ವಿಶೇಷ ಮಕ್ಕಳ ಆರೈಕೆದಾರರ ಕಷ್ಟ ಕೇಳೋರೇ ಇಲ್ಲ! ಸಾರ್ವತ್ರಿಕ ಮುಷ್ಕರಕ್ಕೆ ಸ್ಪಂದಿಸುವುದೇ ಸರ್ಕಾರ?

Date:

ರಾಜ್ಯದಲ್ಲಿನ ವಿಶೇಷ ಮಕ್ಕಳ ಆರೈಕೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಾಲೆಗಳು ಮತ್ತು ಅಲ್ಲಿನ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ರಾಜ್ಯಮಟ್ಟದ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕ, ಶಿಕ್ಷಕೇತರರ ಸಂಘದ ವತಿಯಿಂದ, ಇದೇ ಜನವರಿ 28ರ ಬುಧವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶಿಶುಕೇಂದ್ರಿತ ಯೋಜನೆಯಡಿ ಅನುದಾನ ಪಡೆಯುತ್ತಿರುವ ವಿಶೇಷ ಶಾಲೆಗಳ ವತಿಯಿಂದ ಮಹತ್ವದ ಮುಷ್ಕರ ನಡೆಯಲಿದೆ.

ಪ್ರತಿ ಏಳು ವಿಶೇಷ ಮಕ್ಕಳಿಗೆ ಒಬ್ಬ ಶಿಕ್ಷಕ ಎಂಬ ಅನುಪಾತದಲ್ಲಿ ನೇಮಕಾತಿ ನಡೆಯುತ್ತಿದ್ದು, ಈ ಶಿಕ್ಷಕರು ಮಾನಸಿಕ, ದೈಹಿಕ ಹಾಗೂ ಕಲಿಕಾ ವೈಕಲ್ಯ ಹೊಂದಿರುವ ಮಕ್ಕಳಿಗೆ ನಿರಂತರ ಆರೈಕೆ ಮತ್ತು ಶಿಕ್ಷಣ ನೀಡುತ್ತಿದ್ದಾರೆ. ಆದರೆ ಈ ಅತ್ಯಂತ ಸಂವೇದನಾಶೀಲ ವಲಯದಲ್ಲಿರುವ ಶಿಕ್ಷಕರ ಬದುಕು ಮಾತ್ರ ಇಂದು ಭದ್ರತೆ ಇಲ್ಲದ ಸ್ಥಿತಿಗೆ ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ಮಕ್ಕಳ ಆರೈಕೆ ಎನ್ನುವುದು ಕೇವಲ ಶಿಕ್ಷಣವಲ್ಲ, ಅದು ಮಾನವೀಯತೆ, ಸಹಾನುಭೂತಿ ಮತ್ತು ಸಾಮಾಜಿಕ ಹೊಣೆಗಾರಿಕೆಯ ಸಂಕೇತವಾಗಿದೆ. ರಾಜ್ಯದಲ್ಲಿ ಶಿಶುಕೇಂದ್ರಿತ ಅನುದಾನ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 180ಕ್ಕೂ ಹೆಚ್ಚು ವಿಶೇಷ ಶಾಲೆಗಳಲ್ಲಿ ಸುಮಾರು 3500 ವಿಶೇಷ ಶಿಕ್ಷಕರು ಹಾಗೂ 2500ಕ್ಕೂ ಹೆಚ್ಚು ಶಿಕ್ಷಕೇತರ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ದಿನ.ಕಾಮ್ ಜೊತೆ ಮಾತನಾಡಿದ ರಾಜ್ಯ ವಿಶೇಷ ಶಿಕ್ಷಕ-ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್, “ಶಿಶುಕೇಂದ್ರಿತ ಯೋಜನೆಯಡಿ ಶಿಕ್ಷಕರಿಗೆ ತಿಂಗಳಿಗೆ ಕೇವಲ 20,000 ರೂ., ಸಹಾಯಕರಿಗೆ 13,000 ರೂ. ಮತ್ತು ಅಡುಗೆ ಸಿಬ್ಬಂದಿಗೆ 12,000 ರೂ. ಗೌರವಧನ ನೀಡಲಾಗುತ್ತಿದೆ. ಆದರೆ ಸರ್ಕಾರದಿಂದ ಅನುದಾನ ಸಮಯಕ್ಕೆ ಸರಿಯಾಗಿ ಬಿಡುಗಡೆಯಾಗದೇ ಇರುವುದರಿಂದ, ಹಲವು ತಿಂಗಳುಗಳವರೆಗೆ ವೇತನ ಸಿಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇದರಿಂದಾಗಿ ಶಿಕ್ಷಕರು ಕುಟುಂಬ ನಿರ್ವಹಣೆ, ವೈದ್ಯಕೀಯ ಖರ್ಚು, ಮಕ್ಕಳ ಶಿಕ್ಷಣ ಸೇರಿದಂತೆ ಮೂಲಭೂತ ಅಗತ್ಯಗಳಿಗೂ ಪರದಾಡುವ ಸ್ಥಿತಿ ಎದುರಿಸುತ್ತಿದ್ದಾರೆ ಎಂದು ಹೇಳಿದರು.

