ಉಡುಪಿ | “Abilities Beyond Disabilities” ನೂರ್ ಉಲ್ ಫುರ್ಖಾನ್ ವಿಶೇಷ ಶಾಲೆಯ ವಾರ್ಷಿಕೋತ್ಸವ

Date:

ಉಡುಪಿಯ ನೇಜಾರಿನಲ್ಲಿರುವ ನೂರುಲ್ ಫುರ್ಖಾನ್ ಟ್ರಸ್ಟ್‌ನಡಿ ಕಾರ್ಯನಿರ್ವಹಿಸುತ್ತಿರುವ ನೂರ್ ಉಲ್ ಫುರ್ಖಾನ್ ವಿಶೇಷ ಮಕ್ಕಳ ಶಾಲೆಯ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ “Abilities Beyond Disabilities” ಎಂಬ ಘೋಷವಾಕ್ಯದೊಂದಿಗೆ ನೇಜಾರಿನ ಶಕುಂತಲಾ ವಾದಿರಾಜ ರಾವ್ ಸಭಾ ಭವನದಲ್ಲಿ ನಡೆಯಿತು.

1009590483

ಶಾಲೆಯ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ದಿಲ್‌ದಾರ್ ಫಝುಲುರೆಹ್ಮಾನ್ ಅವರು ಸ್ವಾಗತ ಭಾಷಣ ಹಾಗೂ ವಾರ್ಷಿಕ ವರದಿ ಮಂಡಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ವಿಶೇಷ ಅಗತ್ಯವಿರುವ ಮಕ್ಕಳ ಪ್ರತಿಭೆ, ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವನ್ನು ಸಮಾಜದ ಮುಂದಿಡುವ ಉದ್ದೇಶದಿಂದ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು. “ವೈಕಲ್ಯಕ್ಕಿಂತ ಸಾಮರ್ಥ್ಯ ಮಹತ್ತರ” ಎಂಬ ಸಂದೇಶವನ್ನು ಸಾರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಕಲಾ ಪ್ರದರ್ಶನಗಳು ಮೆಚ್ಚುಗೆಗೆ ಪಾತ್ರವಾಯಿತು.

1009590482

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ವಿಶೇಷ ಮಕ್ಕಳ ಬೆಳವಣಿಗೆ ಕೇವಲ ಪೋಷಕರ ಹೊಣೆಗಾರಿಕೆಯಾಗಿಲ್ಲ, ಸರ್ಕಾರದ ಜವಾಬ್ದಾರಿಯೂ ಆಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಸಂಬಂಧಿತ ಇಲಾಖೆಗಳೊಂದಿಗೆ ಚರ್ಚಿಸಿ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ರತ್ನ ಸುವರ್ಣ ಮಾತನಾಡಿ, ಸೇವಾ ಮನೋಭಾವ ಇದ್ದರೆ ಮಾತ್ರ ವಿಶೇಷ ಶಾಲೆಗಳನ್ನು ಯಶಸ್ವಿಯಾಗಿ ನಡೆಸಲು ಸಾಧ್ಯ ಎಂದು ಹೇಳಿದರು. ನೂರ್ ಉಲ್ ಫುರ್ಖಾನ್ ಸಂಸ್ಥೆಯು ಉತ್ತಮ ಕೊಡುಗೆ ನೀಡುತ್ತಿದೆ. ಮಕ್ಕಳಿಗೆ ಸೂಕ್ತ ತರಬೇತಿ ನೀಡಿದರೆ ಅವರು ಇತರೆ ಮಕ್ಕಳಂತೆ ಬೆಳೆಯಲು ಸಾಧ್ಯವಿದೆ ಎಂದು ಹೇಳಿದರು.

1009590480

ವಿಶೇಷ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್. ರವೀಂದ್ರ, ಯೂನಿಯನ್ ಬ್ಯಾಂಕ್ ಉಡುಪಿ ಉಪ ವ್ಯವಸ್ಥಾಪಕ ಶ್ರೀ ವಿಜಯ್ ಮಥಾಯಸ್, ನ್ಯಾಯವಾದಿ ಮೊಹಮ್ಮದ್ ಸುಹಾನ್, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ರಿಚರ್ಡ್ ಜೀವನ್ ಮೊರಾಸ್, ಪಾಂಬೂರು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರದ ಕಾರ್ಯದರ್ಶಿ ಡಾ. ಜೆರಾಲ್ಡ್ ಪಿಂಟೋ, ಲಯನ್ಸ್ ಕ್ಲಬ್ ಪ್ರಕೃತಿ ಅಧ್ಯಕ್ಷ ಬಿ. ಗಿರೀಶ್ ಐತಾಳ್, ಟ್ರಸ್ಟ್ ನ ಉಪಾಧ್ಯಕ್ಷ ಇಕ್ಬಾಲ್ ಮನ್ನಾ ಹಾಗೂ ಸಲಹಾ ಸಮಿತಿ ಸದಸ್ಯ ಜುನೈದ್ ಅಸ್ಸಾದಿ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

1009589982

ಶಾಲೆಯ ಸಹ-ಸಂಸ್ಥಾಪಕರಾದ ಫಝುಲುರೆಹ್ಮಾನ್ ಅವರು ಭವಿಷ್ಯದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕೌಸರ್ ಟೀಚರ್ ನಿರೂಪಿಸಿದರು. ಸಲಹಾ ಸಮಿತಿ ಸದಸ್ಯರಾದ ಶೀರೀನ್ ಅಬ್ದುಲ್ ಲತೀಫ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...