ಕಲಬುರಗಿ | ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ, ಚಳಿ ಬಿಡಿಸಬೇಕಿದೆ : ಶಾಸಕ ಬಿ.ಆರ್.ಪಾಟೀಲ್

Date:

ಕಲಬುರಗಿ ಜಿಲ್ಲೆಯ ಅಧಿಕಾರಿಗಳು ಮಾತು ಕೇಳುತ್ತಿಲ್ಲ ಕೊಬ್ಬು ಜಾಸ್ತಿಯಾಗಿದೆ, ಚಳಿ ಬಿಡಿಸಬೇಕಾಗಿದೆ. ಇಲ್ಲದಿದ್ದರೆ ನಮ್ಮ ಮಾತು ಕೇಳೋದಿಲ್ಲ ಎಂದು ಮುಖ್ಯಮಂತ್ರಿ ಸಲಹೆಗಾರ, ಆಳಂದ ಶಾಸಕ ಬಿ.ಆರ್‌.ಪಾಟೀಲ್‌ ಅಸಮಧಾನ ಹೊರಹಾಕಿದರು.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ʼಯಾವ ಅಧಿಕಾರಿಯೂ ನಮ್ಮ ಮಾತು ಕೇಳುತ್ತಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಮೂಲಭೂತ ಸೌಕರ್ಯಗಳಿಗಾಗಿ ಜನರು ಪರದಾಡುತ್ತಿದ್ದಾರೆ. ಆದರೆ, ಪಾಲಿಕೆ ಕಮಿಷನರ್ ಸೇರಿದಂತೆ ಯಾವ ಅಧಿಕಾರಿಯೂ ಜನರ ಸಮಸ್ಯೆಗಳು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಇವರೆಲ್ಲರೂ ಕೊಬ್ಬಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಜಿಲ್ಲಾ ಪಂಚಾಯತ್ ಸಿಇಓ, ಪಾಲಿಕೆ ಆಯುಕ್ತ ಮಾತೇ ಕೇಳುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದೆಲ್ಲವನ್ನು ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಮುಂದೆ ನಾವು ಮಕ್ಕಳಂತೆ ದೂರು ನೀಡಬೇಕಾಗಿದೆ. ಇದು ಸರಿಯೇʼ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ್ ಅವರನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಿ ಬೇರೆಡೆ ವರ್ಗಾಯಿಸಬೇಕು. ಅವರ ಅವಧಿಯಲ್ಲಿನ ಕಾಮಗಾರಿಗಳ ಕುರಿತು ಸಂಪೂರ್ಣ ವಿವರ ಪಡೆದು ಆಗಿರುವ ನಷ್ಟಕ್ಕೆ ಅವರ ವೇತನದಲ್ಲಿ ವಸೂಲಿ ಮಾಡಬೇಕು ಎಂದು ಮಹಾಪೌರರು ಮನವಿ ಮಾಡಿದ್ದು, ಶೀಘ್ರ ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆʼ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭಾರೀ ಮಳೆಗೆ ಏಕಾಏಕಿ ಕುಸಿದ ಮನೆ; ಮಣ್ಣಿನಡಿ ಸಿಲುಕಿದ್ದ ಮ್ಯಾರಥಾನ್‌ ಓಟಗಾರನ ರಕ್ಷಣೆ

ಕೆಲವು ಕಾಮಗಾರಿ ಕಳಪೆಯಾದಾಗ ಅಧಿಕಾರಿ ಕರೆದು ಬಿಲ್ ಮಾಡಬೇಡಿ ಅಂದ್ರು ಮಾಡಿ ಕಳಿಸಿದ್ದಾರೆ. ಅದಕ್ಕೆ ಪಾಲಿಕೆ ಉಪ ಆಯುಕ್ತ ಆರ್.ಪಿ.ಜಾಧವ್‌ ಅವರನ್ನು ಕೂಡಲೇ ಕಿತ್ತು ಹಾಕಬೇಕು. ಈ ಮನುಷ್ಯ ಎಲ್ಲ ಸರ್ಕಾರದಲ್ಲಿ ಇರುತ್ತಾನೆ. ಹೇಗೆ ಇವರೆಲ್ಲ ಒಂದೇ ಸ್ಥಳದಲ್ಲಿ 20 ವರ್ಷ ಕೆಲಸ ಮಾಡುತ್ತಾರೆ’ ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...