ಮತದಾನಕ್ಕೆ ತೆರಳಿದ್ದಾಗ ಹೆರಿಗೆ; ಮತ ಕೇಂದ್ರದಲ್ಲೇ ಜನಿಸಿದ ಮಗು

Date:

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬುಧವಾರ ನಡೆಯುತ್ತಿರುವ ಮತದಾನಕ್ಕೆ ತುಂಬು ಗರ್ಭಿಣಿಯೊಬ್ಬರು ಮತ ಚಲಾಯಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡು ಮತ ಕೇಂದ್ರದಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಬಳ್ಳಾರಿಯ ಕೂರ್ಲಂಗುದಿ ಗ್ರಾಮದಲ್ಲಿ ಗರ್ಭಿಣಿ ಮಣಿಲಾ (23) ಎಂಬುವವರು ಮತ ಚಲಾಯಿಸಲು ಬಂದಿದ್ದರು. ಈ ವೇಳೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿದ್ದರಿಂದ ಗರ್ಭಿಣಿ ಸರತಿ ಸಾಲಿನಲ್ಲಿ ನಿಂತಿದ್ದರು. ಹೆಚ್ಚು ಹೊತ್ತು ನಿಂತು ಮತ ಚಲಾಯಿಸಿ, ಕೊಠಡಿಯಿಂದ ಹೊರ ಬರುವ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಮತದಾನ ಕೇಂದ್ರದಲ್ಲೇ ಆಶಾ ಕಾರ್ಯಕರ್ತೆಯರು ಮತ್ತು ಚುನಾವಣೆಗೆ ನಿಯೋಜನೆಗೊಂಡಿದ್ದ ಮಹಿಳಾ ಸಿಬ್ಬಂದಿ ಸಹಕಾರದಿಂದ ಸಹಜ ಹೆರಿಗೆಗೆ ಸಹಕರಿಸಿದ್ದಾರೆ. ಹೆರಿಗೆಯಾದ ಕೂಡಲೇ ಮಹಿಳೆಯನ್ನು ಹತ್ತಿರದ ಪ್ರಾಥಮಿಕ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತಗಟ್ಟೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರು ಆರೊಗ್ಯವಾಗಿದ್ದಾರೆ ಎಂದು ಮತಗಟ್ಟೆ ಕೇಂದ್ರದ ಅಧಿಕಾರಿ ವೆಂಕಟೇಶ್ ರಾಮಚಂದ್ರಪ್ಪ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ‘ಓಟಿಂಗ್‌’ಗಾಗಿ ಅಮೇರಿಕಾದಿಂದ ಬಂದ ವ್ಯಕ್ತಿ; ಮತದಾನ ಮಾಡಲು ಆಗಲೇ ಇಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...