ಚಿಕ್ಕಬಳ್ಳಾಪುರ | ಬಿಸಿಯೂಟ ನೌಕರರ ವೇತನ ಹೆಚ್ಚಿಸದ ಕೇಂದ್ರದ ವಿರುದ್ಧ ಪ್ರತಿಭಟನೆ

Date:

2014 ರಿಂದ ಈವರೆಗೆ ಕೇಂದ್ರ ಸರಕಾರ ಬಿಸಿಯೂಟ ನೌಕರರ ಗೌರವಧನ ಹೆಚ್ಚಳ ಮಾಡಿಲ್ಲ. ಕೇಂದ್ರ ಸರಕಾರ 26 ಸಾವಿರಕ್ಕೆ ಗೌರವಧನ ಹೆಚ್ಚಿಸಬೇಕು. ಅಲ್ಲಿಯವರೆಗೆ ರಾಜ್ಯ ಸರಕಾರವೇ ಪಾಂಡಿಚೆರಿ ಹರಿಯಾಣ, ತಮಿಳುನಾಡು ಮಾದರಿಯಲ್ಲಿ 7 ರಿಂದ 12 ಸಾವಿರ ವೇತನ ಕೊಡಬೇಕು ಎಂದು ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಪದಾಧಿಕಾರಿಗಳು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.

ಸಿಐಟಿಯು ನೇತೃತ್ವದಲ್ಲಿ ಗುರುವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ನೌಕರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳ, ಮಧ್ಯಾನದ ಬಿಸಿಯೂಟ ಯೋಜನೆ ಪ್ರಾರಂಭವಾಗಿ 24 ವರ್ಷಗಳು ಕಳೆಯುತ್ತಿವೆ. ಲಕ್ಷಾಂತರ ಮಕ್ಕಳಿಗೆ ಹಾಲು ನೀಡಿ, ಶಾಲೆಯನ್ನು ಸ್ವಚ್ಛಗೊಳಿಸಿ, ಬಿಸಿ ಬಿಸಿ ಆಹಾರ ನೀಡಿ, ಶಾಲೆಯಲ್ಲಿ ನೀಡುವ ದಿನನಿತ್ಯದ ಎಲ್ಲಾ ಕೆಲಸ ಮಾಡಿ, ಶೈಕ್ಷಣಿಕ ಆಸಕ್ತಿ ಮೂಡಿಸುವಲ್ಲಿ ತಾಯ್ತತನದ ಪ್ರೀತಿ ನೀಡುವ ಪರಿಶ್ರಮ ಕೆಲಸವಾಗಿದೆ. ಇಂತಹ ಕೆಲಸ ಮಾಡುತ್ತಿರುವ ನೌಕರರಿಗೆ ಕನಿಷ್ಠ ವೇತನವನ್ನೂ ನೀಡದೆ ಶೋಷಣೆ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

ಅಕ್ಷರ ದಾಸೋಹ ಮನವಿ

ಮೇಲ್ನೋಟಕ್ಕೆ ಸರ್ಕಾರದ ಸುತ್ತೋಲೆಯಲ್ಲಿ 4 ಗಂಟೆ ಕೆಲಸವೆಂದು ನಿಗದಿಯಾಗಿದೆ. ಆದರೆ, ಪ್ರತಿ ಶಾಲೆಯಲ್ಲಿ ದಿನಕ್ಕೆ 6 ಗಂಟೆ ಕೆಲಸ ಮಾಡುತ್ತೇವೆ. ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ನೀಡುತ್ತಿರುವ ಕೋಳಿ ಮೊಟ್ಟೆ ಬೇಯಿಸಿ ಸುಲಿದು ಮಕ್ಕಳಿಗೆ ಕೊಡುವುದು, ಆಹಾರ ಪದಾರ್ಥಗಳನ್ನು ಸ್ವಚ್ಛಗೊಳಿಸುವುದು, ಕೆಲವೆಡೆ ನೂರಾರು ಮಕ್ಕಳಿಗೆ ಚಪಾತಿ ಮಾಡಿಕೊಡುವುದು ಶ್ರಮದಾಯಕ ಕೆಲಸವಾಗಿದೆ. ಬರಗಾಲ ಬೇಸಿಗೆ ಕಾಲದಲ್ಲಿ ಕೆಲಸ ಮಾಡಬೇಕಾಗುತ್ತದೆ. ಆದ್ದರಿಂದ ಕನಿಷ್ಠ ವೇತನ 6 ಸಾವಿರ ನೀಡಲೇಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವುದನ್ನು ನಿಲ್ಲಿಸಬೇಕು. ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು. ಖಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು. ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು ಎಂದರು.

ಅಕ್ಷರ ದಾಸೋಹ

ಶಾಲೆಗಳಲ್ಲಿ ಗ್ರೂಪ್ “ಡಿ” ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ, ಕೈತೊಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆಂದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಅಂಬೇಡ್ಕರ್ ವಿವಾದ | ಶಾ ಹೇಳಿಕೆಗೆ ಚಿಕ್ಕಬಳ್ಳಾಪುರ ದಲಿತ ಮುಖಂಡರ ವ್ಯಾಪಕ ಖಂಡನೆ

ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಅಡುಗೆಯವರು ಇರಲೇಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿ 18ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಮುನಿಕೃಷ್ಣಪ್ಪ, ಸಿದ್ದಗಂಗಪ್ಪ, ದೇವರಾಜು, ಶ್ರೀನಿವಾಸ್‌, ರಾಜಮ್ಮ, ಕಾಂತಪ್ಪ ಸೇರಿದಂತೆ ನೂರಾರು ಮಂದಿ ಅಕ್ಷರ ದಾಸೋಹ ನೌಕರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...