ಸಾಗರ | ಆರ್‌ಎಸ್‌ಎಸ್‌ ಮುಖಂಡ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಆರೋಪಿ ಪರಾರಿ

Date:

ಶಿವಮೊಗ್ಗ ಜಿಲ್ಲೆಯ ಸಾಗರದ ವರದಹಳ್ಳಿ ರಸ್ತೆಯಲ್ಲಿರುವ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ವಿರುದ್ಧ ಮತ್ತೊಂದು ಪೋಕ್ಸೊ ಕಾಯ್ದೆಯ ಜತೆಗೆ ದಲಿತ ದೌರ್ಜನ್ಯ ಪ್ರಕರಣವನ್ನು ದಾಖಲಿಸಲಾಗಿದೆ.

ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ದಲಿತ ಸಮುದಾಯಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಪೋಕ್ಸೊ ಜತೆಗೆ ಅಟ್ರಾಸಿಟಿ ಪ್ರಕರಣವನ್ನೂ ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಬುಧವಾರ ದಾಖಲಿಸಲಾಗಿದೆ.

ಬೆಂಗಳೂರು ಮೂಲದ ವಿದ್ಯಾರ್ಥಿನಿ ವನಶ್ರೀ ವಸತಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ನಾಲ್ಕು ತಿಂಗಳಿಂದ ಶಾಲೆಯ ಮುಖ್ಯಸ್ಥ ಮಂಜಪ್ಪ ವಿದ್ಯಾರ್ಥಿನಿಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
vanashree

ವಿದ್ಯಾರ್ಥಿನಿ ಪೋಷಕರೊಂದಿಗೆ ಸಾಗರ ಗ್ರಾಮಾಂತರ ಠಾಣೆಗೆ ಬುಧವಾರ ಭೇಟಿ ನೀಡಿ ದೂರು ದಾಖಲಿಸಿದ್ದಾಳೆ. ಸ್ಥಳಕ್ಕೆ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅಧಿಕಾರಿ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ,ಪರಿಶೀಲಿಸಿದ್ದಾರೆ ನಡೆಸಿದ್ದಾರೆ. ಆರೋಪಿ ಮಂಜಪ್ಪ ಸದ್ಯ ನಾಪತ್ತೆಯಾಗಿದ್ದು, ಪೋಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ಶಿವಮೊಗ್ಗ | ‘ಚಕ್ರಾ–ಸಾವೇಹಕ್ಲು’ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ ನೀಡಿ: ಹೋರಾಟಗಾರರ ಆಗ್ರಹ

ಕಳೆದ ವರ್ಷ ಜೂನ್‌ ಮೊದಲ ವಾರದಲ್ಲಿ ವಸತಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ತೇಜಸ್ವಿನಿ ಎಂಬಾಕೆ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಳು. ಆಕೆಗೆ ಭಾರೀ ಪ್ರಮಾಣದಲ್ಲಿ ನೀರು ಕುಡಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿ ಬಾಲಕಿಯ ಸಹಪಾಠಿಗಳು ಆರೋಪಿಸಿದ್ದರು. ಆ ಬಳಿಕ ಈ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.

ವನಶ್ರೀ ಮಂಜಪ್ಪ ಎಂದೇ ಹೆಸರಾಗಿರುವ ಎಚ್ ಪಿ ಮಂಜಪ್ಪ ಆರ್‌ಎಸ್‌ಎಸ್‌ ನಂಟು ಹೊಂದಿದ್ದು, ಬಹಳ ವರ್ಷಗಳಿಂದಲೂ ಮಕ್ಕಳನ್ನು ಮತ್ತು ವಸತಿ ಶಾಲೆಯಲ್ಲಿ ಕೆಲಸಕ್ಕೆ ಸೇರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...