ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ಪರ-ವಿರೋಧ ಚರ್ಚೆ: ಸಮಸ್ಯೆಗೆ ಪ್ರತ್ಯೇಕ ರಾಜ್ಯ ಪರಿಹಾರವೇ?

Date:

ಇದು ಕೇವಲ ಅಭಿಪ್ರಾಯವಲ್ಲ ಉತ್ತರ ಕರ್ನಾಟಕ ಜನರನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಿರುವುದೇ ಇದಕ್ಕೆ ಕಾರಣ. ನಂಜುಡಪ್ಪ ವರದಿ, 371(ಜೆ), ಸುವರ್ಣಸೌಧ, ಬೆಳಗಾವಿ ಅಧಿವೇಶನ ಎಲ್ಲವೂ ಸಮಾನತೆಗಾಗಿ ಹುಟ್ಟಿದ ಪ್ರಯತ್ನಗಳು. ಆದರೆ ಅವುಗಳ ಅರ್ಥಪೂರ್ಣ ಜಾರಿಯಾಗದಿದ್ದರೆ ಜನರ ನಿರೀಕ್ಷೆ ಬೇಸರವಾಗುತ್ತದೆ. 

ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಗಮನ ನೀಡುವ ಉದ್ದೇಶದಿಂದ ಎಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಲಾಯಿತು. ಅದರ ಭಾಗವಾಗಿ ಪ್ರತಿವರ್ಷ ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲಾಗುತ್ತಿದೆ. ಆದರೆ ಅಧಿವೇಶನಗಳಿದ್ದರೂ ಉತ್ತರ ಕರ್ನಾಟಕ ಭಾಗದ ಪ್ರಮುಖ ಸಮಸ್ಯೆಗಳ ಕುರಿತು ಸಮರ್ಪಕ ಹಾಗೂ ಪರಿಣಾಮಕಾರಿ ಚರ್ಚೆ ನಡೆಯುತ್ತಿಲ್ಲ ಎಂಬ ಆರೋಪಗಳು ನಿರಂತರವಾಗಿ ಕೇಳಿಬರುತ್ತಿವೆ.

ನೀರಾವರಿ ಯೋಜನೆಗಳು, ಕೈಗಾರಿಕೆಗಳ ಸ್ಥಾಪನೆ, ಶಿಕ್ಷಣ ಸಂಸ್ಥೆಗಳ ವಿಸ್ತರಣೆ, ಉದ್ಯೋಗ ಸೃಷ್ಟಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಅಸಮಾಧಾನ ಇಲ್ಲಿನ ಜನರಲ್ಲಿ ತೀವ್ರವಾಗಿದೆ. ವಿಶೇಷವಾಗಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂಬ ಆರೋಪವೇ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆ ಉಮೇಶ್ ಕತ್ತಿಯವರು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ರಚನೆಯ ಬೇಡಿಕೆಯನ್ನು ಪ್ರಬಲವಾಗಿ ಮುಂದಿಟ್ಟಿದ್ದರು. ಅವರ ನಿಧನದ ನಂತರ ಈ ವಿಚಾರ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದರೂ, ಇತ್ತೀಚೆಗೆ ಮತ್ತೆ ವಿಧಾನಸಭೆ ಅಧಿವೇಶನದಲ್ಲಿ ಈ ಬೇಡಿಕೆ ಗಂಭೀರವಾಗಿ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ಅಧಿವೇಶನದ ವೇಳೆ ಶಾಸಕ ರಾಜು ಕಾಗೆ ಅವರು, “ನಾನು ಸಾಯುವವರೆಗೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸುತ್ತೇನೆ. ನಮ್ಮ ಭಾಗಕ್ಕೆ ಅನುದಾನ ನೀಡುವಲ್ಲಿ ಸರ್ಕಾರ ಸ್ಪಷ್ಟವಾಗಿ ತಾರತಮ್ಯ ಮಾಡುತ್ತಿದೆ” ಎಂದು ಸದನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಈ ಹೇಳಿಕೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರವನ್ನು ಮತ್ತೆ ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಯ ಕೇಂದ್ರಬಿಂದುಗೊಳಿಸಿದೆ.

