ಮಾಸ್ಕ್‌ ಬಳಸಿ ನಂಬರ್ ಪ್ಲೇಟ್‌ ಮರೆಮಾಚಬಹುದು; ಆದರೂ, ಪೊಲೀಸರು ನಿಮ್ಮನ್ನು ಹಿಡಿಯುತ್ತಾರೆ

Date:

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಯನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ನಾನಾ ರೀತಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅದಾಗ್ಯೂ, ತಮ್ಮ ವಾಹನಗಳ ನಂಬರ್‌ ಪ್ಲೇಟ್‌ಗಳನ್ನು ಮರೆಮಾಚಿಕೊಂಡು, ನಿಯಮ ಉಲ್ಲಂಘಿಸುವವರು ಹೆಚ್ಚುತ್ತಿದ್ದು, ಅವರನ್ನು ಪತ್ತೆ ಹಚ್ಚಲು ಇದೀಗ ವಿಶೇಷ ಕಾರ್ಯಾಚರಣೆಯನ್ನು ಪೊಲೀಸರು ಆರಂಭಿಸಿದ್ದಾರೆ.

ಬೆಂಗಳೂರಿನ ಯುವಕರು ದ್ವಿಚಕ್ರವಾಹನ ಮತ್ತು ಸ್ಕೂಟರ್‌ಗಳಲ್ಲಿ ನಂಬರ್ ಪ್ಲೇಟ್ ಇಲ್ಲದೆ ಬೈಕ್ ಸವಾರಿ ಮಾಡುವುದು, ಸಾರ್ವಜನಿಕ ವಾಹನಗಳಿಗೆ ಅಡ್ಡಿಪಡಿಸುವುದು ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಮೂಲಕ ಅಜಾಗರುಕವಾಗಿ ವರ್ತಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆಲವೊಬ್ಬ ಅವರ ಹುಚ್ಚಾಟಕ್ಕೆ ಅಡ್ಡಿ ಬರುವ ಸಾರ್ವಜನಿಕರನ್ನು ಅವಾಚ್ಯವಾಗಿ ನಿಂದಿಸಿ ಆರೋಪಿಗಳು ಪರಾರಿಯಾಗುತ್ತಾರೆ. ದುಷ್ಕರ್ಮಿಗಳ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಮತ್ತು ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ದೂರುಗಳನ್ನು ದಾಖಲಿಸುತ್ತಿದ್ದಾರೆ. ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪೊಲೀಸ್ ಇನ್ಸ್‌ಪೆಕ್ಟರ್ ಮೇಲ್ವಿಚಾರಣೆಯಲ್ಲಿ ತಂಡಗಳನ್ನು ರಚಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತಹ ಒಂದು ನಿದರ್ಶನದಲ್ಲಿ ಜುಲೈ 18ರಂದು ಸಂಜೆ 4:30ಕ್ಕೆ, ಇಬ್ಬರು ಯುವಕರು ಬೈಕ್‌ನಲ್ಲಿ ಸಾರ್ವಜನಿಕ ವಾಹನಗಳಿಗೆ ಅಡ್ಡಿಪಡಿಸುವುದು, ರಸ್ತೆ ನಿಮಯಗಳನ್ನು ಅನುಸರಿಸದಿರುವುದು ಕಂಡುಬಂದಿದೆ. ಅವರನ್ನು ಪೊಲೀಸರು ಹಿಡಿದು ಠಾಣೆಗೆ ಕರೆತಂದಿದ್ದಾರೆ. ಸವಾರನ ವಿರುದ್ಧ ಕ್ರಮ ಕೈಗೊಂಡು ದಂಡ ವಿಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ವಾಹನಗಳಲ್ಲಿ ಅಳವಡಿಸಲಾಗಿರುವ ಡ್ಯಾಶ್ ಕ್ಯಾಮೆರಾಗಳು ಮತ್ತು ಮೊಬೈಲ್ ಫೋನ್ ಕ್ಯಾಮೆರಾಗಳನ್ನು ಬಳಸಿಕೊಂಡು ವೀಡಿಯೊಗಳನ್ನು ಸೆರೆಹಿಡಿಯುವ ಮೂಲಕ ಸಂಚಾರ ನಿಯಮ ಉಲ್ಲಂಘಿಸುವವರನ್ನು ಹಿಡಿಯಲು ಮತ್ತು ದಂಡ ವಿಧಿಸಲು ಪೊಲೀಸರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...