ಅನಿವಾಸಿ ಕನ್ನಡಿಗ ಝಕರಿಯಾ ಜೋಕಟ್ಟೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Date:

ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಸೌದಿ ಅರೇಬಿಯಾ ಜುಬೈಲ್‌ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಠಿತ ಸಂಸ್ಥೆ ಎಂ.ಫ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಝಕರಿಯಾ ಜೋಕಟ್ಟೆ ಅವರು “ಅನಿವಾಸಿ ಕನ್ನಡಿಗ” ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಜ್ಪೆಗುತ್ತು ಹಾಜಿ ಬಿ. ಶೇಕುಂಞಿ ಹಾಗೂ ಕತೀಜಮ್ಮ ದಂಪತಿ ಪುತ್ರನಾಗಿರುವ ಝಕರಿಯಾ ಜೋಕಟ್ಟೆ 1958 ಮೇ 10 ರಂದು ಜೋಕಟ್ಟೆಯ ತೋಕೂರಿನಲ್ಲಿ ಜನಿಸಿದರು. 5 ಮಕ್ಕಳಲ್ಲಿ ಹಿರಿಯರಾದ ಝಕರಿಯಾ ಪ್ರೌಢ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಕಠಿಣ ಕೆಲಸ ಮಾಡಿ ಜೀವನ ಪ್ರಾರಂಭಿಸಿದರು. ಬೀದಿ ಬೀದಿಗಳಲ್ಲಿ ಬೆಲ್ಲ ವ್ಯಾಪಾರ, ವೆಲ್ಡಿಂಗ್ ಕೆಲಸ, ಗೋಣಿ ಹೊರುವ ಕಾರ್ಮಿಕನಾಗಿ, ವಿದೇಶದಲ್ಲಿ 28ನೇ ಮಹಡಿಗೆ ಸಿಮೆಂಟು ಹೊತ್ತು ಶ್ರಮಪಟ್ಟು ದುಡಿದಿದ್ದಾರೆ.

