ಉಡುಪಿ | ಆತ್ಮ*ಹತ್ಯೆಗೆ ಯತ್ನ, ಯುವಕನ ಸ್ಥಿತಿ ಗಂಭೀರ

Date:

ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಆಟೋ ಚಾಲಕರ ಸಹಕಾರದಿಂದ ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ. ದಾಖಲಿಸಲ್ಪಟ್ಟಿರುವ ಯುವಕ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ‌ ಹೆಸರು ವಿಳಾಸ ತಿಳಿದುಬಂದಿಲ್ಲ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

1005727597

ಯುವಕ ಅರೆಬೆತ್ತಲೆ ಸ್ಥಿತಿಯಲ್ಲಿದ್ದು, ಸೊಂಟದ ಪಟ್ಟಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ, ಸಾರ್ವಜನಿಕರು ಆತ್ಮಹತ್ಯೆ ಯತ್ನವನ್ನು ವಿಫಲಗೊಳಿಸಿದ್ದಾರೆ.‌ ಯುವಕನ ಬಾಯಿ ಮೂಗಿನಿಂದ‌ ಸ್ವಲ್ಪ ಪ್ರಮಾಣದಲ್ಲಿ ರಕ್ತದ ಸೊರಿಕೆಯಾಗಿರುವುದು ಕಂಡುಬಂದಿದೆ. ಯುವಕ ಮಾದಕದ್ರವ್ಯ ವ್ಯಸನ ಮಾಡಿರುವ ಶಂಕೆ ವ್ಯಕ್ತವಾಗಿದೆ.

1004640970 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...