ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೈತಪರ ಯೋಜನೆ ಜಾರಿಯಾಗಿಲ್ಲ: ವಿಜಯೇಂದ್ರ

Date:

ರಾಜ್ಯದಲ್ಲಿ ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೈತಪರ ಯೋಜನೆಗಳು ಜಾರಿಯಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ದಾವಣಗೆರೆಯಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಮೆಕ್ಕೆಜೋಳ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಅತಿವೃಷ್ಟಿಯಿಂದ ರೈತರ ಬೆಳೆ ನಾಶವಾದಾಗಲೂ ಕಾಂಗ್ರೆಸ್ ಸರ್ಕಾರ ಸ್ಪಂದಿಸಿಲ್ಲ. ಅಷ್ಟು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದರೂ ಇಲಾಖೆಗಳ ಸಚಿವರು ಪರಿಹಾರ ಒದಗಿಸಲು ಮುಂದೆ ಬಂದಿಲ್ಲ. ಸಾಲದು ಎಂಬಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತಪರ ಯೋಜನೆಗಳಿಗೆ ಕಲ್ಲು ಹಾಕುತ್ತಿದೆ.‌ ರೈತರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ರೈತರ ಅಳಲು ಕೇಳಲು ಮುಂದಾಗುತ್ತಿಲ್ಲ. ಟಿಬಿ ಡ್ಯಾಂ ಸೇರಿದಂತೆ ಹಲವು ಅಣೆಕಟ್ಟುಗಳ ಗೇಟ್ ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಂಡಿಲ್ಲ. ಅದರಿಂದ ಬೆಳೆಗೆ ಸರಿಯಾದ ನೀರು ಪೂರೈಕೆ ಆಗಿಲ್ಲ. ಒಂದೆಡೆ ಅತಿವೃಷ್ಟಿಯಾದರೆ, ಇನ್ನೊಂದೆಡೆ ಅನಾವೃಷ್ಟಿ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸರ್ಕಾರ ಮಾತ್ರ ಯಾವುದಕ್ಕೂ ಸ್ಪಂದಿಸುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆಗಳು ಹತ್ತಿರ ಬಂದಾಗ ಗ್ಯಾರಂಟಿ ಹಣ ಪಾವತಿಸಿ ಜನರನ್ನು ವಂಚಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ 45 ಲಕ್ಷ ಮೆ.ಟನ್ ಮೆಕ್ಕೆಜೋಳ ದಾಸ್ತಾನು ಇದೆ. ಆದರೆ ಸರ್ಕಾರ, ಖರೀದಿ ಕೇಂದ್ರವನ್ನೂ ತೆರೆಯದೆ, ಬೆಂಬಲ ಬೆಲೆಯನ್ನೂ ನೀಡದೆ ರೈತರಿಗೆ ಅನ್ಯಾಯ ಎಸಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಡಿಸೆಂಬರ್‌ 1 ಹಾಗೂ 2ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರೈತರು ಹೋರಾಟಕ್ಕೆ ಮುಂದಾಗಬೇಕು” ಎಂದು ಕರೆ ನೀಡಿದರು.

“ಮುಂದಿನ ಬೆಳಗಾವಿ ಅಧಿವೇಶನದಲ್ಲಿ ರೈತರೇ ಇದಕ್ಕೆ ತಕ್ಕ ಪಾಠ ಕಲಿಸಬೇಕು. ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಬೇಕು. ರೈತರ ಹೋರಾಟ ವಿಧಾನಸೌಧ ತಲುಪುವ ಮುನ್ನ, ಅಧಿವೇಶನಕ್ಕೆ ಮುನ್ನ ರೈತರ ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ದಾವಣಗೆರೆ | ಅಂತರ್ಜಾತಿ ವಿವಾಹ ಅಂದು ಕಲ್ಯಾಣ ಕ್ರಾಂತಿಗೆ ಇಂದು ಮರ್ಯಾದಾ ಹತ್ಯೆಗೆ ದಾರಿ: ಎಚ್ಎಲ್ ಪುಷ್ಪ

ಮಾಡಾಳ್ ಮಲ್ಲಿಕಾರ್ಜುನ್ ಮಾತನಾಡಿ, “ಯಡಿಯೂರಪ್ಪನವರು ಅಧಿಕಾರದಲ್ಲಿದ್ದ ಅಂದಿನಿಂದಲೂ ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಬೆಂಬಲ ನೀಡಿದ್ದರು. ರೈತರ ಪರವಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ದುರಾಡಳಿತ ನಡೆಸುತ್ತಿದೆ. ಇದರ ವಿರುದ್ಧ ಮುಂದೆ ಬೇರೆ ಬೇರೆ ರೀತಿಯ ಹೋರಾಟ ಪ್ರಾರಂಭವಾಗಲಿದೆ” ಎಂದು ಎಚ್ಚರಿಸಿದರು.

ಬಿಜೆಪಿ ನಾಯಕರಾದ ಲೋಕಿಕೆರೆ ನಾಗರಾಜ್, ಮಾಜಿ ಸಚೇತಕ ಶಿವಯೋಗಿಸ್ವಾಮಿ, ಅಜಯ್ ಕುಮಾರ್, ಸಿಟಿ ರವಿ, ರೇಣುಕಾಚಾರ್ಯ, ಸತೀಶ್, ಜಿಲ್ಲಾಧ್ಯಕ್ಷ ರಾಜಶೇಖರ , ಮಾಜಿ ಶಾಸಕ ಎಎಸ್ ನಡಹಳ್ಳಿ, ಚಂದ್ರಶೇಖರ ಪೂಜಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...