ಕೋಲಾರ: ರಾಜ್ಯ ಸರ್ಕಾರವು ಜನವರಿ 23 ರಂದು ಪ್ರಕಟಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಕರಡು ನಿಯಮಾವಳಿಗೆ ಸಿಐಟಿಯು ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಕಾರ್ಮಿಕ ಸಂಘಟನೆಗಳಿಂದ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಮೂಲಕ ಆಯುಕ್ತರಿಗೆ ಆಕ್ಷೇಪಣೆಗಳನ್ನು ಸಲ್ಲಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ
ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕಾರ್ಯಸ್ಥಳ ಪರಿಸ್ಥಿತಿಗಳ ಸಂಹಿತೆ ಕೈಗಾರಿಕಾ ಸಂಬಂಧಗಳ ಸಂಹಿತೆ ವೇತನ ಸಂಹಿತೆ ಸಾಮಾಜಿಕ ಭದ್ರತೆ ಸಂಹಿತೆ ಸೇರಿದಂತೆ ಕಾರ್ಮಿಕ ಸಂಹಿತೆಗಳು ದೇಶದ ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆಗೆ ವಿರುದ್ದವಾಗಿದೆ ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರವು ಅನಗತ್ಯವಾಗಿ ಮೂಗು ತೂರಿಸಲು ಅವಕಾಶ ಕಲ್ಪಿಸುತ್ತದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಕಾರ್ಮಿಕ ಸಂಹಿತೆಗಳ ಜಾರಿ ಮಾಡುವಂತೆ ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿಯದೇ ಕೇರಳ ಸರ್ಕಾರ ಸರ್ಕಾರವು ಹಲವು ತಜ್ಞರನ್ನು ಒಳಗೊಂಡ ಲೇಬರ್ ಕಾಯ್ದೆ ವರದಿ ನಡೆಸಿದೆ ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡುವುದಿಲ್ಲ ಎಂದು ಘೋಷಿಸಿದೆ ಅಲ್ಲದೇ ಇವುಗಳಿಗೆ ಪರ್ಯಾಯ ಏನು ಮಾಡಬೇಕು ಎನ್ನುವುದರ ಕುರಿತು ತಜ್ಞರ ಸಮಿತಿಯನ್ನು ರಚಿಸಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಸಂಹಿತೆಗಳನ್ನು ತಿರಸ್ಕರಿಸಿ ಕಾರ್ಮಿಕರನ್ನು ರಕ್ಷಣೆ ಮಾಡುವ ಕಾನೂನುಗಳನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕ ಸಂಹಿತೆಗಳು ಮತ್ತು ಈ ಕುರಿತ ಕರಡು ನಿಯಮಾವಳಿಗಳನ್ನು ಕನ್ನಡದಲ್ಲಿ ಪ್ರಕಟಿಸದೇ ಇರುವುದು ಖಂಡನೀಯ ಕೂಡಲೇ ಕನ್ನಡದಲ್ಲಿ ಪ್ರಕಟಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಉಪಾಧ್ಯಕ್ಷ ಎ.ಆರ್.ಬಾಬು ಮಾತನಾಡಿ ಕಾರ್ಮಿಕರನ್ನು ತೀವ್ರ ರೀತಿಯಲ್ಲಿ ಶೋಷಣೆ ಮಾಡಲು ಅವಕಾಶ ಕಲ್ಪಿಸುವ ಕಾರ್ಮಿಕ ಸಂಹಿತೆಗಳನ್ನು ವಾಪಸು ಪಡೆಯಬೇಕು ಇವುಗಳನ್ನು ಜಾರಿ ಮಾಡಲು ಪ್ರಯತ್ನಿಸಿದರೇ ತೀವ್ರ ರೀತಿಯ ಹೋರಾಟಗಳನ್ನು ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಿಐಟಿಯು ಅಂಗನವಾಡಿ ನೌಕರರ ಸಂಘ ಗ್ರಾಮ ಪಂಚಾಯಿತಿ ನೌಕರರ ಸಂಘ ಕಟ್ಟಡ ಕಾರ್ಮಿಕರ ಸಂಘ ಪೌಲರ್ ಕಾರ್ಮಿಕರ ಸಂಘ, ಮಿಟ್ಸುಬಿಷಿ ಕಾರ್ಮಿಕರ ಸಂಘ, ವಿಎಸ್‌ಟಿ ಕಾರ್ಮಿಕರ ಸಂಘ, ಬೆಮೆಲ್‌ನ ಹೊರ ಗುತ್ತಿಗೆ ಕಾರ್ಮಿಕರ ಸಂಘಗಳು, ಸ್ಕಾನಿಯಾ ಕಾರ್ಮಿಕರ ಸಂಘ ಐಟಿಸಿ ಕಾರ್ಮಿಕರ ಸಂಘಗಳು ಆಕ್ಷೇಪಣೆಗಳನ್ನು ಸಲ್ಲಿಸಿದವು.
ಇದನ್ನು ಓದಿದ್ದೀರಾ..?25000 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಐತಿಹಾಸಿಕ ಕ್ಷಣಕ್ಕೆ ಪಾತ್ರವಾದ ಚಿಕ್ಕಬಳ್ಳಾಪುರ
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ.ಕೃಷ್ಣಪ್ಪ, ಉಪಾಧ್ಯಕ್ಷ ತಂಗರಾಜ್, ಕಾರ್ಯದರ್ಶಿ ಎಂ.ಭೀಮರಾಜ್, ಶಿವಾನಂದ್, ವೀರಭದ್ರ, ಅಮರನಾರಾಯಣ, ಬಿ.ಎಲ್.ಕೇಶವರಾವ್, ಲಿಯೋ ರಾಜ, ಸುಜಾತ, ವಸಂತ, ಶಿವಕುಮಾರ್, ದಿವಾಕರ್, ವಿ.ಹರೀಶ್, ವೇಣುಗೋಪಾಲ್, ಮಲ್ಲಿಕಾರ್ಜುನ್ ಮುಂತಾದವರು ಇದ್ದರು.





