ಮಂಡ್ಯ | ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ: ಮುಂದುವರಿದ ಹಗ್ಗ-ಜಗ್ಗಾಟ

Date:

ಮಂಡ್ಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರ ನೀಡಬೇಕೆಂದು ಹಲವು ದಿನಗಳಿಂದ ವಿವಿಧ ಪ್ರಗತಿಪರ ಸಂಘಟನೆಗಳು ವಿಭಿನ್ನವಾದ ಹೋರಾಟ ನಡೆಸುತ್ತಿವೆ, ಆದರೆ ಈ ಹೋರಾಟಕ್ಕೆ ಸಾಹಿತ್ಯ ಸಮ್ಮೇಳನ ಆಯೋಜನೆಯ ಮುಂಚೂಣಿಯಲ್ಲಿರುವ ನಾಯಕರು, ಸ್ಪಷ್ಟವಾಗಿ ಏನನ್ನು ತಿಳಿಸಿಲ್ಲದ ಕಾರಣ ಮಾಂಸಾಹಾರ ನೀಡುವ ವಿಚಾರದಲ್ಲಿ ಹಗ್ಗ-ಜಗ್ಗಾಟ ಮುಂದುವರಿದಿದೆ.

IMG 20241217 WA0013 1

ಇಂದು ಮಂಗಳವಾರ ಖಾಸಗಿ ಹೋಟೇಲ್‌ನಲ್ಲಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಕೂಡ ಹೋರಾಟಗಾರರು, ಈ ಸಮ್ಮೇಳನದಲ್ಲಿ ಮಾಂಸಾಹಾರ ಇರಲೇಬೇಕು. ಸಮ್ಮೇಳನವು ಮೂರು ದಿನಗಳ ಕಾಲ ನಡೆಯಲಿದೆ, ಈ ಪೈಕಿ ಒಂದು ಊಟದ ಸಮಯದಲ್ಲಾದರೂ ಕನಿಷ್ಠ ಪ್ರಮಾಣದ ಕೋಳಿ ಮಾಂಸ ಹಾಗೂ ಮೊಟ್ಟೆಯನ್ನು ಬಡಿಸಬೇಕು  ಎಂದು ಪಟ್ಟು ಹಿಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ನಾವು ಮಾಂಸಾಹಾರವನ್ನು ಕೀಳೆಂದು ಪರಿಗಣಿಸಿಲ್ಲ, ಎಲ್ಲ ಆಹಾರದ ಬಗ್ಗೆಯೂ ಗೌರವವಿದೆ. ನಿಮ್ಮ ಹೋರಾಟ, ಉದ್ದೇಶದ ಬಗ್ಗೆ ಗೌರವವಿದೆ. ನಮ್ಮ ಮೇಲೆ ಭರವಸೆ ಇಡಿ’ ಎಂದಷ್ಟೇ ತಿಳಿಸಿದರು ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಮಂಡ್ಯ | ಕಳಪೆ ಕಾಮಗಾರಿ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಆರ್‌ಎಸ್ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಶಾಸಕ ರವಿಕುಮಾರ್ ಗಣಿಗ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಕರುನಾಡು ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ, ಸಿಪಿಐಎಂ ಕೃಷ್ಣೇಗೌಡ, ಜಾಗೃತ ಕರ್ನಾಟಕದ ಸಂತೋಷ್, ಸಿಐಟಿಯು ಸಿ.ಕುಮಾರಿ, ದಸಂಸ ಎಂ.ವಿ.ಕೃಷ್ಣ, ಕರ್ನಾಟಕ ಸಮ ಸಮಾಜ ಸಂಘಟನೆಯ ನರಸಿಂಹಮೂರ್ತಿ, ಅಂಬೇಡ್ಕರ್ ವಾರಿಯರ್ಸ್ ನ ಗಂಗರಾಜು, ಪರಿವರ್ತನ ಸಂಸ್ಥೆಯ ಟಿ.ಡಿ.ನಾಗರಾಜು, ವಕೀಲರಾದ ಲಕ್ಷ್ಮಣ್ ಚೀರನಹಳ್ಳಿ, ಜೆ.ರಾಮಯ್ಯ ಸೇರಿದಂತೆ ಮತ್ತಿತರರತು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...