ನಮ್ಮ ನಾಡ ಒಕ್ಕೂಟ (ರಿ.) ಇದರ ಆಶ್ರಯದಲ್ಲಿ ಕುಂದಾಪುರದ ಕಮ್ಯೂನಿಟಿ ಸೆಂಟರ್‌ನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಒಟ್ಟು ₹75 ಸಾವಿರ ನಗದು ಹಣ ನೀಡಿ ಗೌರವಿಸಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ಮೆಚ್ಚುಗೆ ಪಡೆದ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗಿದೆ ಎಂದು ಸಂಘಟಕರು ತಿಳಿಸಿದರು.
ಈ ಸಂದರ್ಭದಲ್ಲಿ NNO ಉಪಾಧ್ಯಕ್ಷ ಹುಸೇನ್ ಹೈಕಾಡಿ, ಪ್ರಧಾನ ಕಾರ್ಯದರ್ಶಿ ಮೌ ಝಮಿರ್ ಅಹ್ಮದ್ ರಶಾದಿ, ಖಜಾಂಚಿ ಮೊಹಮ್ಮದ್ ಪಿರ್ ಸಾಹೇಬ್ (ಉಡುಪಿ), ಉಡುಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಅಬು ಮೊಹಮ್ಮದ್, NNO ಕಮ್ಯೂನಿಟಿ ಸೆಂಟರ್ ಉಪಾಧ್ಯಕ್ಷ ಮನ್ಸೂರ್ ಮರವಂತೆ ಉಪಸ್ಥಿತರಿದ್ದರು.





