ಸಂಘಟನೆಯವರು ನಾಲ್ಕೈದು ದಿನ ಬರುತ್ತಾರೆ, ಆಮೇಲೆ ನಮಗೆ ಯಾರೂ ಇರಲ್ಲ: ಸುಹಾಸ್ ಶೆಟ್ಟಿ ತಂದೆ

Date:

“ಸಂಘಟನೆಯವರು ನಾಲ್ಕೈದು ದಿನ ಬರುತ್ತಾರೆ, ಮಾತನಾಡಿಸುತ್ತಾರೆ. ಆಮೇಲೆ ನಮಗೆ ಯಾರೂ ಇರಲ್ಲ” ಎಂದು ಕೊಲೆಯಾದ ರೌಡಿಶೀಟರ್, ಸಂಘಪರಿವಾರದ ನಾಯಕ ಸುಹಾಸ್ ಶೆಟ್ಟಿ ತಂದೆ ಮಹೇಶ್ ಶೆಟ್ಟಿ ಅವರು ಹೇಳಿದ್ದಾರೆ.

ನಿನ್ನೆ ಸುಹಾಸ್ ಶೆಟ್ಟಿ ಅಂತ್ಯ ಸಂಸ್ಕಾರ ನಡೆಯಿತು. ಇದಕ್ಕೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುಹಾಸ್ ಶೆಟ್ಟಿ ತಂದೆ, “ಯುವಕರು ಹಿಂದೂ ಹಿಂದೂ ಎಂದುಕೊಂಡು ಹಿಂದುತ್ವದ ಹಿಂದೆ ಹೋಗುತ್ತಾರೆ. ಆದರೆ ಇಂತಹ ಘಟನೆ ನಡೆದಾಗ ಯಾರೂ ಇರುವುದಿಲ್ಲ” ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: 5ಕ್ಕೂ ಹೆಚ್ಚು ಆರೋಪಿಗಳು ಪೊಲೀಸ್ ವಶಕ್ಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಮಗನಿಗೆ ಈಗ 31 ವರ್ಷ. ಅವನೇ ನಮ್ಮ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ. ಈಗ ಆತನ ಕೊಲೆಯ ಬಳಿಕ ನಾವು ಜೀವನ ಪೂರ್ತಿ ಕೊರಗಬೇಕು” ಎಂದು ಅಳಲು ತೋಡಿಕೊಂಡರು.

“ಕೆಲವು ಹಿಂದುತ್ವ ಸಂಘಟನೆಯ ಮುಖಂಡರುಗಳು ನಾಲ್ಕೈದು ದಿನ ನಿಮ್ಮ ಜೊತೆ ನಾವಿದ್ದೇವೆ ಎಂದು ಹೇಳಿಕೊಂಡು ಬರುತ್ತಾರೆ. ಆದರೆ ಎಲ್ಲ ಆದ ಮೇಲೆ ಅವರೂ ಇರಲ್ಲ, ಬೇರೆ ಯಾರೂ ಇರಲ್ಲ” ಎಂದು ಹೇಳಿದರು.

ಹಾಗೆಯೇ “ನನ್ನ ಮಗನ ಸಾವಿಗೆ ನ್ಯಾಯ ಬೇಕು. ಸದ್ಯ ಇರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ” ಎಂದರು.

ಇನ್ನು ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ‌ ಗುಂಪಿನಿಂದ ಕೊಲೆಗೀಡಾದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 5ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹಿಂದೂಗಳು ಕೂಡ ಭಾಗಿಯಾಗಿರುವುದಾಗಿ ಬೆಳಕಿಗೆ ಬಂದಿದೆ ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...