ಕೋಲಾರ: ಪಡಿತರ ಪಡೆಯಬೇಕಾದರೆ ನ್ಯಾಯಬೆಲೆ ಅಂಗಡಿಯಲ್ಲಿ ಫಲಾನುಭವಿಗಳು 10 ರುಪಾಯಿ ಕೊಟ್ಟು ಹೆಬ್ಬೆಟ್ಟಿನ ಗುರುತು ನೀಡಬೇಕು ಜೊತೆಗೆ ಒಂದೆರಡು ಕೆ.ಜಿ ಅಕ್ಕಿ ಕಡಿತಗೊಳಿಸುವ ದೂರುಗಳು ಬಂದಿವೆ. ಅಂತಹ ಪ್ರಕರಣಗಳು ಮರುಕಳಿಸಬಾರದು ಮತ್ತೆ ದೂರು ಬಂದರೆ ಅಂತಹ ನ್ಯಾಯಬೆಲೆ ಅಂಗಂಡಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚನೆ ನೀಡಿದರು.
ನಗರದ ತಾಪಂ ಸಭಾಂಗಣದಲ್ಲಿ ಶನಿವಾರ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಪ್ರತಿಯೊಂದು ನ್ಯಾಯಬೆಲೆ ಅಂಗಂಡಿಗಳ ಮುಂದೆ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು ಯಾವುದೇ ಕಾರಣಕ್ಕೂ ಹಣ ಪಡೆಯಬಾರದು ಸಾರ್ವಜನಿಕರು ನೇರವಾಗಿ ಕಛೇರಿಗೆ ದೂರು ನೀಡಬಹುದು ಮುಂದಿನ ದಿನಗಳಲ್ಲಿ ಎಲ್ಲಾ ಸೊಸೈಟಿಗಳ ಸಭೆ ಕರೆದು ಅವರ ಮೂಲಕ ಸೂಚನೆ ಸಹ ನೀಡಬೇಕು ಕೆಲವು ಕಡೆಯಲ್ಲಿ ಅಕ್ಕಿ ಪಡೆದು ಮಾರಾಟ ಮಾಡಿದ ಪ್ರಕರಣಗಳು ಇವೆ ಅಂತಹ ಫಲಾನುಭವಿಗಳನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಬೇಕು ಎಂದು ತಿಳಿಸಿದರು.
ಸರ್ಕಾರದ ಮಹತ್ವಾಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬರಿಗೆ ತಲುಪಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಯಾವುದೇ ಕಾರಣಕ್ಕೂ ಲೋಪಗಳು ಆಗದಂತೆ ನೋಡಿಕೊಳ್ಳಬೇಕು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯವನ್ನು ನಿರ್ವಹಿಸಬೇಕು ಆಗ ಮಾತ್ರ ಸರ್ಕಾರಕ್ಕೆ ಹಾಗೂ ಸಮಿತಿಗೆ ಗೌರವ ಸಿಗುತ್ತದೆ ಎಂದು ಹೇಳಿದರು.
ವೇಮಗಲ್ ಭಾಗದಿಂದ ಬೆಂಗಳೂರಿಗೆ ನೇರವಾಗಿ ಹೋಗಲು ಬೆಳಗ್ಗೆ8 ಗಂಟೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ ನರಸಾಪುರ ಮಾರ್ಗದಲ್ಲಿ ಹೊಸಕೋಟೆ ಯಿಂದ ಬೆಂಗಳೂರಿಗೆ ಹೋಗಲಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಫೆ ೬ ರಂದು ನಡೆಯಲಿದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸುವಂತೆ ಪ್ರತಿ ಪಂಚಾಯತಿ ಮಟ್ಟದಲ್ಲಿ ಗಮನ ಹರಿಸಬೇಕು ಜೊತೆಗೆ ಮುಂದಿನ ದಿನಗಳಲ್ಲಿ ಪ್ರತಿಯೊಂದು ಯೋಜನೆಗಳಿಗೆ ಸಂಬಂಧಿಸಿದಂತೆ ತಾಲೂಕು ಸಮಾವೇಶವನ್ನು ನಡೆಸಲು ಪೂರ್ವ ತಯಾರಿ ನಡೆಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನು ಓದಿದ್ದೀರಾ..? ವಿ.ಬಿ.ಜಿ ರಾಮ್ ಜಿ ಯೋಜನೆ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಪಾಲಿಗೆ ಮರಣ ಶಾಸನ : ಡಾ.ಅನಿಲ್ ಕುಮಾರ್
ಈ ಸಭೆಯಲ್ಲಿ ತಾಪಂ ಇಒ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಸೇರಿದಂತೆ ಸಮಿತಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.





