ಬೀದರ್‌ | ಸಂವಿಧಾನದ ಆಶಯಕ್ಕೆ ಪೂರಕವಾದ ಶಿಕ್ಷಣ ಸಿಗುತ್ತಿಲ್ಲ : ಶ್ರೀನಾಥ್‌ ಪೂಜಾರಿ

Date:

ಭಾರತದ ಭವಿಷ್ಯಕ್ಕಾಗಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಕೊಡಿಸುವ ಮೂಲಕ ಯೋಧರಂತೆ ಸಜ್ಜುಗೊಳಿಸುವುದು  ಅಗತ್ಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಸಂಸ್ಥಾಪಕ ಅಧ್ಯಕ್ಷ ಶ್ರೀನಿನಾಥ ಪೂಜಾರಿ ಹೇಳಿದರು.

ಬೀದರ್‌ನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿಯಿಂದ ಆಯೋಜಿಸಿದ್ದ ಮೀಸಲಾತಿ ಜನಕ ಶಾಹು ಮಹಾರಾಜರ ಜಯಂತ್ಯೋತ್ಸವ ಹಾಗೂ ಅಂಬೇಡ್ಕರ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼಖಾಸಗೀಕರಣದಿಂದಾಗಿ ಇಂದಿನ ಶಿಕ್ಷಣ ತುಂಬಾ ದುಬಾರಿಯಾಗಿದೆ. ಅಂಬೇಡ್ಕರ್ ಕನಸಿನ ಭಾರತ ಕಟ್ಟುವ ಶಿಕ್ಷಣ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಇಲ್ಲ. ಇದರಿಂದಾಗಿ ಸಂವಿಧಾನ ಹಾಗೂ ಪ್ರಜಾಫ್ರಭುತ್ವ ಆಶಯಗಳಿಗೆ ಪೂರಕವಾದ ಮೌಲ್ಯ ಶಿಕ್ಷಣ ದೊರೆಯದ ಕಾರಣ ವಿದ್ಯಾರ್ಥಿಗಳು ಪ್ರಬುದ್ಧರಾಗಿ ಬೆಳೆಯುವ ಅವಕಾಶ ಕಳೆದುಕೊಳ್ಳುತ್ತಿದ್ದಾರೆʼ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼದಲಿತ ವಿದ್ಯಾರ್ಥಿ ಪರಿಷತ್‌ ತಂಡದಿಂದ ಬಳ್ಳಾರಿ ಹಾಗೂ ಹೊಸಪೇಟೆಗಳಲ್ಲಿ ಸುಮಾರು ಒಂದು ನೂರು ಅಂಬೇಡ್ಕರ್‌ ರಾತ್ರಿ ಶಾಲೆಗಳು ತೆರೆದು ಬಡಜನರ ಮಕ್ಕಳಿಗೆ ತರಬೇತಿ ನೀಡಿ ಇಂಗ್ಲೀಷ್‌ ಶಿಕ್ಷಣ ನೀಡಲಾಗುತ್ತಿದೆ. ಪ್ರಬುದ್ಧ ಭಾರತದ ನಿರ್ಮಾಣಕ್ಕೆ ಪೂರಕವಾದ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತಲಾಗುತ್ತಿದೆʼ ಎಂದು ಹೇಳಿದರು.

ನಿವೃತ ಪ್ರಾಚಾರ್ಯ ವಿಠ್ಠಲದಾಸ ಪ್ಯಾಗೆ ವಿಶೇಷ ಉಪನ್ಯಾಸ ನೀಡಿ, ʼದೇಶದಲ್ಲಿ ಶಿಕ್ಷಣ ದುಬಾರಿಯಾಗಿದೆ, ಶಿಕ್ಷಣದ ಹೆಸರಿನಲ್ಲಿ ಮೋಸ ನಡೆಯುತ್ತಿದೆ.‌‌ ಹೊಟ್ಟೆ ತುಂಬಿಸಿಕೊಳ್ಳಲು ಮಾತ್ರ ಶಿಕ್ಷಣ ಪಡೆಯದೇ, ನಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಜೊತೆಗೆ ಸಮಾಜ ಕಟ್ಟುವ ನಿಟ್ಟಿನಲ್ಲಿ ಶಿಕ್ಷಣ ಪಡೆಯಬೇಕು. ಡಾ.ಬಿ.ಆರ್.‌ ಅಂಬೇಡ್ಕರ್‌ ಹಾಗೂ ಬುದ್ಧರ ವಿಚಾರಗಳು ಬದುಕಿನಲ್ಲಿ ಅಳವಡಿಸಿಕೊಂಡರೆ ಪ್ರಬುದ್ಧ ಸಮಾಜ ಕಟ್ಟಲು ಸಾಧ್ಯʼ ಎಂದು ನುಡಿದರು.‌

WhatsApp Image 2024 07 09 at 8.11.32 AM
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು.

ಡಿವಿಪಿ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼವಿದ್ಯೆಯೇ ವಿಮೋಚನೆಗೆ ಹೆದ್ದಾರಿ ಎಂಬ ನಿಟ್ಟಿನಲ್ಲಿ ಮಕ್ಕಳಿಗೆ ಸಮಕಾಲೀನ ಭಾರತಕ್ಕೆ ಅನುಗುಣವಾಗಿ ಮೌಲ್ಯ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ನಮ್ಮ ತಂಡ ಶಾಲಾ-ಕಾಲೇಜುಗಳಲ್ಲಿ ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲೂ ದಲಿತ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗೆ ಬೇಕಾದ ಅಗತ್ಯ ಮಾರ್ಗದರ್ಶನ ನೀಡಲಾಗುತ್ತಿದೆʼ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಕೆಲಸಕ್ಕೂ ಅವಕಾಶ ಕಲ್ಪಿಸಿ : ರೈತ ಸಂಘ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುಭಾಷ ನಾಗೂರೆ, ದಸಂಸ ಜಿಲ್ಲಾ ಸಂಚಾಲಕ ಬಾಬುರಾವ ಪಾಸ್ವಾನ್, ದಲಿತ ಸೇನೆ ಜಿಲ್ಲಾಧ್ಯಕ್ಷ ಶ್ರೀಪತರಾವ ದೀನೆ, ದಸಂಸ ಜಿಲ್ಲಾ ಸಂಚಾಲಕ ಶಿವಕುಮಾರ್ ನೀಲಿಕಟ್ಟಿ ಸೇರಿದಂತೆ ಪರಿಷತ್ತಿನ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...