ಈ ಹಿನ್ನೆಲೆಯಲ್ಲಿ, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಬೇಕೇ? ಅಥವಾ ಸಮಗ್ರ ಕರ್ನಾಟಕದೊಳಗೇ ಸಮಾನ ಅಭಿವೃದ್ಧಿ ಸಾಧ್ಯವೇ? ಎಂಬ ಪ್ರಶ್ನೆ ಮತ್ತೊಮ್ಮೆ ಉದ್ಭವಿಸಿದೆ. ಈ ಕುರಿತು ರಾಜ್ಯದ ವಿವಿಧ ಜಿಲ್ಲೆಗಳ ಜನರು ತಮ್ಮ ಅಭಿಪ್ರಾಯವನ್ನು ಈ ದಿನ.ಕಾಮ್ ಜತೆಗೆ ಹಂಚಿಕೊಂಡಿದ್ದು, ಭಿನ್ನ-ಭಿನ್ನ ನಿಲುವುಗಳು ವ್ಯಕ್ತವಾಗಿವೆ.

ಒಂದೆಡೆ ಪ್ರತ್ಯೇಕ ರಾಜ್ಯವಾದರೆ ಮಾತ್ರ ಸಮಾನ ಅನುದಾನ, ಆಡಳಿತಾತ್ಮಕ ಗಮನ ಮತ್ತು ವೇಗವಾದ ಅಭಿವೃದ್ಧಿ ಸಾಧ್ಯ ಎಂದು ಕೆಲವರು ವಾದಿಸುತ್ತಿದ್ದರೆ, ಮತ್ತೊಂದೆಡೆ ಪ್ರತ್ಯೇಕ ರಾಜ್ಯಕ್ಕಿಂತಲೂ ಈಗಿರುವ ರಾಜ್ಯದಲ್ಲೇ ಸಮಾನ ಅಭಿವೃದ್ಧಿ, ನ್ಯಾಯಸಮ್ಮತ ಅನುದಾನ ಹಂಚಿಕೆ ಹಾಗೂ ರಾಜಕೀಯ ಇಚ್ಛಾಶಕ್ತಿ ಮುಖ್ಯ ಎಂದು ಇನ್ನೂ ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಕರ್ನಾಟಕದ ಅಭಿವೃದ್ಧಿ ಪ್ರಶ್ನೆ ಇದೀಗ ಮತ್ತೆ ರಾಜಕೀಯ ಅಂಗಳದಲ್ಲಷ್ಟೇ ಅಲ್ಲ, ಜನಸಾಮಾನ್ಯರ ಮನದಲ್ಲೂ ಗಂಭೀರ ಚರ್ಚೆಯ ವಿಷಯವಾಗಿ ಪರಿಣಮಿಸಿದೆ.

ನಂಜುಡಪ್ಪ ವರದಿ ಏನು ಹೇಳುತ್ತದೆ

ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನವನ್ನು ಗುರುತಿಸಿ ಪರಿಹಾರ ಸೂಚಿಸಿದ ನಂಜುಡಪ್ಪ ವರದಿಗೆ ಎರಡು ದಶಕಗಳು ಕಳೆದರೂ, ಅದರ ಶಿಫಾರಸುಗಳ ಸಂಪೂರ್ಣ ಅನುಷ್ಠಾನವಾಗಿಲ್ಲ ಎಂಬ ಟೀಕೆಗಳು ಮುಂದುವರಿದಿವೆ.

