ಯಾವುದೇ ಸಚಿವರ ಮೇಲೆ ಶಾಸಕರಿಂದ ದೂರು ಬಂದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Date:

  • ಜು.27ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ಕರೆಯಲಾಗಿದೆ
  • ‘ಗೃಹಲಕ್ಷ್ಮಿ ಯೋಜನೆ ನೋಂದಣಿ ದುಡ್ಡು ಪಡೆಯುವಂತಿಲ್ಲ’

ನಮ್ಮ ಸರ್ಕಾರ ರಚನೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಈ ಹಿನ್ನೆಯಲ್ಲಿ ಶಾಸಕಾಂಗ ಪಕ್ಷ ಸಭೆ ನಡೆಸಿ ಎಂದು ಶಾಸಕರು ಪತ್ರ ಬರೆದಿದ್ದಾರೆ. ಅವರ ಪತ್ರದಲ್ಲಿ ಯಾವುದೇ ಸಚಿವರ ಮೇಲೆ ದೂರು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

“ಸರ್ಕಾರ ಬಂದು ಎರಡು ತಿಂಗಳಾಗುವಷ್ಟರಲ್ಲೇ ಶಾಸಕರು, ಸಚಿವರ ವಿರುದ್ಧ ದೂರು ಕೊಟ್ಟಿದ್ದಾರೆ” ಎಂದು ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ ಆರೋಪಿಸಿರುವ ಬಗ್ಗೆ ಸುದ್ದಿಗಾರರು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಅವರನ್ನು ಪ್ರಶ್ನಿಸಿದಾಗ ಅವರು ಉತ್ತರಿಸಿದರು.

“ಜು.27ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ಕರೆಯಲಾಗಿದೆ ಎಲ್ಲ ವಿಷಯಗಳನ್ನು ಚರ್ಚಿಸಲಾಗುವುದು. ಸಚಿವರ ಮೇಲೆ ಯಾವುದೇ ದೂರುಗಳು ಇಲ್ಲ” ಆರೋಪವನ್ನು ಅಲ್ಲಗಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜು.27ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ

ಗೃಹಲಕ್ಷ್ಮಿ ನೋಂದಣಿಗೆ ದುಡ್ಡಿಲ್ಲ

“ಗೃಹಲಕ್ಷ್ಮಿ ಯೋಜನೆ ನೋಂದಣಿ ಉಚಿತವಾಗಿದ್ದು, ಸೇವಾ ಕೇಂದ್ರಗಳು ದುಡ್ಡು ಪಡೆದಲ್ಲಿ ಅಂತವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲು ಮಾಡಲಾಗುವುದು” ಎಂದು ಇದೇ ವೇಳೆ ಎಚ್ಚರಿಸಿದರು.

ಬಿಜೆಪಿಯವರು ಮೌಢ್ಯ ನಂಬುತ್ತಾರೆ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮಳೆ ಆಗಲ್ಲ ಎನ್ನುವ ಆರೋಪವನ್ನು ಬಿಜೆಪಿಯವರು ಮಾಡುತ್ತಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಅವರು ಮೌಢ್ಯವನ್ನು ನಂಬುವವರು. ಹೀಗಾಗಿ ಆ ರೀತಿ ಹೇಳುತ್ತಾರೆ. ಇದು ಪ್ರಕೃತಿ ನಿಯಮ. ಅವರು ಸರ್ಕಾರದಲ್ಲಿದ್ದಾಗ ಪ್ರವಾಹ ಉಂಟಾಗಲಿಲ್ಲವೇ? ನಾನು ಇದನ್ನು ನಂಬುವುದಿಲ್ಲ” ಎಂದರು.

ಸಿಂಗಾಪುರದಲ್ಲಿ ನಿಮ್ಮ ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಡಿ ಕೆ ಶಿವಕುಮಾರ್‌ ಆರೋಪಿಸಿದ್ದಾರಲ್ಲಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಈ ವಿಚಾರ ನನಗೆ ಗೊತ್ತಿಲ್ಲ. ನೀವು ಡಿ ಕೆ ಶಿವಕುಮಾರ್‌ ಅವರನ್ನೇ ಕೇಳಿ ಉತ್ತರ ಪಡೆಯಿರಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...