ಬೆಳಗಾವಿ | ನಿಜಗುಣಾನಂದರಿಗೆ ಜೀವ ಬೆದರಿಕೆ; ಸೂಕ್ತ ಭದ್ರತೆಗೆ ಅನುಯಾಯಿಗಳ ಆಗ್ರಹ

Date:

ಬೆಳಗಾವಿ ಜಿಲ್ಲೆಯ ಬೈಲೂರಿನ ನಿಷ್ಕಲ ಮಂಟಪ ಮಠದ ನಿಜಗುಣಾನಂದ ಸ್ವಾಮೀಜಿಗೆ ಪದೇ-ಪದೇ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಬಿಗಿ ಭದ್ರತೆ ಒದಗಿಸಬೇಕು. ದುಷ್ಕರ್ಮಿಗಳನ್ನು ಪತ್ತೆಮಾಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ನಿಜಗುಣಾನಂದರ ಅನುಯಾಯಿಗಳು ಆಗ್ರಹಿಸಿದ್ದಾರೆ.

ಕಿತ್ತೂರಿನಲ್ಲಿ ಪ್ರತಿಭಟನೆ ನಡೆಸಿದ ಅನುಯಾನಿಗಳು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಇತ್ತೀಚೆಗೆ ನಿಜಗುಣಾನಂದರಿಗೆ ಜೀವಬೇದರಿಕೆ ಪತ್ರ ಬಂದಿದೆ. ಸರ್ಕಾರ ಈ ಬಗ್ಗೆ ಶೀಘ್ರಗತಿಯಲ್ಲಿ ತನಿಖೆ ನಡೆಸಿ, ತಪ್ಪಿತಸ್ಥ ದುಷ್ಕರ್ಮಿಗಳನ್ನು ಬಂಧಿಸಬೇಕು. ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಬುದ್ದ, ಬಸವ ಅಂಬೇಡ್ಕರ ಅವರ ತತ್ವ ಸಿದ್ದಾಂತಗಳನ್ನು ಜನರಲ್ಲಿ ಬಿತ್ತರಿಸುವ, ಸಮಾಜದಲ್ಲಿಯ ಮೂಢನಂಬಿಕೆಗಳ ವಿರುದ್ಧ ಜನರನ್ನು ಜಾಗೃತಗೊಳಿಸುತ್ತಿರುವ, ವಚನ ಸಾಹಿತ್ಯದೊಂದಿಗೆ ಸಮಾಜದಲ್ಲಿ ಏಕತೆ ಮೂಡಿಸುತ್ತಿರುವ ನಿಜಗುಣಾನಂದರಿಗೆ ಜೀವ ಬೆದರಿಕೆ ಹಾಕುವುದು ಹೇಯ ಸಂಸ್ಕೃತಿ ಎಂದು ಕಿಡಿಕಾರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...