ನ. 29ರಂದು ಸಂವಿಧಾನ ಸಮರ್ಪಣಾ ದಿನಾಚರಣೆ: ಸಶಿಕಾಂತ್ ಸೆಂಥಿಲ್ ಬೆಂಗಳೂರಿಗೆ

Date:

ಕರ್ನಾಟಕ ಸೇವಾದಳ ಯುವ ಬ್ರಿಗೇಡ್ ವತಿಯಿಂದ ನವೆಂಬರ್ 29ರಂದು ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡು ಸಂಸದ ಸಶಿಕಾಂತ್ ಸೆಂಥಿಲ್ ಭಾಗವಹಿಸಲಿದ್ದಾರೆ.

ನ.29ರಂದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಕೆಎಂಡಿಸಿ ಭವನದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ್ ಲಾಡ್, ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.‌ ಕಾರ್ಯಕ್ರಮಕ್ಕೆ ಎಲ್ಲ ಯುವ ಬ್ರಿಗೇಡ್ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸೇವಾದಳ ಯುವ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ಜುನೈದ್ ಪಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

596568
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...