ಹಲವಾರು ವರ್ಷಗಳ ಅವರ ಕಠಿಣ ಪರಿಶ್ರಮ, ತ್ಯಾಗ ಹಾಗೂ ಅನುಭವದ ಫಲವಾಗಿ 2008ರಲ್ಲಿ ಮೂವರು ಕೆಲಸಗಾರರನ್ನು ಇಟ್ಟುಕೊಂಡು ಹಿರಿಯ ಪುತ್ರ ಝಹೀರ್ ರನ್ನೂ ಸೇರಿಸಿಕೊಂಡು ಸೌದಿ ಅರೇಬಿಯಾದ ಜುಬೈಲ್ ನಲ್ಲಿ “ಅಲ್ ಮುಝೈನ್” ಮೇನ್ ಪವರ್ ಕಂಪೆನಿಯನ್ನು ಸ್ಥಾಪಿಸಿದರು. ಅವಿರತ ದುಡಿಮೆಯಿಂದ ಹಂತಹಂತವಾಗಿ ಬೆಳೆದ ಅಲ್ ಮುಝೈನ್ ಕಂಪೆನಿಯಲ್ಲಿ ಪ್ರಸ್ತುತ 8 ಸಾವಿರ ಉದ್ಯೋಗಿಗಳಿದ್ದು, 2027ಕ್ಕೆ 10 ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ. ಅಲ್ ಮುಝೈನ್ ಬಳಿಕ ಹತ್ತಾರು ಬೇರೆ ಬೇರೆ ಕಂಪೆನಿಗಳನ್ನು ಸ್ಥಾಪಿಸಿದ ಝಕರಿಯಾ ಅವರು ಸೌದಿ ಅರೇಬಿಯಾ ಅಲ್ಲದೇ ಬಹರೈನ್, ಯುಎಇ, ಒಮಾನ್, ಕತಾರ್, ಕುವೈತ್, ಲಂಡನ್ ಹಾಗೂ ಭಾರತಕ್ಕೆ ತಮ್ಮ ಉದ್ಯಮವನ್ನು ವಿಸ್ತರಿಸಿದ್ದಾರೆ. ಶಿಕ್ಷಣ ಸಂಸ್ಥೆಗೂ ಕೈಯಾಡಿಸಿರುವ ಅವರು ಅಲ್ ಕೋಬರ್ ನಲ್ಲಿ ಯೇನೆಪೋಯ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿದ್ದು, ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಹೊಂದುವುದು ಮುಂದಿನ ಯೋಜನೆಯಾಗಿದೆ. AI ಇನ್ನೋವೇಶನ್ ಯೋಜನೆ, ಕರಾವಳಿಯ ಅಭಿವೃದ್ಧಿ ಗುರಿಯನ್ನೂ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜದಲ್ಲಿ ಸೇವಗೈಯುವಾಗ ಪ್ರಶಸ್ತಿಯನ್ನು ನಾನೆಂದೂ ಬಯಸಿಲ್ಲ. ಅದಕ್ಕಾಗಿ ಅರ್ಜಿಯೂ ಹಾಕಿಲ್ಲ. ನನ್ನ ಕೆಲ ಸ್ನೇಹಿತರು ನನಗೆ ತಿಳಿಯದೇ ಇದರ ಹಿಂದೆ ಕೆಲಸ ಮಾಡಿ ಅಚ್ಚರಿಯ ಕೊಡುಗೆ ನೀಡಿದ್ದಾರೆ. ನಾನು ಬಡತನದಿಂದಲೇ ಬೆಳೆದು ಮೇಲೆ ಬಂದವ. ಅಶಕ್ತರ ನೋವು ಗೊತ್ತಿದೆ. ಅದಕ್ಕಾಗಿ ಸದಾ ಸ್ಪಂದಿಸುತ್ತೇನೆ. ಪ್ರಶಸ್ತಿ ಪ್ರಕಟವಾಗುವಾಗ ನಾನು ಸೌದಿ ಅರೇಬಿಯಾದಲ್ಲಿದ್ದೇನೆ. ಈಗಲೂ ಅಲ್ಲಿರುವೆ. ನವಂಬರ್ 1ರಂದು ನನ್ನ ಸ್ನೇಹಿತರೋರ್ವರ ಮದುವೆ ಸಮಾರಂಭವು ಜೈಪುರದಲ್ಲಿ ನಡೆಯಲಿದ್ದು, ಅದಕ್ಕೆ ತೆರಳುವ ಸಿದ್ಧತೆಯಲ್ಲಿದ್ದಾಗ ಪ್ರಶಸ್ತಿಯ ಪ್ರಕಟಣೆ ದಿಗ್ಭ್ರಮೆ ಹುಟ್ಟಿಸಿದೆ. ಪ್ರಶಸ್ತಿಯ ಗೌರವವು ಸಾಮಾಜಿಕ ಜವಾಬ್ದಾರಿಯ ಜೊತೆಗೆ ಸಮಾಜದ ಹೊರೆಯನ್ನೂ ಹೆಚ್ಚಿಸಿದೆ. ರಾಜ್ಯ ಸರಕಾರಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ” ಎನ್ನುತ್ತಾರೆ ಝಕರಿಯಾ ಜೋಕಟ್ಟೆ.

ಇದನ್ನೂ ಓದಿ: ದಕ್ಷಿಣ ಕನ್ನಡ | ವಿವಾದಾತ್ಮಕ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಪ್ರಸ್ತುತ ಮಂಗಳೂರು ಬೋಳಾರ್ ನಿವಾಸಿಯಾಗಿರುವ ಝಕರಿಯಾ ಜೋಕಟ್ಟೆ ಪತ್ನಿ ಹಝ್ರ ಝಕರಿಯಾ, ಮೂವರು ಪುತ್ರರಾದ ಝಹೀರ್, ನಝೀರ್ ಮತ್ತು ಝಾಹಿದ್ ಅವರು ವಿದೇಶದಲ್ಲಿ ಬೇರೆ ಬೇರೆ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್, ಹಿದಾಯ ಫೌಂಡೇಶನ್, ಝರಾ ಫ್ಯಾಮಿಲಿ ಚಾರಿಟಿ ಟ್ರಸ್ಟಿನ ಅಧ್ಯಕ್ಷರಾಗಿರುವ ಝಕರಿಯಾ ಜೋಕಟ್ಟೆ ರಾಜ್ಯದ ಹಲವಾರು ಸಂಘಸಂಸ್ಥೆಗಳ ನಿರ್ದೇಶಕ, ಸಲಹೆಗಾರ, ಪ್ರಾಯೋಜಕರಾಗಿ ಸಹಸ್ರಾರು ಬಡ, ಅಶಕ್ತರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಹಾಗೂ ಉದ್ಯಮದ ಯಶಸ್ವಿಗಾಗಿ ದೇಶ-ವಿದೇಶಗಳಿಂದ ಹಲವಾರು ಪ್ರಶಸ್ತಿ ಸನ್ಮಾನಗಳು ಅರಸಿ ಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...