ನಿಡಗುಂದಿ | ಹೊಸ ಬಸ್ ನಿಲ್ದಾಣದ ಸಮೀಪ ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಭೂಮಿಪೂಜೆ

Date:

“ಇಂದಿರಾ ಕ್ಯಾಂಟೀನ್‌ನ ಮೂಲಕ ಹಳ್ಳಿಯಿಂದ ಬರುವ ಸಾವಿರಾರು ಬಸ್ ಪ್ರಯಾಣಿಕರು, ನಿತ್ಯ ವ್ಯಾಪಾರಕ್ಕೆ ಆಗಮಿಸುವ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ದೊರೆಯುವ ಮೂಲಕ ಎಲ್ಲರಿಗೂ ಅನುಕೂಲವಾಗಲಿದೆ” ಎಂದು ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷರಾದ ಎಂ. ಎಂ. ಮುಲ್ಲಾ ಹೇಳಿದರು.

ವಿಜಯಪುರ ಜಿಲ್ಲೆ ನಿಡಗುಂಡಿ ಪಟ್ಟಣದ ಹೊಸ ಬಸ್ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, “ಬೆಲೆ ಏರಿಕೆಯ ದಿನಮಾನಗಳಲ್ಲಿ ಸರ್ಕಾರವು ಇಂದಿರಾ ಕ್ಯಾಂಟೀನ್ ತೆರೆಯಲು ಅನುದಾನ ಕೊಡುತ್ತಿದೆ. ಆ ಮೂಲಕ ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಅದಕ್ಕೆ ಧನ್ಯವಾದಗಳು” ಹೇಳಿದರು.

ನಿಡಗುಂದಿ ಇಂದಿರಾ ಕ್ಯಾಂಟೀನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಾಧಿಕಾರಿ ವಿರೇಶ್ ಹಟ್ಟಿ ಮಾತನಾಡಿ, “ನಿಡಗುಂದಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ಸಂಗತಿ. ಕಾರ್ಮಿಕರ ಹಾಗೂ ಕಚೇರಿಗೆ ಆಗಮಿಸುವ ಸಿಬ್ಬಂದಿಗೆ ಮತ್ತು ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಇಂದಿರಾ ಕ್ಯಾಂಟೀನ್ ನಿರ್ಮಾಣದಿಂದ ಕಡಿಮೆ ದರದಲ್ಲಿ ಉಪಹಾರದಿಂದ ದೊರೆಯುವ ಮೂಲಕ ಹಸಿವು ನಿವಾರಣೆಗೆಯಾಗಲಿದೆ. 50 ಅಡಿ ಉದ್ದ 50 ಅಡಿ ಅಗಲ ಹೊಂದಿದ ಅಳತೆಯಲ್ಲಿ ಕ್ಯಾಂಟೀನ್ ನಿರ್ಮಾಣವಾಗಲಿದೆ. ಬೆಡ್ ನಿರ್ಮಾಣಗೊಂಡು ಕಟ್ಟಡಕ್ಕೆ ಸ್ಲ್ಯಾಬ್‌ಗಳನ್ನು ಹೊಂದಿಸಿ 15 ದಿನದಲ್ಲಿ ಕ್ಯಾಂಟೀನ್ ಕಾಮಗಾರಿ ಪೂರ್ಣವಾಗಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮೈಸೂರು | ಜನರ ಪಾಲಿಗೆ ನರಕವಾದ ಚೆಲುವಾಂಬ ಸರ್ಕಾರಿ ಆಸ್ಪತ್ರೆ; ಕಣ್ಣಾಡಿಸುವರೇ ಆರೋಗ್ಯ ಸಚಿವರು?

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸಂಗಮೇಶ ಬಳಗೂರ, ಎಂ. ಎಂ. ಅತ್ತಾರ, ಮಲ್ಲಿಕ್ ಭಗವಾನ್, ಪರಶುರಾಮ, ಎಸ್. ಕೆ. ಗೌಡರ್, ಸಂಜು ರಾಠೋಡ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...