ಯಾರು ಯಾರಿಗೂ ಲಂಚ ಕೊಡುವ ಹಾಗಿಲ್ಲ – ತೆಗೆದುಕೊಳ್ಳುವ ಹಾಗಿಲ್ಲ: ಡಿಕೆ ಶಿವಕುಮಾರ್

Date:

ಯಾರು ಯಾರಿಗೂ ಲಂಚ ಕೊಡೋ ಹಾಗಿಲ್ಲ. ತಕೊಳೊ ಹಾಗಿಲ್ಲ. ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಭ್ರಷ್ಟಾಚಾರದ ವಿರುದ್ಧ ಜನರು ಮಾಹಿತಿ ನೀಡಲು ಫಲಕಗಳನ್ನು ಅಳವಡಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ರಾಮನಗರ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. “ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳಿದ್ದೀರಿ. ಜನರ ಸಮಸ್ಯೆಗಳನ್ನು ಪರಿಹರಿಸುವುದು ರಾಜಕಾರಣಿ ಮತ್ತು ಅಧಿಕಾರಿಗಳ ಕರ್ತವ್ಯ. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು” ಎಂದು ಹೇಳಿದರು.

“ಬಿಜೆಪಿ ಆಡಳಿತವನ್ನು ಜನರು ನೋಡಿದ್ದಾರೆ. ರಾಜ್ಯಕ್ಕೆ ಭ್ರಷ್ಟಾಚಾರದ ರಾಜಧಾನಿ ಎನ್ನುವ ಹಣೆಪಟ್ಟಿಯನ್ನು ಬಿಜೆಪಿ ಸರ್ಕಾರ ತಂದಿದೆ. ಅದನ್ನು ಬದಲಾಯಿಸಬೇಕು. ಅಧಿಕಾರಿಗಳು ಲಂಚದಿಂದ ದೂರ ಉಳಿಯಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲ ಅಧಿಕಾರಿಗಳಿಗೂ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ ಮಾಡಬೇಕು. ಕಚೇರಿಯ ಎಲ್ಲ ಅಧಿಕಾರಿಗಳ ಮಾಹಿತಿಯನ್ನು ಅವರ ಫೋಟೋ, ಹೆಸರು, ವಿಳಾಸಗಳೊಂದಿಗೆ ಪುಸ್ತಕ ಮಾಡಿಡಬೇಕು” ಎಂದು ಅವರು ಹೇಳಿದರು.

“ಒಂದು ತಿಂಗಳು ಅವಕಾಶ ಕೊಡುತ್ತೇನೆ. ಅಷ್ಟದಲ್ಲಿ ಎಲ್ಲ ಅಧಿಕಾರಿಗಳು ಹೆಡ್‌ ಕ್ವಾಟ್ರಸ್‌ನಲ್ಲಿ ಮನೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತಿಯಿಂದ ಹಿಡಿದು, ಉನ್ನತ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ಯಾರಾದರೂ ಹೆಡ್‌ ಕ್ವಾಟ್ರಸ್‌ ಬಿಟ್ಟು ಹೋದರೆ, ಜಿಲ್ಲಾಧಿಕಾರಿಗಳು ನಮಗೆ ಮಾಹಿತಿ ನೀಡಬೇಕು” ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...