ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೂ ನೋಟಿಸ್ ಜಾರಿ: ನಳಿನ್ ಕುಮಾರ್ ಕಟೀಲು

Date:

  • ಚುನಾವಣೆ ಸಂದರ್ಭದಲ್ಲಿ ಕೆಲವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ
  • ಇನ್ಮುಂದೆ ಪಕ್ಷ ವಿರೋಧಿ ಹೇಳಿಕೆ ಕೊಡದಂತೆ ನಾಯಕರಿಗೆ ಸೂಚಿಸಲಾಗಿದೆ

ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ನೀಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಕೂಡ ಕೆಲವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಅಂತವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.

ಬಿಜೆಪಿ ನಾಯಕರ ಬಹಿರಂಗ ಹೇಳಿಕೆ ವಿಚಾರವಾಗಿ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ನಡೆದ ಸಭೆ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

“ಬಿಜೆಪಿ ನಾಯಕರ ಅಸಮಾಧಾನ ಹೆಚ್ಚಾದ ಬೆನ್ನಲ್ಲೇ ಎಚ್ಚೆತ್ತ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಪಕ್ಷದ ವಿರುದ್ಧವೇ ಮಾತನಾಡಿರುವ 11 ನಾಯಕರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಿದ್ದು, ಪಕ್ಷ ವಿರೋಧಿ ಹೇಳಿಕೆ ಕೊಡದಂತೆ ಸೂಚನೆ ನೀಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷದ ನಾಯಕರ ಬಗ್ಗೆ, ಪಕ್ಷದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವವರನ್ನು ವೈಯಕ್ತಿಕವಾಗಿ ಕರೆದು ಮಾತನಾಡುತ್ತೇವೆ. ಮುಂದೆ ಈ ರೀತಿ ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಪಕ್ಷದ ವಿರುದ್ಧ ಬಹಿರಂಗ ಹೇಳಿಕೆ ಮುಂದುವರಿದರೆ ಸೂಕ್ತ ಕ್ರಮ: ಬಿ ಎಸ್‌ ಯಡಿಯೂರಪ್ಪ

“ಬಹಿರಂಗವಾಗಿ ಪಕ್ಷದ ನಾಯಕರ ವಿರುದ್ಧ ಹೇಳಿಕೆ ಕೊಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಮತ್ತು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸೇರಿದಂತೆ ಇತರೆ ನಾಯಕರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದೆ. ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ನೀಡಿದ್ದು, ಒಂದು ವಾರದೊಳಗೆ ಲಿಖಿತವಾಗಿ ಅವರಿಂದ ಉತ್ತರ ಬಯಸಿದ್ದೇವೆ” ಎಂದರು.

“ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಮುಂದಿನ ವಾರದಲ್ಲಿ ವಿರೋಧ ಪಕ್ಷದ ನಾಯಕನ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಜುಲೈ 7ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ಕಲಾಪದ ವೇಳೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...