ದಲಿತರಿಗೆ ಭೂಮಿ ಪರಭಾರೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

Date:

  • ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ: ಸಿಎಂ
  • ‘ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ’

ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಸೋಮವಾರ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

“ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ” ಎಂದು ವಿವರಿಸಿದರು .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು. ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು, ಭೂ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ, ಜೆಡಿಎಸ್ ಮತ್ತು ಪ್ರಾದೇಶಿಕ ಅಸ್ಮಿತೆ

ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೆ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ಸೇರಿದಂತೆ ಸಚಿವರಾದ ಹೆಚ್.ಸಿ ಮಹದೇವಪ್ಪ, ಹೆಚ್.ಕೆ ಪಾಟೀಲ್, ಡಾ. ಜಿ ಪರಮೇಶ್ವರ, ಕೆ.ಹೆಚ್ ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್ ರಾಜಣ್ಣ, ಆರ್.ಬಿ ತಿಮ್ಮಾಪುರ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

35 ಮಂದಿ ನಾಯಕರ ಉಪಸ್ಥಿತಿ

ಸಭೆಯಲ್ಲಿ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಶ್ರೀಧರ್ ಕಲಿವೀರ, ಬಸವರಾಜ ಕೌತಾಳ್, ಮಂಜು, ಇಂದೂಧರ ಹೊನ್ನಾಪುರ, ಹರಿರಾಮ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಡಿ.ಜಿ ಸಾಗರ್ ಸೇರಿ 35 ಕ್ಕೂ ಅಧಿಕ ಮಂದಿ ದಲಿತ ಮುಖಂಡರು ಮತ್ತು ವಕೀಲರು ಉಪಸ್ಥಿತರಿದ್ದು ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...