ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಬೇಡ : ಶಾಸಕ ಕೊತ್ತೂರು ಮಂಜುನಾಥ್

Date:

ಕೋಲಾರ: ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಿರ್ಮಿಸಿರುವ ಬ್ಯಾಸ್ಕೆಟ್ ಬಾಲ್ ಸಿಂಥೆಟಿಕ್ ಟ್ಯ್ರಾಕ್ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ 4.80 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಶನಿವಾರ ಚಾಲನೆ ನೀಡಿದರು

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಅಭಿವೃದ್ದಿ ವಿಚಾರದಲ್ಲಿ ಯಾವುದೇ ರಾಜಿಯಿಲ್ಲದೆ ಪಕ್ಷ ಬೇದ ಮರೆತು ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದರು.

ಕಾಮಗಾರಿಯನ್ನು ಗುತ್ತಿಗೆ ಪಡೆದಿರುವವರು ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು ಗುಣಮಟ್ಟದಿಂದ ಕೆಲಸಗಳು ನಡೆಸಬೇಕು ಆರು ತಿಂಗಳೊಳಗೆ ಸಾರ್ವಜನಿಕರ ಸೇವೆಗೆ ಸಿದ್ದ ಪಡಿಸಿ ಉದ್ಘಾಟನೆ ಮಾಡಬೇಕಿದೆ ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಬಸ್ ನಿಲ್ದಾಣದ ಪಕ್ಕದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ ನಡೆಸಿದ ನಂತರ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಸಿಗಬೇಕು ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಸಣ್ಣ ಪುಟ್ಟ ಸಮಸ್ಯೆಗಳನ್ನು ಕೆಲವರು ಭಯಭೀತಗೊಂಡು ಆತಂಕಕ್ಕೆ ಒಳಗಾಗಿ ಆಸ್ಪತ್ರೆಗಳ ಕಡೆ ಮುಖ ಮಾಡುತ್ತಾರೆ ಈ ವೆಳೆ ಅವರಿಗೆ ದೈರ್ಯ ತುಂಬಿದಾಗ ಅರ್ಥದಷ್ಟು ಆರೋಗ್ಯ ಸಮಸ್ಯೆ ಗುಣವಾಗುತ್ತದೆ ಎಂದು ಸಲಹೆ ನೀಡಿದರು.

ಕೋಲಾರ ನಗರದಲ್ಲಿ ಬೀದಿಬದಿಯ ಹೂ‌ಹಣ್ಣು ಮಾರಾಟ ಮಾಡುವವರಿಗಾಗಿ ತೆರೆದ ಮಾರುಕಟ್ಟೆಯನ್ನು ಗುದ್ದಲಿ ಪೂಜೆ ನಡೆಸಲಾಗಿದೆ ಪ್ರಮಾಣಿಕವಾಗಿ ಯಾರು ರಸ್ತೆ ಬದಿ ಹಣ್ಣು ತರಕಾರಿ ಮಾರಾಟ ಮಾಡಲಾಗುತ್ತಿದೆ ಅಂತವರಿಗೆ ಮಾತ್ರ ತೆರೆದ ಮಾರುಕಟ್ಟೆಯಲ್ಲಿ ಮೊದಲ ಅವಕಾಶ ಕಲ್ಪಿಸಿಬೇಕು ಯಾವುದೇ ಕಾರಣಕ್ಕೂ ಇದರಲ್ಲಿ ರಾಜಕೀಯಕ್ಕೆ ಮಣಿಯದೇ ಬೀದಿ ಬದಿಯ ಹಣ್ಣು ತರಕಾಗಿ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಸುಸಜ್ಜಿತವಾದ ತೆರೆದ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂದು ನಗರಸಭೆ ಪೌರಾಯುಕ್ತ ನವೀನ್ ಚಂದ್ರ ಅವರಿಗೆ ತಾಕೀತು ಮಾಡಿದರು.

