಕಲಚೇತನರಿಗೆ, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗಗಳಿಗೆ ತಮ್ಮ ಹಕ್ಕುಗಳ ಬಗ್ಗೆಯಾಗಲೀ, ಸಂವಿಧಾನವು ಸಂರಕ್ಷಿಸುತ್ತಿರುವ ಇತರ ಸೌಲಭ್ಯಗಳ ಬಗ್ಗೆಯಾಗಲೀ ತಿಳಿದಿಲ್ಲ ಎಂದು ಎಸ್.ಎ. ಬೋಪಣ್ಣ ಹೇಳಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯದ ಸುಲಭ ಲಭ್ಯತೆಯು ನಮ್ಮ ಸಮಾಜದ ಪ್ರಮುಖ ಅಗತ್ಯತೆಯಾಗಿದ್ದು ಅದನ್ನು ಸಾಧಿಸುವಲ್ಲಿ ನಾವು ಮುಂದಡಿ ಇರಿಸಬೇಕಿದೆ ಎಂದು ಅವರು ಕರೆ ನೀಡಿದರು.

APD Bangalore

ಸಾಮಾಜಿಕ- ಆರ್ಥಿಕ ಸ್ಥರಗಳ ನಡುವೆ ಯಾವುದೇ ತಾರತಮ್ಯವಿಲ್ಲದೇ ನ್ಯಾಯ ನೀಡದಾಗ ಮಾತ್ರ ನ್ಯಾಯದ ಸುಲಭ ಲಭ್ಯತೆಯನ್ನು ಸಾಧಿಸಿದಂತಾಗುತ್ತದೆ ಎಂದು ನಾನು ನಂಬುತ್ತೇ‌ನೆ. ಸಾಮಾಜಿಕ ನ್ಯಾಯವು ನಮ್ಮ ಸಂವಿಧಾನದ ಮೂಲ ರಚನೆಯಾಗಿದೆ.  ಯಾವಾಗ ಎಲ್ಲ ವರ್ಗದ ಜನರನ್ನು ಸಮಾನವಾಗಿ ಪರಿಗಣಿಸಲಾಗುತ್ತದೆಯೋ ಆಗಲೇ ನಮ್ಮ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿದಂತಾಗುತ್ತದೆ. ವಿಶೇಷ ಚೇತನರಿಗೂ ನ್ಯಾಯ ದೊರಕಿಸುವುದು ನ್ಯಾಯದ ಸುಲಭಲಭ್ಯತೆಯ ಪ್ರಮುಖ ಅಂಶ‌. ವಿಶೇಷ ಚೇತನರ ಊನತೆಗಳಿಂದಾಗಿ ಅವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು, ಅವರ ನ್ಯಾಯ ಸಂರಕ್ಷಣೆಗಾಗಿ ಹೋರಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ನುಡಿದರು.

ಕೆಲವರ ಕೂಗುಮಾರಿ ಮಾತುಗಳು, ಎಲ್ಲರ ಸಂವಿಧಾನಾತ್ಮಕ ಹಕ್ಕುಗಳನ್ನು ಕಾಪಾಡುವ ಆಶಯದಿಂದ ನಮ್ಮನ್ನು ದೂರೀಕರಿಸಿ ವಿಚಲಿತರನ್ನಾಗಿಸದಿರಲಿ ಎಂದು ಎಸ್.ಎ. ಬೋಪಣ್ಣ ಎಚ್ಚರಿಸಿದರು.

apd 2

ರಾಷ್ಟೀಯ ಹಾಗೂ ರಾಜ್ಯ ಮಟ್ಟದಲ್ಲಿನ ನ್ಯಾಯಾಂಗ ರಂಗದಲ್ಲಾದ ಬೃಹತ್ ಕ್ರಾಂತಿಯ ಪರಿಣಾಮವಾಗಿ ಇಂದು ವಿಕಲಚೇತನರಿಗೆ ನ್ಯಾಯ ಒದಗಿಸುವ ಬಗ್ಗೆ ತಳಮಟ್ಟದಲ್ಲಿಯೇ ತಿಳಿಸಲಾಗುತ್ತಿದೆ. ವಿಕಲಚೇತನರ ಲಿಂಗ ಹಾಗೂ ವಯಸ್ಸಿಗೆ ತಕ್ಕಂತೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಲು ಸರ್ಕಾರಗಳು ಮುಂದಡಿ ಇರಿಸಬೇಕಿದೆ. ವಿಕಲಾಂಗರು ಸೇರಿದಂತೆ ಸಮಾಜದ ಎಲ್ಲ ದುರ್ಬಲ ವರ್ಗಗಳಿಗೆ ನ್ಯಾಯ ಒದಗಿಸಿದಾಗ ಮಾತ್ರ ನ್ಯಾಯದ ನೈಜತೆಯನ್ನು ಕಾಪಾಡಿದಂತಾಗುತ್ತದೆ‌ ಎಂದು ಅವರು ಕರೆ ನೀಡಿದರು.

‘ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ)’ ಸಂಸ್ಥೆಯ ಪ್ರತಿನಿಧಿಗಳಾಗಿ ಗೌರವ ಕಾರ್ಯದರ್ಶಿ ಜೇಕಬ್ ಕುರಿಯನ್, ಸಿಇಓ ಡಾ. ಎನ್.ಎಸ್. ಸೆಂಥಿಲ್ ಕುಮಾರ್ ಭಾಗವಹಿಸಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ.ವಿ.ನಾಗರತ್ನ, ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ಹೈಕೋರ್ಟ್‌ ನ್ಯಾಯಮೂರ್ತಿ ಜಿ.ನರೇಂದ್ರ, ಗೋಕುಲ ಎಜುಕೇಶನ್ ಫೌಂಡೇಷನ್ ಉಪಾಧ್ಯಕ್ಷ ಎಂ.ಆರ್.ಸೀತಾರಾಂ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...