ರಾಜಕೀಯದಲ್ಲಿ ಎಲ್ಲ ಶಾಸಕರು ಸಿಂಹ ಆಗಲು ಸಾಧ್ಯವಿಲ್ಲ: ಸ್ಪೀಕರ್ ಖಾದರ್ ಅಭಿಮತ

Date:

  • ‘ನೀವೆಲ್ಲ ಪರ್ಮನೆಂಟ್ ಶಾಸಕರಾಗಿ ಉಳಿಯಬೇಕು’
  • ‘ರಾಜಕೀಯದಲ್ಲಿ ಶಾಸಕರು ರಿಂಗ್ ಮಾಸ್ಟರ್ ಆಗಲಿ’

ನೀವೆಲ್ಲ ಮೊದಲ ಬಾರಿಗೆ ಅಷ್ಟೇ ಶಾಸಕರಾಗದೆ ಪರ್ಮನೆಂಟ್ ಶಾಸಕರಾಗಿರಬೇಕು. ಅದಕ್ಕೆ ಈ ಶಿಬಿರ ಅನುಕೂಲವಾಗಲಿದೆ. ವಿಧಾನಸಭೆ ಒಳಗೆ ಆತ್ಮವಿಶ್ವಾಸದಿಂದಿರುವುದನ್ನು ಈ ಶಿಬಿರ ನಿಮಗೆ ಕಲಿಸಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ತಿಳಿಸಿದರು.

ಬೆಂಗಳೂರಿನ ಹೊರವಲಯದಲ್ಲಿ ಸೋಮವಾರ ನಡೆದ ನೂತನ ಶಾಸಕರ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, “ರಾಜಕೀಯ ಒಂದು ಸರ್ಕಸ್ ಕಂಪನಿ ಇದ್ದಂತೆ. ಇಲ್ಲಿ ಹುಲಿ, ಸಿಂಹ, ಆನೆ, ಕೋತಿ ಎಲ್ಲವೂ ಇರುತ್ತವೆ. ಆದರೆ ಎಲ್ಲರೂ ಸಿಂಹ ಆಗಲು ಸಾಧ್ಯವಿಲ್ಲ” ಎಂದರು.

“ಸರ್ಕಸ್‌ನಲ್ಲಿ ರಿಂಗ್ ಮಾಸ್ಟರ್ ಹಿಂದೆ ಎಲ್ಲ ಪ್ರಾಣಿಗಳು ಹೋಗುತ್ತವೆ. ಹಾಗೆ ರಾಜಕೀಯದಲ್ಲಿ ಶಾಸಕರು ರಿಂಗ್ ಮಾಸ್ಟರ್ ಆಗಬೇಕು. ಇದಕ್ಕಾಗಿ ಎಲ್ಲರೂ ಮಿಸ್ ಮಾಡದೆ ಉತ್ತಮ ತರಬೇತಿ ಪಡೆಯಿರಿ” ಎಂದು ಮನವಿ ಮಾಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುತ್ತು ಅನ್ನಕ್ಕಾಗಿ ಬಡವರು ಬೇಡುತ್ತಿದ್ದುದನ್ನು ಕಣ್ಣಾರೆ ಕಂಡಿದ್ದೆ: ಸಿಎಂ ಸಿದ್ದರಾಮಯ್ಯ

“ಶಿಬಿರದಲ್ಲಿ ಆರೋಗ್ಯದ ಬಗ್ಗೆಯೂ ತರಬೇತಿ ನೀಡಲಾಗುತ್ತದೆ. ರಾಜಕೀಯ ಗಣಿತ ಅಲ್ಲ ಬದಲಿಗೆ ಕೆಮಿಸ್ಟ್ರಿ, ಇಲ್ಲಿ ರಿಯಾಕ್ಷನ್ಸ್ ಗಳು ಜಾಸ್ತಿ ಇರುತ್ತವೆ. ಎಲ್ಲದಕ್ಕೂ ತಾಳ್ಮೆಯಿಂದ ಉತ್ತರಿಸುವ ಗುಣ ಇರಬೇಕು” ಎಂದರು.

“ಉತ್ತಮ ಅಭ್ಯಾಸಗಳನ್ನು ಶಾಸಕರು ರೂಢಿಸಿಕೊಳ್ಳಬೇಕು. ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಬೇಕು. ಶಾಸಕರಾಗಿ ಬ್ರಿಡ್ಜ್ ಕಟ್ಟುವುದು, ಮೋರಿ ಕಟ್ಟುವುದೇ ಆದ್ಯತೆ ಕೆಲಸಗಳು ಆಗದೇ ನಮ್ಮ ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸುವ ಕೆಲಸದ ಕಡೆಯೂ ಗಮನ ನೀಡಬೇಕು” ಎಂದು ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...