ಉಡುಪಿ | ನಾಗರಿಕ ಸಮಿತಿಯ ನೇತ್ರತ್ವದಲ್ಲಿ ಅಪರಿಚಿತ ಶವದ ದಫನ

Date:

ಉಡುಪಿ ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಘಟಕದಲ್ಲಿ ಕೆಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ಅಂತ್ಯಸಂಸ್ಕಾರವು ಕಾನೂನು ಪ್ರಕ್ರಿಯೆಗಳು ನಡೆದಾದ ಬಳಿಕ ಬೀಡಿನಗುಡ್ಡೆಯ ದಫನಭೂಮಿಯಲ್ಲಿ ಗೌರವಯುತವಾಗಿ ಗುರುವಾರ ನಡೆಸಲಾಯಿತು.

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿತ್ತು. ಮಲ್ಪೆ‌ ಪೋಲಿಸರು ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಟ್ಟಿದ್ದರು. ವಾರಸುದಾರರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಲಾಗಿತ್ತು, ವಾರಸುದಾರರ ಕಾಯುವಿಕೆ ಕಾಲಮಿತಿ ಕಳೆದಿರುವುದರಿಂದ, ಮಲ್ಪೆ ಪೋಲಿಸರು ಮತ್ತು ಸಮಾಜ ಸೇವಕ ನಿತ್ಯಾನಂದ ಒಳಕಾಡು ನೇತ್ರತ್ವದಲ್ಲಿ ದಪನ ಮಾಡಲಾಯಿತು.

ಮಲ್ಪೆ ಪೋಲಿಸ್ ಠಾಣೆಯ ಹೆಡ್ ಕಾನ್ಸಟೇಬಲ್ ಭಾಸ್ಕರ್, ನಾಗರಾಜ್ ಕಾನೂನು ಪ್ರಕ್ರಿಯೆ ನಡೆಸಿದರು. ಮರಣೋತ್ತರ ಪರೀಕ್ಷಾ ತಜ್ಞ ಡಾ. ರಮೇಶ್ ಕುಂದರ್ ಮರಣೋತ್ತರ ಪರೀಕ್ಷೆ ನಡೆಸಿದರು. ನಾಗರಿಕ ಸಮಿತಿಯ ಕಾರ್ಯಕರ್ತರಾದ ಸತೀಶ್ ಕುಮಾರ್, ಹರೀಶ್ ಪೂಜಾರಿ, ಜಗದೀಶ್, ಯತೀಶ್ ಕುಮಾರ್ ಕಡಿಯಾಳಿ ಅಂತ್ಯಸಂಸ್ಕಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಫ್ಲವರ್ ವಿಷ್ಣು, ನಗರಸಭೆ‌ ಸಹಕರಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...