ದೈಹಿಕ ಸಂಪರ್ಕ ನಿರಾಕರಣೆ ಹಿಂದು ವಿವಾಹ ಕಾಯ್ದೆಯಡಿ ಅಪರಾಧ, ಐಪಿಸಿಯಡಿ ದೌರ್ಜನ್ಯವಲ್ಲ: ಹೈಕೋರ್ಟ್

Date:

ದೈಹಿಕ ಸಂಪರ್ಕ ನಿರಾಕರಿಸುವುದು 1955ರ ಹಿಂದು ವಿವಾಹ ಕಾಯ್ದೆಯಡಿ ಅಪರಾಧವೇ ಹೊರತು ಐಪಿಸಿ ಸೆಕ್ಷನ್ 498ಎ ಅಡಿ ದೌರ್ಜನ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ಪತಿ ಹಾಗೂ ಆತನ ಪೋಷಕರ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ ಕ್ರಿಮಿನಲ್‌ ಮೊಕದ್ದಮೆಯನ್ನು ರದ್ದುಗೊಳಿಸಿದೆ.

ಆಧ್ಯಾತ್ಮಿಕ ಸಾಧನೆಯತ್ತ ಮುಖಮಾಡಿದ್ದ ಪತಿ ವಿರುದ್ಧ ಪತ್ನಿಯು 2020ರಲ್ಲಿ ಐಪಿಸಿ 498 ಎ ಅಡಿ ಲೈಂಗಿಕತೆಗೆ ಸಹಕರಿಸುತ್ತಿಲ್ಲ ಹಾಗೂ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ನಿಸ್ಸಂದೇಹವಾಗಿ ಹಿಂದೂ ವಿವಾಹ ಕಾಯಿದೆಯ12(1) (ಎ) ಅಡಿಯಲ್ಲಿ ಲೈಂಗಿಕತೆಯನ್ನು ಪೂರೈಸದ ಕಾರಣ ಕ್ರೌರ್ಯಕ್ಕೆ ಕಾರಣವಾಗುತ್ತದೆ. ಆದರೆ ಐಪಿಸಿ ಸೆಕ್ಷನ್‌ 498ಎ ಅಡಿಯಲ್ಲಿ ವ್ಯಾಖ್ಯಾನಿಸಿದಂತೆ ಇದು ಕ್ರೌರ್ಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಆದೇಶ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? ಶೀಘ್ರದಲ್ಲೇ ಟ್ವಿಟರ್‌ನಲ್ಲಿ ಯೂಟ್ಯೂಬ್‌, ಇನ್ಸ್ಟಾದಂತೆ ಹಲವು ಸೇವೆ ಲಭ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯೊಬ್ಬರು 2019 ರ ಡಿ.18 ರಂದು ವ್ಯಕ್ತಿಯೊಬ್ಬರನ್ನು ವಿವಾಹವಾಗಿದ್ದರು. ವಿವಾಹವಾಗಿ 28 ದಿನ ಮಾತ್ರ ಜೊತೆಯಲ್ಲಿದ್ದರು. ಇದಾದ ನಂತರ ಪತಿ ಆಧ್ಯಾತ್ಮಿಕ ಸಾಧನೆಯ ಕಡೆ ಮುಖ ಮಾಡಿದ್ದಾರೆ. ಅಲ್ಲದೆ, ದೈಹಿಕ ಪ್ರೀತಿಗಿಂತ, ಆತ್ಮಗಳ ಪ್ರೀತಿ ಮುಖ್ಯವೆನ್ನುತ್ತಿದ್ದ ಪತಿ, ಆಧ್ಯಾತ್ಮಿಕ ಸಾಧಕಿಯೊಬ್ಬರ ಉಪನ್ಯಾಸ ವೀಕ್ಷಿಸುವಂತೆ ತನ್ನ ಪತ್ನಿಗೆ ಹೇಳುತ್ತಿದ್ದರು.

ಪತಿಯ ನಡೆಯಿಂದ ಮನನೊಂದ ಪತ್ನಿ ದೈಹಿಕ ಸಂಬಂಧ ನಡೆಸದ ಪತಿ ವಿರುದ್ಧ ಐಪಿಸಿ 498ಎ ಅಡಿ ದೂರು ದಾಖಲಿಸಿದ್ದರು. ಅಲ್ಲದೆ, ಕ್ರೌರ್ಯದ ಕಾರಣಕ್ಕೆ ವಿಚ್ಛೇದನ ಕೂಡ ಪಡೆದುಕೊಂಡಿದ್ದರು. 2022ರಲ್ಲಿ ವಿಚ್ಛೇದನ ಪಡೆದ ನಂತರ ವರದಕ್ಷಿಣೆ ಕಿರುಕುಳ ಹಾಗೂ ಲೈಂಗಿಕ ನಿರಾಕರಣೆಯ ಕ್ರಿಮಿನಲ್‌ ಪ್ರಕರಣವನ್ನು ಮುಂದುವರಿಸಿದ್ದರು.

ಕ್ರಿಮಿನಲ್‌ ಪ್ರಕರಣದ ಬಗ್ಗೆ ತನ್ನ ತೀರ್ಪಿನಲ್ಲಿ ತಿಳಿಸಿರುವ ನ್ಯಾಯಾಧೀಶರು, ಈ ಪ್ರಕರಣದಲ್ಲಿ ಕ್ರಿಮಿನಲ್‌ ಮೊಕದ್ದಮೆಗಳನ್ನು ಅನುಮತಿಸಲಾಗುವುದಿಲ್ಲ ಅಥವಾ ಇದು ಕಾನೂನಿನ ಪ್ರಕ್ರಿಯೆಯ ದುರುಪಯೋಗ ಮತ್ತು ನ್ಯಾಯದ ವೈಫಲ್ಯಕ್ಕೆ ಕಾರಣವಾಗುತ್ತದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...