ಕರ್ನಾಟಕ ಸೇವಾದಳ ಯುವ ಬ್ರಿಗೇಡ್ ವತಿಯಿಂದ ನವೆಂಬರ್ 29ರಂದು ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡು ಸಂಸದ ಸಶಿಕಾಂತ್ ಸೆಂಥಿಲ್ ಭಾಗವಹಿಸಲಿದ್ದಾರೆ.
ನ.29ರಂದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಕೆಎಂಡಿಸಿ ಭವನದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ್ ಲಾಡ್, ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲ ಯುವ ಬ್ರಿಗೇಡ್ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸೇವಾದಳ ಯುವ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ಜುನೈದ್ ಪಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






