ಉಡುಪಿ | ಪತ್ತೆಯಾಗದ ವಾರಸುದಾರರು, ಮೃತದೇಹದ ಅಂತ್ಯಕ್ರಿಯೆ ನೆರವೇರಿಸಿದ ಸಾಮಾಜಿಕ ಕಾರ್ಯಕರ್ತರ ತಂಡ

Date:

ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಅಪರಿಚಿತ ಶವದ‌ ದಫನ ಕಾರ್ಯವು ರವಿವಾರ ಬೀಡಿನಗುಡ್ಡೆಯಲ್ಲಿರುವ ನಗರಸಭೆಯ ದಫನಭೂಮಿಯಲ್ಲಿ ಗೌರವಯುತವಾಗಿ ನಡೆಸಲಾಯಿತು.

ಮಾರ್ಚ್ 5 ರಂದು ಕಾಪುವಿನ ಪಾದಚಾರಿ ರಸ್ತೆಯಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿ ಕಂಡುಬಂದಿದ್ದ ಅಪರಿಚಿತ ವೃದ್ಧರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು‌ ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದ್ದರು. ಶವವನ್ನು ಜಿಲ್ಲಾಸ್ಪತ್ರೆಯ ಶೀತಲೀಕೃತ ಶವ ರಕ್ಷಣಾ ಘಟಕದಲ್ಲಿ ರಕ್ಷಿಸಿಡಲಾಗಿತ್ತು. ವಾರಸುದಾರು ಪತ್ತೆಗೊಳಿಸಲು ಮಾಧ್ಯಮದಲ್ಲಿ ಸಂದೇಶವನ್ನು ಬಿತ್ತರಿಸಲಾಗಿತ್ತು. ಕಾಲಮಿತಿ ಕಳೆದರೂ ವಾರಸುದಾರರು ಸಂಪರ್ಕಿಸದೆ ಇರುವುದರಿಂದ‌ ಕಾನೂನಿನಂತೆ ದಫನ ನಡೆಸಲಾಯಿತು.

ಶವದ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನಡೆಸಲು, ಉಡುಪಿ ಜಿಲ್ಲಾ ನಾಗರೀಕ ಸಮಿತಿ ಟ್ರಸ್ಟಿನ ಪ್ರಧಾನ ಸಂಚಾಲಕ ನಿತ್ಯಾನಂದ‌ ಒಳಕಾಡು ಅವರು ಕಾಪು ಪೋಲಿಸ್ ಠಾಣೆಗೆ ನೆರವಾದರು. ಹೆಡ್ ಕಾನ್ಸಟೇಬಲ್ ಮರಿಗೌಡ, ಶಿವ ನಾಯ್ಕ್ ಕಾನೂನು ಪ್ರಕ್ರಿಯೆ ನಡೆಸಿದರು. ಹರೀಶ್ ಪೂಜಾರಿ, ವಿಕಾಸ್ ಶೆಟ್ಟಿ, ಫ್ಲವರ್ ವಿಷ್ಣು, ಹಾಗೂ ನಗರಸಭೆ ಸಹಕರಿಸಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...