ಜಯನಗರದ ಅಂಬೇಡ್ಕರ್ ಉದ್ಯಾನವನದ ಹಿಂಭಾಗದಲ್ಲಿ ಸುಸಜ್ಜಿತವಾದ ವಿದ್ಯುತ್ ಚಿತಾಗಾರ ಗುದ್ದಲಿ ಪೂಜೆಗೆ ತೆರಳಿದ ಶಾಸಕರಿಗೆ ಸ್ಥಳೀಯರು ಕೆಲ ಕಾಲ ಉದ್ಘಾಟನೆಗೆ ಅಡ್ಡಿ ಪಡಿಸಿದರಲ್ಲದೆ ಇಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತದೆ ಅಲ್ಲದೆ ಸ್ಮಶಾನ ಜಾಗ ಚಿಕ್ಕದಾಗಿದ್ದು ವಿದ್ಯುತ್ ಚಿತಾಗಾರ ನಿರ್ಮಾಣದಿಂದ ಸ್ಮಶಾನ ಜಾಗದ ಕೊರತೆ ಉಂಟಾಗುತ್ತದೆ ಎಂದು ತಕರಾರು ಮಾಡಿದರು ಪಕ್ಕದಲ್ಲೇ ಮತ್ತೊಂದು ಸ್ಥಳದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಿ ಗುದ್ದಲಿ ಪೂಜೆ ನೆರೆವೇರಿಸಿದರು.

ನಗರದ ಬಸ್ ನಿಲ್ದಾಣ ಸಮೀಪವಿರುದ ಸಂತೇ ಮೈದಾನವನ್ನು ಅಭಿವೃದ್ದಿ ಪಡಿಸಿ ರೈತರಿಗೆ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲವು ದಿನಗಳ ಹಿಂದೆ ಕೊರೆಸಲಾಗಿದ್ದ ಬೋರ್ ವೆಲ್ ಪಂಪು ಮೋಟರ್ ಅಳವಡಿಸಿ ಸಂಪ್ ಗೆ ನೀರು ತುಂಬಿಸಿ ಒತ್ತುವರಿಯಾಗಿರುವ ರಸ್ತೆಯನ್ನು ಕೂಡಲೇ ತೆರವುಗೊಳಿಸಲು ಕ್ರಮ ವಹಿಸುವಂತೆ ನಗರಸಭೆ ಪೌರಾಯುಕ್ತ ನವೀನ್ ಚಂದ್ರ ಅವರಿಗೆ ಸೂಚಿಸಿದರು.


ನಗರದ ಒಳಾಂಗಣ ಕ್ರೀಡಾಂಗಣ ಪಕ್ಕದಲ್ಲಿ ಬ್ಯಾಸ್ಕೆಟ್ ಬಾಲ್ ಸಿಂಥೆಟಿಕ್ ಟ್ರ್ಯಾಕ್ಸ್, ಎಸ್.ಎನ್.ಆರ್.ಆಸ್ಪತ್ರೆ ಬಳಿಯ ಕೆ.ಇ.ಬಿ.ರಸ್ತೆಯಲ್ಲಿ ಸಾರ್ವಜನಿಕ ಶೌಚಾಲಯ, ಜಯನಗರದ ಅಂಬೇಡ್ಕರ್ ಪಾರ್ಕ್ ಹಿಂಭಾಗದಲ್ಲಿ 4 ಕೋಟಿ ಚೆಚ್ಚದಲ್ಲಿ ಸುಸಜ್ಜಿತವಾದ ಹೈಟೆಕ್ ವಿದ್ಯುತ್ ಚಿತಾಗಾರಕ್ಕೆ ಭೂಮಿ ಪೂಜೆ, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹಿಂಭಾಗ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಮ್ಮ ಕ್ಲಿನಿಕ್ ಉದ್ಘಾಟನೆ. ನಗರದ ಎಂ.ಜಿ. ರಸ್ತೆಯ ಆಚಾರಿ ಬೀದಿಯಲ್ಲಿ ‘ಹೂ, ಹಣ್ಣು ಮತ್ತು ತರಕಾರಿಗರ 80 ಲಕ್ಷದಲ್ಲಿ ತೆರೆದ ಮಾರುಕಟ್ಟೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದರು.

ಇದನ್ನು ಓದಿದ್ದೀರಾ..? ಗೊಬ್ಬರ ಕಾಳಸಂತೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಚಿವರಿಂದ ಖಡಕ್ ಸೂಚನೆ

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವೈ. ಶಿವಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ,ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಪ್ಸರ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಫೈರೋಜ್ ಖಾನ್ ನಗರಸಭೆ ಪೌರಾಯುಕ್ತ ನವೀನ್ ಚಂದ್ರ, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಬೆಳಗಾನಹಳ್ಳಿ ಮುನಿವೆಂಕಟಪ್ಪ, ರಫಿ ಪಾಷ,ಅಂಚೆ ಅಶ್ವಥ್ ಸೇರಿದಂತೆ ಅನೇಕರು ಶಾಸಕರಿಗೆ ಸಾಥ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...