1999ರಲ್ಲಿ ರಾಜ್ಯ ಸರ್ಕಾರ ರಚಿಸಿದ ಸಮಿತಿಯು, ಪ್ರೊ. ಡಿ.ಎಂ. ನಂಜುಡಪ್ಪ ಅವರ ಅಧ್ಯಕ್ಷತೆಯಲ್ಲಿ ಅಧ್ಯಯನ ನಡೆಸಿ 2001ರಲ್ಲಿ ವರದಿ ಸಲ್ಲಿಸಿತು. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಆದಾಯ, ಕೈಗಾರಿಕೆ, ನೀರಾವರಿ ಸೇರಿದಂತೆ ಹಲವು ಸಾಮಾಜಿಕ,ಆರ್ಥಿಕ ಸೂಚ್ಯಂಕಗಳ ಆಧಾರದಲ್ಲಿ ರಾಜ್ಯದ ತಾಲೂಕುಗಳನ್ನು ವರ್ಗೀಕರಿಸಿದ ವರದಿ, ಉತ್ತರ ಕರ್ನಾಟಕ ಹಾಗೂ ಹೈದರಾಬಾದ್–ಕರ್ನಾಟಕ ಪ್ರದೇಶದ ಬಹುತೇಕ ತಾಲೂಕುಗಳನ್ನು ಹಿಂದುಳಿದವುಗಳೆಂದು ಗುರುತಿಸಿತು.

ಆದರೆ, ವರದಿ ಸೂಚಿಸಿದ ಅನೇಕ ಕ್ರಮಗಳು ಕಾಗದದಲ್ಲೇ ಉಳಿದಿವೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪಗಳಿವೆ. ಬೆಳಗಾವಿ ಚಳಿಗಾಲದ ಅಧಿವೇಶನಗಳಲ್ಲಿಯೂ ಉತ್ತರ ಕರ್ನಾಟಕದ ಅಭಿವೃದ್ಧಿ ಪ್ರಶ್ನೆ ಮತ್ತೆ ಮತ್ತೆ ಎತ್ತಲಾಗುತ್ತಿದ್ದು, ನಂಜುಡಪ್ಪ ವರದಿ ಸಂಪೂರ್ಣ ಜಾರಿಯಾಗಬೇಕೆಂಬ ಬೇಡಿಕೆ ಬಲವಾಗುತ್ತಿದೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿ

ಉತ್ತರ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಭೀಮಪ್ಪ ಗಡಾದ ಅವರು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ಬಜೆಟ್ ಮಂಡನೆ ಸೇರಿದಂತೆ ಹಲವು ಬೇಡಿಕೆಗಳು ಈಡೇರದ ಕಾರಣ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೇಳಿದರು.

ಉತ್ತರ ಕರ್ನಾಟಕದ ಸಾಹಿತ್ಯ ಕ್ಷೇತ್ರ ಹಾಗೂ ನೀರಾವರಿ ಯೋಜನೆಗಳಿಗೆ ಸಮರ್ಪಕ ಹಣ ಬಿಡುಗಡೆ ಮಾಡಿಲ್ಲ. ಜಿಲ್ಲಾ ವಿಭಜನೆ ವಿಚಾರದಲ್ಲಿಯೂ ಅನ್ಯಾಯವಾಗಿದೆ. ಮೈಸೂರು ರಾಮನಗರದಂತೆ ಕಡಿಮೆ ತಾಲೂಕುಗಳಿದ್ದರೂ ಜಿಲ್ಲೆ ಮಾಡಲಾಗಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ 15 ತಾಲೂಕುಗಳು, 18 ವಿಧಾನಸಭಾ ಕ್ಷೇತ್ರಗಳಿದ್ದರೂ ಜಿಲ್ಲಾ ವಿಭಜನೆ ಮಾಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದಕ್ಷಿಣ ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿಗಳ ಸಂಖ್ಯೆ ಹೆಚ್ಚಿದ್ದು, ಉತ್ತರ ಕರ್ನಾಟಕದಲ್ಲಿ ಕಡಿಮೆ ಇದೆ. ಗ್ರಾಮ ಪಂಚಾಯಿತಿಗಳ ಸಂಖ್ಯೆಯ ಆಧಾರದಲ್ಲಿ ಅನುದಾನ ಬರುತ್ತದೆ. ಇದರಿಂದ ಉತ್ತರ ಕರ್ನಾಟಕ ಹಿಂದುಳಿದಿದೆ. ಇಲ್ಲಿ ಉದ್ಯೋಗ ನೀಡುವ ಕೈಗಾರಿಕೆಗಳಿಲ್ಲದ ಕಾರಣ ಜನರು ಉದ್ಯೋಗ ಅರಸಿ ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ರಸ್ತೆಗಳ ಸ್ಥಿತಿಯೂ ಹದಗೆಟ್ಟಿದೆ. ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಮರ್ಪಕ ಚರ್ಚೆ ನಡೆಯುತ್ತಿಲ್ಲ. ಶಾಸಕರ ಹಾಜರಾತಿಯೂ ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಭೀಮಪ್ಪ ಗಡಾದ ಹೇಳಿದರು.

