ಉಡುಪಿ | 23 ದಿನಗಳಿಂದ ರಕ್ಷಿಸಿಡಲಾಗಿದ್ದ ಅನಾಥ ಶವದ ಅಂತ್ಯಸಂಸ್ಕಾರ

Date:

ಕಳೆದ 23 ದಿನಗಳಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಸುರಕ್ಷಿತವಾಗಿ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ಅಂತ್ಯಸಂಸ್ಕಾರವು ದಫನ ನಿಯಮದಂತೆ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಬುಧವಾರ‌ ಪೋಲಿಸರ ಸಮಕ್ಷಮ ನಡೆಸಲಾಯಿತು.

ಮಲ್ಪೆ ಕಡಲತೀರದ ಸೀವಾಕ್ ಬಳಿ ಅಪರಿಚಿತ ಗಂಡಸಿನ ಶವವು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ವಾರಸುದಾರರ ಪತ್ತೆಗಾಗಿ ಮಾಧ್ಯಮಗಳಲ್ಲಿ ಪ್ರಕಟಣೆ ನೀಡಲಾಗಿತ್ತು. ಸಮಯಮಿತಿ ಕಳೆದರೂ ವಾರಸುದಾರರು ಸಂಪರ್ಕಿಸದೆ ಇರುವುದರಿಂದ‌ ಕಾನೂನಿನಂತೆ ದಫನ ಮಾಡಲಾಯಿತು.

ಅಂತ್ಯಸಂಸ್ಕಾರವು ಸಮಾಜಸೇವಕ ನಿತ್ಯಾನಂದ ಒಳಕಾಡುವರ‌ ನೇತ್ರತ್ವದಲ್ಲಿ ನಡೆಯಿತು.‌ ಜಿಲ್ಲಾಸ್ಪತ್ರೆಯ ಡಾ. ರಮೇಶ್ ಕುಂದರ್ ಮರಣೋತ್ತರ‌ ಪರೀಕ್ಷೆ‌ ನಡೆಸಿದರು. ಮಲ್ಪೆ ಪೋಲಿಸ್ ಠಾಣೆಯ ಎ. ಎಸ್. ಐ ವಿಶ್ವಾನಾಥ್, ಹಾಗೂ ನಾಗರಾಜ್ ಕಾನೂನು ಪ್ರಕ್ರಿಯೆ ನಡೆಸಿದರು. ಸತೀಶ್ ಕುಮಾರ್, ಹರೀಶ್ ಪೂಜಾರಿ, ವಿಕಾಸ್ ಶೆಟ್ಟಿ, ಪ್ಲವರ್ ವಿಷ್ಣು, ನಗರಸಭೆ, ಸಹಕರಿಸಿದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...