ಅನಿವಾಸಿ ಭಾರತೀಯರು ನಾನಾ ಸಂಕಷ್ಟ ಎದುರಿಸುತ್ತಿದ್ದಾರೆ: ಡಾ. ಆರತಿ ಕೃಷ್ಣ

Date:

  • ಬಿಡಬ್ಲ್ಯುಎಫ್‌ನಿಂದ 11 ಜೋಡಿಗಳ ಸಾಮೂಹಿಕ ವಿವಾಹ ಮತ್ತು ಸಾಧಕರಿಗೆ ಸನ್ಮಾನ
  • ಬಿಡಬ್ಲ್ಯುಎಫ್ ಮಾಡಿರುವ ಈ ಸೇವೆಯು ಶ್ಲಾಘನೀಯ: ಸಚಿವ ದಿನೇಶ್ ಗುಂಡೂರಾವ್

“ಅನಿವಾಸಿ ಭಾರತೀಯರು ಕೂಡ ನಾನಾ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ಕನ್ನಡಿಗರ ಅಹವಾಲು ಆಲಿಸಿ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಅನಿವಾಸಿ ಕನ್ನಡಿಗ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅದಲ್ಲದೆ ‘ನಮ್ಮ ಊರು-ನಮ್ಮ ನಾಡು’ ಎಂಬ ವಿಶಿಷ್ಟ ಪರಿಕಲ್ಪನೆಯ ಯೋಜನೆ ರೂಪಿಸುವ ಉದ್ದೇಶವಿದ್ದು, ಅನಿವಾಸಿಗಳ ಸಮಸ್ಯೆ ಪರಿಹಾರ-ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ” ಎಂದು ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ತಿಳಿಸಿದರು.

ಅವರು ಮಂಗಳೂರು ನಗರ ಹೊರವಲಯದ ಗಂಜಿಮಠದಲ್ಲಿರುವ ಝಾರಾ ಕನ್ವೆಂಶನ್ ಸೆಂಟರ್‌ನಲ್ಲಿ ಇಂದು ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) ಹಮ್ಮಿಕೊಂಡಿದ್ದ11 ಜೋಡಿಗಳ ಸರಳ ಸಾಮೂಹಿಕ ವಿವಾಹ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

bwf 2

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಬಿಡಬ್ಲ್ಯುಎಫ್ ಸಂಘಟಿಸಿದ ಎಂಟನೇ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಯೆನೆಪೊಯ ವಿವಿಯ ಕುಲಾಧಿಪತಿ ಡಾ. ಯೆನೆಪೊಯ ಅಬ್ದುಲ್ಲ ಕುಂಞಿ ಉದ್ಘಾಟಿಸಿದರು. ಮಂಗಳೂರು ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್‌ನ ನೇತೃತ್ವ ವಹಿಸಿದ್ದರು.

ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ದುಆ ಮತ್ತು ಆಶೀರ್ವಚನ ನೀಡಿದರು. ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ ಮದುಮೂಲೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,”ಆರ್ಥಿಕ ಸಂಕಷ್ಟದಿಂದಾಗಿ ವಿವಾಹ ಕಾರ್ಯಕ್ರಮಗಳನ್ನು ಉದ್ದೇಶಿತ ರೀತಿಯಲ್ಲಿ ನಡೆಸಲು ಹಲವರಿಗೆ ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಬಿಡಬ್ಲುಎಫ್ ಮಾಡಿರುವ ಈ ಸೇವೆಯು ಶ್ಲಾಘನೀಯ” ಎಂದರು.

bwf 3

ಕೃಷ್ಣಾಪುರ ಖಾಝಿ ಇ.ಕೆ. ಇಬ್ರಾಹಿಂ ಮುಸ್ಲಿಯಾರ್, ಮಂಗಳೂರು ಕೇಂದ್ರ ಜುಮಾ ಮಸೀದಿಯ ಖತೀಬ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ, ಬಿಸಿಸಿಐ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ನಂಡೆ ಪೆಂಙಲ್ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಬಿ.ಎಂ. ಮುಮ್ತಾಝ್ ಅಲಿ, ಸುಲ್ತಾನ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಆಡಳಿತ ನಿರ್ದೇಶಕ ಅಬ್ದುಲ್ ರವೂಫ್, ಅಲ್ ವಫಾ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ದ.ಕ. ಮತ್ತು ಉಡುಪಿ ಜಿಲ್ಲಾ ಜಂಇಯ್ಯುತುಲ್ ಫಲಾಹ್ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ನಮ್ಮ ನಾಡ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಸಲೀಂ, ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ, ಬಿಸಿಸಿಐ ಆಡಳಿತ ಸಮಿತಿಯ ಸದಸ್ಯ ಆಸಿಫ್ ಸೂಫಿಖಾನ, ಸಮಾಜ ಸೇವಕ ಅಬ್ಬಾಸ್ ಉಚ್ಚಿಲ್, ಕೆಕೆಎಂಎ ಕರ್ನಾಟಕ ಅಧ್ಯಕ್ಷ ಎಸ್.ಎಂ. ಫಾರೂಕ್, ಬಿಡಬ್ಲುಎಫ್ ಸಂಯೋಜಕ ಮುಹಮ್ಮದ್ ರಫೀಕ್ ಕೃಷ್ಣಾಪುರ, ಕಾರ್ಯಕಾರಿ ಸಮಿತಿ ಸದಸ್ಯ ನಝೀರ್ ಉಬಾರ್, ಸದಸ್ಯ ಮುಹಮ್ಮದ್ ಸಿದ್ದೀಕ್ ಕಾಪು ಭಾಗವಹಿಸಿದ್ದರು.

ಸಾಧಕರಿಗೆ ಸನ್ಮಾನ
ಮಂಗಳೂರಿನ ಭಾರತ್ ಇನ್ಫ್ರಾಟೆಕ್ ಸಂಸ್ಥೆಯ ಆಡಳಿತ ನಿರ್ದೇಶಕ ಮುಸ್ತಫಾ ಎಸ್.ಎಂ. ಮತ್ತು ಸೌದಿ ಅರೇಬಿಯಾದ ಅಲ್ ಜುಬೈಲ್‌ನಲ್ಲಿರುವ ಅಲ್ ಮುಝೈನ್ ಕಾಂಟ್ರಾಕ್ಟಿಂಗ್ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಝಕರಿಯಾ ಜೋಕಟ್ಟೆ ಅವರಿಗೆ ಜೀವಮಾನ ಸಮಾಜ ಸೇವೆಗಾಗಿ ಸನ್ಮಾನಿಸಲಾಯಿತು.

ರಾಜ್ಯ ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಾರ್ಮಾಡಿ ಹಸನಬ್ಬ ಮತ್ತು ಮೀಫ್ (ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ)ದ ಪರವಾಗಿ ಒಕ್ಕೂಟದ ಉಪಾಧ್ಯಕ್ಷ ಬಿ.ಎಂ. ಮುಮ್ತಾಝ್ ಅಲಿ ಅವರನ್ನು ಗೌರವಿಸಲಾಯಿತು. ಕೆಎಸ್ ಅಬೂಬಕರ್ ಕಿರಾಅತ್ ಪಠಿಸಿದರು. ಬಿ.ಎ. ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಬಜ್ಪೆ ಧನ್ಯವಾದವಿತ್ತರು.

bwf 1

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...