1009325321

ಉಡುಪಿ ಜಿಲ್ಲಾ ವಿಶೇಷ ಶಿಕ್ಷಕ-ಶಿಕ್ಷಕಿಯರ ಸಂಘದ ಅಧ್ಯಕ್ಷರಾದ ರವೀಂದ್ರ ಎಚ್, “ಕರ್ನಾಟಕ ರಾಜ್ಯದಾದ್ಯಂತ 6000ಕ್ಕೂ ಹೆಚ್ಚು ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. 180ಕ್ಕೂ ಹೆಚ್ಚು ಶಾಲೆಗಳು ಶಿಶುಕೇಂದ್ರೀತ ಅನುದಾನದಲ್ಲಿದ್ದರೆ, 34 ಶಾಲೆಗಳು ಬೇರೆ ಮಾದರಿಯ ಅನುದಾನ ಪಡೆಯುತ್ತಿವೆ. ಒಂದೇ ವಲಯದಲ್ಲಿ ಎರಡು ಬಗೆಯ ನೀತಿ ಬೇಡ. 1982 ಅನುದಾನ ಸಂಹಿತೆಯಡಿ ಸಾಮಾನ್ಯ ಶಾಲೆಗಳಿಗೆ ನೀಡುವಂತೆಯೇ ಎಲ್ಲ ವಿಶೇಷ ಶಿಕ್ಷಕರಿಗೂ ಸಮಾನ ಸೌಲಭ್ಯ ಮತ್ತು ಭದ್ರತೆ ನೀಡಬೇಕು” ಎಂದು ಆಗ್ರಹಿಸಿದರು.

1009325175

ಪ್ರಮುಖ ಬೇಡಿಕೆಗಳು:

ಮುಷ್ಕರ ಹಮ್ಮಿಕೊಂಡಿರುವ ಸಂಘಟನೆಗಳು ಕೆಳಗಿನ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿವೆ..

  • ಸಮಾನ ಕೆಲಸಕ್ಕೆ ಸಮಾನ ವೇತನ ತತ್ವದಂತೆ, ಶಿಶುಕೇಂದ್ರಿತ ಅನುದಾನ ಪಡೆಯುತ್ತಿರುವ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ 1982 ಅನುದಾನಕ್ಕೆ ಒಳಪಡುವ ಸಿಬ್ಬಂದಿಗಳಂತೆ ಎಲ್ಲಾ ಸೌಲಭ್ಯಗಳನ್ನು ಜಾರಿಗೊಳಿಸಬೇಕು.
  • ವಿಧಾನಸಭಾಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಗಳ ಆದೇಶದಂತೆ, ವಿಶೇಷ ಶಾಲೆಗಳ ಅನುದಾನವನ್ನು 40% ಹೆಚ್ಚಿಸುವ ಪ್ರಸ್ತಾವನೆಯನ್ನು ತಕ್ಷಣವೇ ಮಂಜೂರು ಮಾಡಬೇಕು.
  • ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಿಶೇಷ ಶಿಕ್ಷಕರಿಗೆ ಪೂರ್ಣ ಪ್ರಮಾಣದ ಆರ್ಥಿಕ ಸೌಲಭ್ಯ ಒದಗಿಸಬೇಕು.
  • ಶಿಶುಕೇಂದ್ರೀತ ಸಹಾಯಧನ ಯೋಜನೆಯ ಮಾರ್ಗದರ್ಶಿಗಳನ್ನು ಪ್ರತಿ 5 ವರ್ಷಕ್ಕೊಮ್ಮೆ ಪುನರ್‌ರಚಿಸಿ, ಆಯ್ದ ವಿಶೇಷ ಶಾಲೆಗಳ ಪರಿಣಿತರನ್ನು ಪ್ರಕ್ರಿಯೆಯಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.
  • ವಿಶೇಷ ಶಾಲೆಗಳಿಗೆ ನೀಡುವ ಅನುದಾನವನ್ನು ಪ್ರತಿ ವರ್ಷ ಜೂನ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಎರಡು ಕಂತುಗಳಲ್ಲಿ ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಬೇಕು.

ಸರ್ಕಾರದ ನಿರ್ಲಕ್ಷ್ಯದಿಂದ ಸಂಕಷ್ಟಕ್ಕೆ ತಳ್ಳಲ್ಪಟ್ಟ ವಿಶೇಷ ಮಕ್ಕಳು ಶಿಕ್ಷಕರ ಸಮಸ್ಯೆ ಕೇವಲ ಉದ್ಯೋಗ ಸಂಬಂಧಿತವಲ್ಲ, ಇದರ ನೇರ ಪರಿಣಾಮ ವಿಶೇಷ ಮಕ್ಕಳ ಭವಿಷ್ಯದ ಮೇಲೆಯೇ ಬೀಳುತ್ತಿದೆ. ವೇತನ ವಿಳಂಬ, ಅನುದಾನ ಕೊರತೆ ಮತ್ತು ಅನಿಶ್ಚಿತ ನೀತಿಗಳಿಂದಾಗಿ ಹಲವು ವಿಶೇಷ ಶಾಲೆಗಳು ಕಾರ್ಯಾಚರಣೆಯಲ್ಲೇ ಸಂಕಷ್ಟ ಅನುಭವಿಸುತ್ತಿವೆ. ಇದರಿಂದ ಮಕ್ಕಳ ಶಿಕ್ಷಣ, ಚಿಕಿತ್ಸೆ ಮತ್ತು ಪುನರ್ವಸತಿ ಪ್ರಕ್ರಿಯೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

ವಿಶೇಷ ಮಕ್ಕಳ ಆರೈಕೆ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಶಿಕ್ಷಕರು ಮತ್ತು ಸಿಬ್ಬಂದಿಗಳು ಗೌರವಯುತ ಬದುಕಿಗೆ ಅರ್ಹರು. ಜನವರಿ 28ರಂದು ನಡೆಯಲಿರುವ ರಾಜ್ಯಮಟ್ಟದ ಸಾರ್ವತ್ರಿಕ ಮುಷ್ಕರವು, ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಬೇಕಿದೆ ಎಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...