ಮಾಸ್ತಿಗುಡಿ ಸಿನಿಮಾ ಪ್ರಕರಣ: ಸೇಫ್ಟಿ ಜಾಕೆಟ್ ಧರಿಸದಿರುವುದೇ ನಟರ ಸಾವಿಗೆ ಕಾರಣ

Date:

  • ಸಾಹಸ ನಿರ್ದೇಶಕ ರವಿವರ್ಮ ಪರ ವಕೀಲರಿಂದ ವಾದ
  • ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ರವಿವರ್ಮ ಅರ್ಜಿ

ನಟ ದುನಿಯಾ ವಿಜಯ್ ಅಭಿನಯದ ‘ಮಾಸ್ತಿಗುಡಿ’ ಸಿನಿಮಾದ ಚಿತ್ರೀಕರಣದ ವೇಳೆ ಸೇಫ್ಟಿ ಜಾಕೆಟ್ ಧರಿಸಧಿರುವುದೇ ನಟ ಉದಯ್ ಹಾಗೂ ಅನಿಲ್ ಸಾವಿಗೆ ಕಾರಣವೆಂದು ಸಾಹಸ ನಿರ್ದೇಶಕ ರವಿವರ್ಮ ಪರ ವಕೀಲರು ವಾದ ಮಂಡಿಸಿದ್ದಾರೆ. ಪ್ರಕರಣದಿಂದ ರವಿವರ್ಮ ಹೆಸರನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ.

ಮಾಸ್ತಿಗುಡಿ ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣವು ತಿಪ್ಪಗೊಂಡನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ನಡೆದಿತ್ತು. ಈ ವೇಳೆ, ಚಿತ್ರೀಕರಣಕ್ಕಾಗಿ ಖಳ ನಟ ಉದಯ್ ಮತ್ತು ಅನಿಲ್ ಹೆಲೆಕ್ಯಾಪ್ಟರ್‌ನಿಂದ ಕೆರೆಗೆ ಹಾರಿದ್ದರು. ಆದರೆ, ಅವರಿಬ್ಬರಿಗೂ ದಡ ಸೇರಲಾಗದೆ ಮೃತಪಟ್ಟಿದ್ದರು. ಘಟನೆ ಸಂಬಂಧ ಸಾಹಸ ನಿರ್ದೇಶಕ ರವಿವರ್ಮ ಮೇಲೆ ಉದ್ದೇಶಪೂರ್ವಕವಲ್ಲದ ಹತ್ಯೆ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ರವಿವರ್ಮ ಅವರು ಬೆಂಗಳೂರು ನಗರದ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶ ಎಸ್. ಶ್ರೀಧರ್ ನಡಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರವಿವರ್ಮ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿ.ಎಚ್ ಹನುಮಂತರಾಯ, “ಮಾಸ್ತಿಗುಡಿ ಸಿನಿಮಾದಲ್ಲಿ ಖಳನಟರಾಗಿ ನಟಿಸುತ್ತಿದ್ದ ಇಬ್ಬರು ಯುವನಟರ ಸಾವು ಆಕಸ್ಮಿಕವಾಗಿದೆ. ಚಿತ್ರಿಕರಣ ನಡೆಯುವ ವೇಳೆ ಹೆಲಿಕಾಪ್ಟರ್‌ನಿಂದ ಜಲಾಶಯದ ಹಿನ್ನೀರಿಗೆ ಧುಮುಕುವಾಗ ತಮ್ಮ ದೇಹದ ಸಿಕ್ಸ್ ಪ್ಯಾಕ್ಅನ್ನು ಪ್ರೇಕ್ಷಕರು ನೋಡಬೇಕು ಹಾಗಾಗಿ ನಾವು ಸೇಫ್ಟಿ ಜಾಕೆಟ್ (ರಕ್ಷಾ ಕವಚ) ಧರಿಸುವುದಿಲ್ಲ ಎಂದು ನಿರ್ದೇಶಕರನ್ನು ಕೇಳಿಕೊಂಡಿದ್ದರು” ಎಂದು ವಾದಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕರಂದ್ಲಾಜೆ ವಿವಾದಾತ್ಮಕ ಪತ್ರ | ಚುನಾವಣೆ ನಡೆಸುತ್ತಿರುವುದು ಆಯೋಗವೋ, ಬಿಜೆಪಿಯೋ: ಸಿದ್ದರಾಮಯ್ಯ ಪ್ರಶ್ನೆ