ಕೊಪ್ಪಳ ಜಿಲ್ಲೆಯ ರೈತ ಮಹೇಶ ಮಾತನಾಡಿ, “ಉತ್ತರ ಕರ್ನಾಟಕದವರಿಗೆ ಏನೂ ಸಿಗುತ್ತಿಲ್ಲ. ಮಂಡ್ಯ, ಮೈಸೂರು, ಬೆಂಗಳೂರು ಭಾಗಗಳಿಗೆ ಮಾತ್ರ ಎಲ್ಲ ಸೌಲಭ್ಯಗಳು ಸೀಮಿತವಾಗಿವೆ. ಕಲ್ಯಾಣ ಕರ್ನಾಟಕಕ್ಕೆ 371(ಜೆ) ಜಾರಿಗೆ ಬಂದರೂ ನಿರೀಕ್ಷಿತ ಲಾಭ ಸಿಕ್ಕಿಲ್ಲ” ಎಂದು ಆರೋಪಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಪ್ರತಿ ಎಕರೆಗೆ 2 ಕೆಜಿ ತೊಗರಿಯೂ ಬಂದಿಲ್ಲ. ಮನವಿ ಸಲ್ಲಿಸಲು ಬಂದರೂ ನಮ್ಮ ಶಾಸಕರು ಸುವರ್ಣ ಸೌಧದಲ್ಲಿ ಎಸಿ ರೂಮಿನಲ್ಲಿ ಕುಳಿತು ಮಜಾ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯವರು ಮನವಿ ಸ್ವೀಕರಿಸಿದರೂ, ಅದಕ್ಕೆ ಸ್ಪಂದನೆ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಕಲಬುರಗಿ ಭಾಗದಲ್ಲಿಯೂ ತೊಗರಿ ಬೆಳೆ ನಾಶವಾದರೂ ಈ ಕುರಿತು ಚರ್ಚೆ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಅವರು ಒತ್ತಾಯಿಸಿದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡ, ಪ್ರತ್ಯೇಕ ಬಜೆಟ್ ಬೇಕು

ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ಕನ್ನಡಪರ ಹೋರಾಟಗಾರರಾದ ಅಶೋಕ ಚಂದರಗಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ವಿರೋಧ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ ಹಿಂದುಳಿಯಲು ಇಲ್ಲಿನ 96 ಮಂದಿ ಶಾಸಕರೇ ಕಾರಣ ಎಂದು ಆರೋಪಿಸಿದರು. ಕರ್ನಾಟಕ ಏಕೀಕರಣಕ್ಕೆ 1920ರಿಂದ 1956ರವರೆಗೆ 50 ವರ್ಷಗಳ ಹೋರಾಟ ನಡೆದಿತ್ತು ಎಂದು ಅವರು ನೆನಪಿಸಿದರು.

