‘ಉಗ್ರ’ ಎನ್ನಲು ಪೂರಕ ಸಾಕ್ಷ್ಯವಿಲ್ಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್ ಜಾಮೀನು

Date:

ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಪ್ರಕರಣದಲ್ಲಿ ಕಳೆ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟಿದ್ದ ಮಾಜಿ ಶಾಸಕ ದಿವಂಗತ ಇದಿನಬ್ಬ ಅವರ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಯಾಗಿದ್ದು, ‘ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ’ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಐಸಿಸ್ ನಂಟಿನ ಆರೋಪದಡಿ ಯುಎಪಿಎ ಕಾಯ್ದೆಯಡಿ ಅಮರ್ ಅಬ್ದುಲ್ ರೆಹಮಾನ್ ಐಸಿಸ್ ನಂಟಿನ ಆರೋಪದಡಿ ಅಗಸ್ಟ್ 21, 2021ರಂದು ಉಳ್ಳಾಲದ ಮನೆಯಿಂದ ಬಂಧಿಸಲಾಗಿತ್ತು. ತನ್ನ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟಿನಲ್ಲಿ ಅಮ್ಮರ್ ಅಬ್ದುಲ್ ರೆಹಮಾನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನಿರಾಕರಿಸಿದ ಹಿನ್ನೆಲೆ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸದ್ಯ ಸುದೀರ್ಘ ವಿಚಾರಣೆ ಬಳಿಕ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಮ್ಮರ್ ಅಬ್ದುಲ್ ರೆಹಮಾನ್ ಜಾಮೀನು ಆದೇಶದಲ್ಲಿ ಹಲವು ಅಂಶಗಳನ್ನು ದೆಹಲಿ ಹೈಕೋರ್ಟ್ ಉಲ್ಲೇಖಿಸಿದ್ದು, ‘ಉಗ್ರ ಸಂಘಟನೆ ಜೊತೆಗಿನ ಆಕರ್ಷಣೆಯನ್ನ ಉಗ್ರ ನಂಟು ಎನ್ನಲು ಆಗಲ್ಲ’ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐಸಿಸ್ ಉಗ್ರರ ವಿಡಿಯೋ ಡೌನ್‌ಲೋಡ್, ಭಾಷಣ ಆಲಿಸೋದು ಯುಎಪಿಎ ಕಾಯ್ದೆಯಡಿ ತರಲು ಆಗುವುದಿಲ್ಲ. ಈ ಸಾಕ್ಷ್ಯ ಬಳಸಿ ಯುಎಪಿಎ ಸೆಕ್ಷನ್ 38 ಮತ್ತು 39 ರಡಿ ತರಲು ಬರುವುದಿಲ್ಲ, ಆರೋಪಿ ಮೊಬೈಲ್‌ನಲ್ಲಿ ಲಾಡೆನ್, ಐಸಿಸ್ ಬಾವುಟಗಳು, ಐಸಿಸ್ ಪರ ಭಾಷಣಗಳ ತುಣುಕು ಸಿಕ್ಕಿದೆ ಎಂದ ಮಾತ್ರಕ್ಕೆ ಇದೆಲ್ಲದರ ಮೂಲಕ ಆತನಿಗೆ ಐಸಿಸ್ ನಂಟಿದೆ ಎನ್ನಲು ಆಗಲ್ಲ. ಇವುಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್‌ನೆಟ್‌ನಲ್ಲಿ ಸಿಗುತ್ತದೆ. ಕುತೂಹಲ ಇರೋ ಯಾರು ಬೇಕಾದರೂ ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಬಹುದು.ಹಾಗಾಗಿ ಇದನ್ನು ಇಟ್ಟುಕೊಂಡು ಐಸಿಸ್ ನಂಟನ್ನು ಸಾಬೀತುಪಡಿಸಲು ಆಗಲ್ಲ” ಎಂದು ಐಸಿಸ್ ನಂಟಿನ ಆರೋಪ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನೀಡುವ ವೇಳೆ ಅಭಿಪ್ರಾಯಪಟ್ಟಿದೆ.

ಈಗಾಗಲೇ ಪ್ರಕರಣ ಸಂಬಂಧ ಹಲವು ಜನರ ವಿರುದ್ದ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಅಮ್ಮರ್ ಅಬ್ದುಲ್ ರೆಹಮಾನ್ ಜೊತೆಗೆ ದಿ.ಇದಿನಬ್ಬ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಕೂಡ ಬಂಧಿಸಿತ್ತು.

ದೀಪ್ತಿ ಮಾರ್ಲ, ಮಾಜಿ ಶಾಸಕ ಇದಿನಬ್ಬ ಮಗ ಬಿ.ಎಂ.ಭಾಷಾರ ಮಗ ಅನಾಸ್ ಅಬ್ದುಲ್ ಪತ್ನಿಯಾಗಿದ್ದು, ದೀಪ್ತಿ ಮಾರ್ಲ ಅಮ್ಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ ಮಾಡುತ್ತಿದ್ದ ಆರೋಪವನ್ನು ಎನ್ಐಎ ಮಾಡಿತ್ತು.

ಇದನ್ನು ಓದಿದ್ದೀರಾ? ಐಪಿಎಲ್ ಪ್ಲೇ-ಆಫ್ | ಎಲ್ಲವೂ ’18’ರ ಆಟ: ಆರ್‌ಸಿಬಿಗೆ ಖುಲಾಯಿಸಬಹುದೇ 18ರ ಅದೃಷ್ಟ?

ಇದೀಗ ಐಸಿಸ್ ನಂಟಿನ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆ ಅಮ್ಮರ್ ಅಬ್ದುಲ್ ರೆಹಮಾನ್‌ಗೆ ಜಾಮೀನು ನೀಡಲಾಗಿತ್ತು. ದೀಪ್ತಿ ಮಾರ್ಲ ಇನ್ನೂ ಕೂಡ ಎನ್‌ಐಎ ವಶದಲ್ಲಿದ್ದಾರೆಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...