ನಿಪ್ಪಾಣಿ | ಸಕ್ಕರೆ ಕಾರ್ಖಾನೆಯಲ್ಲಿ ಏ. 4ರಿಂದ ಕೃಷಿ ಉತ್ಸವ

Date:

ನಿಪ್ಪಾಣಿಯ ಕಾರ್ಖಾನೆಯಲ್ಲಿ ಏಪ್ರಿಲ್ 4ರಿಂದ ಐದು ದಿನಗಳವರೆಗೆ ಕೃಷಿ ಉತ್ಸವವನ್ನು ಜೊಲ್ಲೆ ಗ್ರುಪ್, ಎಕ್ಸಂಬಾದ ಬೀರೇಶ್ವರ ಕೋ ಆಪ್. ಕ್ರೆಡಿಟ್ ಸೊಸೈಟಿ ಮತ್ತು ಹಾಲಸಿದ್ದನಾಥ ಸಹಕಾರ ಸಕ್ಕರೆ ಕಾರ್ಖಾನೆ ಆಶ್ರಯದಲ್ಲಿ ಉತ್ಸವ ಆಯೋಜಿಸಲಾಗಿದೆ ಎಂದು ಜೊಲ್ಲೆ ಗ್ರುಪ್‌’ನ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ 10 ರಿಂದ ರಾತ್ರಿ 10 ರ ವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಕಬ್ಬು, ಕೃಷಿ ಬೇಸಾಯ, ಉತ್ಪಾದನೆ, ಪಶುಪಾಲನೆ, ಹಾಲು ಉತ್ಪಾದನೆ, ಕೋಳಿ ಸಾಕಣೆ, ಸಾವಯವ ಕೃಷಿ ಕುರಿತ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ ವಿವಿಧ ಸ್ಪರ್ಧೆ, ವಿಚಾರ ಸಂಕಿರಣ, ಮನರಂಜನಾ ಕಾರ್ಯಕ್ರಮಗಳು ಜರುಗಲಿವೆ. ಸಂಜೆ ಸಂಗೀತ, ಹಾಸ್ಯ, ಜಾನಪದ ಸಂಗೀತ ಮತ್ತು ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ವಿಜಯ ರಾವುತ ಮಾತನಾಡಿ, 10 ಎಕರೆ ಭೂಮಿಯಲ್ಲಿ ಕೃಷಿ, ಆಹಾರ, ಆಟೊಮೊಬೈಲ್ ಮತ್ತು ಕೃಷಿ ಪರಿಕರಕ್ಕೆ ಸಂಬಂಧಿಸಿದ ಸುಮಾರು 250 ಮಳಿಗೆಗಳು ಇರಲಿವೆ. ಸುಮಾರು 1.50 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ವಿಚಾರ ಸಂಕಿರಣಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ತಜ್ಞರು ಪಾಲ್ಗೊಳ್ಳುವರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಹಕಾರ ಕಾರ್ಖಾನೆ ಅಧ್ಯಕ್ಷ ಮಲಗೊಂಡಾ ಪಾಟೀಲ, ಉಪಾಧ್ಯಕ್ಷ ಪವನ ಪಾಟೀಲ, ನಿರ್ದೇಶಕ ಅಪ್ಪಾಸಾಹೇಬ ಜೊಲ್ಲೆ, ವಿಶ್ವನಾಥ ಕಮತೆ, ಅವಿನಾಶ ಪಾಟೀಲ, ಸಮಿತ ಸಾಸನೆ, ಪ್ರಕಾಶ ಶಿಂಧೆ, ಜಯವಂತ ಭಾಟಲೆ, ರಾಜು ಗುಂಡೇಶ, ರಮೇಶ ಪಾಟೀಲ, ಶ್ರೀಕಾಂತ ಬನ್ನೆ, ಜಯಕುಮಾರ ಖೋತ, ರಾವಸಾಹೇಬ್‌ ಫರಾಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...