“ಸಾಹಸ ನಿರ್ದೇಶಕರು ಯುವನಟರ ಈ ಬೇಡಿಕೆಗೆ ಒಪ್ಪಿರಲಿಲ್ಲ. ಆದರೂ ಕೂಡ ನಮಗೆ ಈಜು ಬರುವುದರಿಂದ ನಾವು ನಿರಾಯಾಸವಾಗಿ ಈಜಿ ಬರುತ್ತೇವೆ ಎಂದು ಮನವಿ ಮಾಡಿಕೊಂಡಾಗ ಸಾಹಸ ನಿರ್ದೇಶಕರು ಒಪ್ಪಿದ್ದರು. ನಂತರ, ಚಿತ್ರೀಕರಣ ನಡೆಸಲಾಯಿತು. ಈ ಅಂಶವನ್ನು ಪೋಲಿಸರು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ” ಎಂದು ವಿವರಿಸಿದರು.

“ಯುನಟರ ಮಾತಿಗೆ ಕೇವಲ ಒಪ್ಪಿಗೆಯನ್ನಷ್ಟೇ ನೀಡದೇ ಅವರ ಹಿತದೃಷ್ಠಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಚಿತ್ರಿಕರಣ ನಡೆಯುವ ವೇಳೆ ನುರಿತ ಈಜುಗಾರರು ಮತ್ತು ಮೋಟಾರ್ ಬೋಟ್ ಅನ್ನು ಸ್ಥಳದಲ್ಲಿ ಇರಿಸಲಾಗಿತ್ತು. ಆದರೆ, ಯುವನಟರು ನೀರಿಗೆ ಬಿದ್ದಾಗ ತಾಂತ್ರಿಕ ದೋಷದಿಂದ ಅವರು ಬಿದ್ದ ಜಾಗಕ್ಕೆ ಸರಿಯಾದ ಸಮಯಕ್ಕೆ ಬೋಟ್‌ಗಳು ತಲುಪಲು ಸಾಧ್ಯವಾಗಿಲ್ಲ. ಆದ್ದರಿಂದ ಈ ದುರಂತ ಸಂಭವಿಸಿದೆ” ಎಂದು ಅವರು ನ್ಯಾಯಾಲಯದಲ್ಲಿ ತಿಳಿಸಿದ್ದಾರೆ.

“ಯುವನಟರ ಸಾವು ಆಕಸ್ಮಿಕವಾಗಿದ್ದು, ಇವರ ಸಾವಿಗೆ ಯಾರೂ ಹೊಣೆಯಲ್ಲ. ಹಾಗಾಗಿ ಅರ್ಜಿದಾರರು ಉದ್ದೇಶಪೂರ್ವಕವಾಗಿ ಯಾವುದೇ ಶಿಕ್ಷಾರ್ಹ ಅಪರಾಧ ಎಸಗಿಲ್ಲ. ಆದ್ದರಿಂದ ಸಾಹಸ ನಿರ್ದೇಶಕ ರವಿವರ್ಮ ಅವರ ಮೇಲಿರುವ ಆರೋಪವನ್ನು ಕೈಬಿಡಬೇಕು” ಎಂದು ಮನವಿ ಮಾಡಿದರು.

ಹಿರಿಯ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಹೆಚ್ಚಿನ ವಾದ ಮಂಡನೆಗೆ ಅವಕಾಶ ನೀಡಿ, ಮೇ 30ಕ್ಕೆ ವಿಚಾರಣೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...