ಉಡುಪಿ | ದಿಕ್ಕಿಲ್ಲದ ವೃದ್ಧೆಯ ಅಂತ್ಯಸಂಸ್ಕಾರ ನೆರವೇರಿಸಿದ ನಿತ್ಯಾನಂದ ಒಳನಾಡು

Date:

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದ ದಿಕ್ಕಿಲ್ಲದ ವೃದ್ಧೆಯ, ಅಂತ್ಯಸಂಸ್ಕಾರವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಗೌರವಯುತವಾಗಿ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ನೇರವೇರಿಸಿದರು.‌

ಮೃತ ವೃದ್ಧೆಯ ಹೆಸರು ಪದ್ಮಯ್ಯ ಕಮ್ಮಾರ್, ಗದಗ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ.‌‌ ಕಾಪುವಿನಲ್ಲಿ ಬಾಡಿಗೆ ಮಾಡಿಕೊಂಡು ಒಂಟಿಯಾಗಿ ಜೀವನ ಸಾಗಿಸಿಕೊಂಡಿದ್ದರು. ಹೀಗಿರುವಾಗ ವೃದ್ಧೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮನೆಯ ಮಾಲಿಕ ವೃದ್ಧೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದರು.‌ ವೃದ್ಧೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಕಾಪು ಪೋಲಿಸರು ವೃದ್ಧೆಗೆ ಸಂಬಂಧಿಕರು ಇಲ್ಲದ ಕಾರಣ, ಅಂತ್ಯಸಂಸ್ಕಾರ ನಡೆಸಲು ಒಳಕಾಡುವರನ್ನು ಸಂಪರ್ಕಿಸಿದರು.‌ ಬಳಿಕ ಒಳಕಾಡುವರು ನೆರವಿಗೆ ಬಂದರು.

ಎ.ಎಸ್.ಐ ಸದಾಶಿವ, ಹೆಡ್ ಕಾನ್ಸಟೇಬಲ್ ಸುಲೋಚನಾ, ಶಿವನಾಯ್ಕ್ ಕಾನೂನು ಪ್ರಕ್ರಿಯೆ ನಡೆಸಿದರು. ಸರಸ್ವತಿ ಸಹಕರಿಸಿದರು.‌ ಅಂತ್ಯಸಂಸ್ಕಾರಕ್ಕೆ ತಗುಲಿದ ಸಂಪೂರ್ಣ ವೆಚ್ಚವನ್ನು ವಿಕಾಸ್ ಶೆಟ್ಟಿ ಭರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...