ಉತ್ತರ ಕರ್ನಾಟಕ ಆರ್ಥಿಕವಾಗಿ ಸ್ವಾವಲಂಬಿಯಾಗಿಲ್ಲ. ಪ್ರತ್ಯೇಕ ರಾಜ್ಯವಾದರೆ ದಕ್ಷಿಣ ಕರ್ನಾಟಕದವರ ಮೇಲೆ ಅವಲಂಬಿಸಬೇಕಾಗುತ್ತದೆ. ಉತ್ತರ ಕರ್ನಾಟಕದ ಆದಾಯದಲ್ಲಿ ಶೇ.50ರಷ್ಟು ಬೆಂಗಳೂರಿನಿಂದಲೇ ಬರುತ್ತದೆ. ಕಲ್ಯಾಣ ಕರ್ನಾಟಕದವರು 371(ಜೆ) ಕಲಂ ಮೂಲಕ ನಮ್ಮಗೆ ಸಾಕಷ್ಟು ಸೌಲಭ್ಯಗಳು ದೊರೆತಿವೆ ನಾವು ಉತ್ತರ ಕರ್ನಾಟಕಕ್ಕೆ ಹೋಗುವದಿಲ್ಲ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗುವುದು ಬೇಡ ಎಂದು ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಒಂದು ಲಕ್ಷ ಕೋಟಿ ರೂ., ಮಹಾದಾಯಿ ಯೋಜನೆಗೆ 2,000 ಕೋಟಿ ರೂ. ಅಗತ್ಯವಿದೆ. ಈ ಹಣವನ್ನು ಎಲ್ಲಿಂದ ತರಲಾಗುತ್ತದೆ ಎಂದು ಪ್ರಶ್ನಿಸಿದ ಅವರು, ಪ್ರತ್ಯೇಕ ರಾಜ್ಯಕ್ಕೆ ವಿರೋಧವಿದ್ದು, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್ ಮಾತ್ರ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿದ್ದೀರಾ? ಅಭಿವೃದ್ಧಿಯಾಯಿತೇ ಕಲ್ಯಾಣ ಕರ್ನಾಟಕ? ತಜ್ಞರು ಏನಂತಾರೆ?

ಇದೇ ವಿಷಯದ ಕುರಿತು ವಿಜಯಪುರ ಜಿಲ್ಲೆಯ ಶ್ರೀಶೈಲ್ ಮಾತನಾಡಿ, “ಉತ್ತರ ಕರ್ನಾಟಕ ಬಹಳ ವರ್ಷಗಳಿಂದ ಹಿಂದುಳಿದಿದೆ. ಆದರೆ ಪ್ರತ್ಯೇಕ ರಾಜ್ಯವೇ ಪರಿಹಾರ ಅಲ್ಲ. ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ ಶೆಟ್ಟರ್ ಅವರು ಉತ್ತರ ಕರ್ನಾಟಕದವರಾಗಿದ್ದರೂ, ಈ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯವಾಗಿಲ್ಲ. ನಮ್ಮ ನದಿಗಳ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿದಾಗ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿಯಾಗುತ್ತದೆ” ಎಂದ ಅವರು, ಪ್ರತ್ಯೇಕ ರಾಜ್ಯ ಬೇಡಿಕೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಇದು ಕೇವಲ ಅಭಿಪ್ರಾಯವಲ್ಲ ಉತ್ತರ ಕರ್ನಾಟಕ ಜನರನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಿರುವುದೇ ಇದಕ್ಕೆ ಕಾರಣ.
ನಂಜುಡಪ್ಪ ವರದಿ, 371(ಜೆ), ಸುವರ್ಣಸೌಧ, ಬೆಳಗಾವಿ ಅಧಿವೇಶನ ಎಲ್ಲವೂ ಸಮಾನತೆಗಾಗಿ ಹುಟ್ಟಿದ ಪ್ರಯತ್ನಗಳು. ಆದರೆ ಅವುಗಳ ಅರ್ಥಪೂರ್ಣ ಜಾರಿಯಾಗದಿದ್ದರೆ ಜನರ ನಿರೀಕ್ಷೆ ಬೇಸರವಾಗುತ್ತದೆ. ಈ ಕಾರಣದಿಂದ ಇಲ್ಲಿಯ ಜನರು ಪ್ರತ್ಯೇಕ ರಾಜ್ಯವಾಗಬೇಕು ಇಲ್ಲವೆ ಪ್ರತ್ಯೇಕ ಬಜೆಟ್ ಬೇಕೆಂದು ಹೋರಾಟ ಮಾಡುತ್ತಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...